Ad Widget .

ಎನ್ಆರ್ ಪುರ: ಭದ್ರಾ ಹಿನ್ನೀರಿನಲ್ಲಿ ತೆಪ್ಪ‌ ಮುಳುಗಿ ಮೂವರು ಸಾವು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಭದ್ರಾ ಜಲಾಶಯದ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಶಿವಮೊಗ್ಗದ ಮೂವರು ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗದ ವಿದ್ಯಾನಗರ ಬಡಾವಣೆಯ ಅದಾಖಾನ್‌ (23), ಆದಿಲ್‌ (19) ಹಾಗೂ ಸಾಜೀದ್‌(24) ಮೃತ ದುರ್ದೈವಿಗಳು ಎನ್ನಲಾಗಿದೆ.

Ad Widget . Ad Widget .

ಮಾರಿದಿಬ್ಬ ಬಳಿಯಿಂದ ಹಿನ್ನೀರಿನ ವಿಹಂಗಮ ನೋಟ ಸವಿಯಲು ನಾಲ್ವರು ಯುವಕರು ಒಟ್ಟಿಗೆ ಬಂದಿದ್ದರು. ಇವರ ಪೈಕಿ ಒಬ್ಬರು ದಡದಲ್ಲಿ ಕುಳಿತಿದ್ದರು. ಉಳಿದ ಮೂವರು ಬದಿಯಲ್ಲಿದ್ದ ತೆಪ್ಪ ತೆಗೆದುಕೊಂಡು ಹಿನ್ನೀರಿನೊಳಗೆ ಸ್ವಲ್ಪ ದೂರ ತೆರಳಿದ್ದಾರೆ. ಚಾಲನೆ ಗೊತ್ತಿಲ್ಲದಿದ್ದರಿಂದ ನಿಯಂತ್ರಣ ತಪ್ಪಿ ತೆಪ್ಪ ಪಲ್ಟಿಯಾಗಿ ಮೂವರು ನೀರಿನಲ್ಲಿ ಮುಳುಗಿದ್ದಾರೆ.

Ad Widget . Ad Widget .

ಪ್ರಾಥಮಿಕ ಮಾಹಿತಿ ಪ್ರಕಾರ, ತೆಪ್ಪದ ಮಾಲೀಕ ಕೂಡ ಸ್ಥಳದಲ್ಲಿ ಇರಲಿಲ್ಲ ಎನ್ನಲಾಗಿದೆ. ಮೃತದೇಹಗಳ ಪತ್ತೆಗೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ನಡೆಸಿದ್ದು, ಮೂವರ ಶವಗಳು ಪತ್ತೆಯಾಗಿವೆ.

ಮೃತದೇಹಗಳನ್ನು ಎನ್ಆರ್ ಪುರ ತಾಲೂಕು ಅಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ‌ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *