Ad Widget .

ಯುಜಿಸಿ ನೆಟ್ ಪರೀಕ್ಷೆ ರದ್ದು/ ಶೀಘ್ರದಲ್ಲೇ ಮರುಪರೀಕ್ಷೆ

ಸಮಗ್ರ ನ್ಯೂಸ್: ಯುಜಿಸಿ-ನೆಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಸಾಧ್ಯತೆ ಇರುವುದರಿಂದ ಅದನ್ನು ರದ್ದುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ.

Ad Widget . Ad Widget .

ಎನ್‌ಟಿಎ ಜೂನ್ 18 ರಂದು ನಡೆಸಿದ ಯುಜಿಸಿ- ನೆಟ್ ಪರೀಕ್ಷೆಯಲ್ಲಿ 9 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪರೀಕ್ಷೆಯ ಪಾರದರ್ಶಕತೆಗೆ ಧಕ್ಕೆಯುಂಟಾಗಿರಬಹುದೆಂಬ ಮಾಹಿತಿ ಲಭಿಸಿರುವ ಕಾರಣ ಪರೀಕ್ಷೆಯನ್ನು ರದ್ದುಗೊಳಿಸಲು ಸಚಿವಾಲಯ ನಿರ್ಧರಿಸಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಶಿಕ್ಷಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಗೋವಿಂದ್ ಜೈಸ್ವಾಲ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *