Ad Widget .

ಪ್ರಜ್ವಲ್ ರೇವಣ್ಣ ಬಳಿಕ ಸೂರಜ್ ಮೇಲೂ ಲೈಂಗಿಕ ಆರೋಪ| ಯುವಕನ ಮೇಲೆ ಅಸಹಜ‌ ಕಾಮಕೇಳಿ ನಡೆಸಿದ್ರಂತೆ ಎಂಎಲ್ ಸಿ ಸೂರಜ್ ರೇವಣ್ಣ!!

ಸಮಗ್ರ ನ್ಯೂಸ್: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಭಾರೀ ಸದ್ದು ಮಾಡಿದ್ದು, ದೇಶ-ವಿದೇಶ ಮಾಧ್ಯಮಗಳಲ್ಲೂ ಸುದ್ದಿಯಾಗಿದೆ. ತಮ್ಮ ಪಕ್ಷದ ಕಾರ್ಯಕರ್ತೆಯರು, ಸರ್ಕಾರಿ ಮಹಿಳಾ ಅಧಿಕಾರಿಗಳು, ಜೆಡಿಎಸ್​ ಮುಖಂಡರ ಹೆಂಡತಿಯರನ್ನು ಪ್ರಜ್ವಲ್​ ಲೈಂಗಿಕವಾಗಿ ಬಳಿಸಿಕೊಂಡಿರುವ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

Ad Widget . Ad Widget .

ಇದರ ಬೆನ್ನಲ್ಲೇ ಇದೀಗ ಪ್ರಜ್ವಲ್ ಅಣ್ಣ ವಿಧಾನಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ವಿರುದ್ಧವೂ ಸಹ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಅರಕಲಗೂಡು ಜೆಡಿಎಸ್​ ಕಾರ್ಯಕರ್ತನ ಮೇಲೆ ಸೂರಜ್​ ರೇವಣ್ಣ, ತಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಲಕ್ಷಣ ಆರೋಪದಿಂದ ರೇವಣ್ಣ ಕುಟುಂಬ ಮತ್ತೆ ಮುಜುಗರಕ್ಕೀಡಾದಂತಾಗಿದೆ.

Ad Widget . Ad Widget .

ಸೂರಜ್ ರೇವಣ್ಣ ಅವರು ಜೂನ್ 16ರ ರಾತ್ರಿ ತಮ್ಮ ಪಕ್ಷದ ಕಾರ್ಯಕರ್ತನನ್ನು ಸಹಾಯ ಮಾಡುವುದಾಗಿ ಚನ್ನಪಟ್ಟಣ ತಾಲ್ಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಯಿಸಿಕೊಂಡು ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿದೆ. ಬಲವಂತವಾಗಿ ತನ್ನ ಮೇಲೆ ದೌರ್ಜನ್ಯ ನಡೆಸಿರುವ ಬಗ್ಗೆ ಜೆಡಿಎಸ್​ ಕಾರ್ಯಕರ್ತ, ಸಿಎಂ, ಗೃಹ ಸಚಿವರು, ಡಿಜಿ ಮತ್ತು ಐಜಿಪಿ ಮತ್ತು ಹಾಸನ ಎಸ್ಪಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮಾಹಿತಿ ಪ್ರಕಾರ ಸಂತ್ರಸ್ತ ಯುವಕ ಸಿಎಂ, ಗೃಹ ಸಚಿವ ಹಾಗೂ ಡಿಜಿ ಮತ್ತು ಐಜಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದ್ದು, ಈ ಪ್ರಕರಣ ಮುಂದೆ ಯಾವ ಹಂತಕ್ಕೆ ಹೋಗಲಿದೆ ಎಂದು ಕಾದುನೋಡಬೇಕಿದೆ.

Leave a Comment

Your email address will not be published. Required fields are marked *