ಸಮಗ್ರ ನ್ಯೂಸ್: ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಆಗಿದ್ದು, ಪ್ರತಿ ಹೋಬಳಿಗೂ ವಸತಿ ಶಾಲೆ ಕಡ್ಡಾಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹಿಂದಿನ ಬಜೆಟ್‌ನಲ್ಲಿ ಘೋಷಿಸಿದ್ದು, ಈಗಾಗಲೇ ಅನುಮೋದನೆ ದೊರೆತಿರುವ 20 ಹೋಬಳಿಗಳಲ್ಲಿ ಈ ವರ್ಷ ವಸತಿ ಶಾಲೆಗಳನ್ನು ಆರಂಭಿಸಲಾಗುವುದು ಎಂದರು.
ಹಂತ ಹಂತವಾಗಿ ಎಲ್ಲ ಹೋಬಳಿಗಳಲ್ಲಿ ವಸತಿ ಶಾಲೆಗಳು ಬರಲಿವೆ. ಸರ್ಕಾರಿ ಶಾಲೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಬೇಕು. ಅವರನ್ನು ಪ್ರೋತ್ಸಾಹಿಸಲು ಪ್ರೋತ್ಸಾಹಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಡಿ 833, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 113 ವಸತಿ ಶಾಲೆಗಳಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಾಗಲಿದೆ ಎಂದು ತಿಳಿಸಿದರು.