ಉಪ್ಪಿನಂಗಡಿ: ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಭಾರೀ ಅಗ್ನಿ ಅವಘಡ| ಹಲವು ಮಳಿಗೆಗಳು ಬೆಂಕಿಗಾಹುತಿ

ಸಮಗ್ರ ನ್ಯೂಸ್: ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಮುಖ್ಯ ಪೇಟೆಯಲ್ಲಿರುವ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿನ ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿರುವ ಮಾಹಿತಿ ಲಭಿಸಿದೆ.

Ad Widget ... ..

ನೂರಾರು ನಾಗರಿಕರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಬೆಂಕಿಯ ಕೆನ್ನಾಲಗೆಗೆ ಹಲವು ಅಂಗಡಿಗಳು ಆಹುತಿಯಾಗಿವೆ. ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಅಂಗಡಿಯವರು ಬೆಂಕಿಯನ್ನು ಆರಿಸಲು ಯತ್ನಿಸಿದರಾದರೂ ಅದಾಗಲೇ ಹಲವು ಅಂಗಡಿಗಳು ಬೆಂಕಿಗೆ ಆಹುತಿಯಾಗಿತ್ತು.

Ad Widget

ಬೆಂಕಿ ನಂದಿಸುವ ಕಾರ್ಯ ಬರದಿಂದ ನಡೆಯುತ್ತಿದ್ದು, ಇನ್ನೂ ಹತೋಟಿಗೆ ಬಂದಿಲ್ಲ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Leave a Comment

Your email address will not be published. Required fields are marked *