ಒಂದೇ ಮಳೆಗೆ ಬಿರುಕು ಬಿಟ್ಟ ನೂತನ ಅಟಲ್ ಸೇತುವೆ| ಬಹುಕೋಟಿ ವೆಚ್ಚದ ಸೇತುವೆ ಕಾಮಗಾರಿ ಕಳಪೆ

ಸಮಗ್ರ ನ್ಯೂಸ್: ವರ್ಷಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡಿದ್ದ ನವಿ ಮುಂಬೈನ ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವ ಸೇವಾ ಅಟಲ್ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ.

Ad Widget ... ..

ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಅವರು ಇಂದು ಸೇತುವೆಯಲ್ಲಿ ಕಾಣಿಸಿಕೊಂಡಿರುವ ಬಿರುಕುಗಳನ್ನು ಪರಿಶೀಲಿಸಲು ಭೇಟಿ ನೀಡಿದ್ದರು.

Ad Widget

ಅಟಲ್ ಬಿಹಾರಿ ವಾಜಪೇಯಿ ಸೇವ್ರಿ ನ್ಹವಾ ಶೇವಾ ಅಟಲ್ ಸೇತು, ಭಾರತದ ಅತಿ ಉದ್ದದ ಸಮುದ್ರ ಸೇತುವೆಯಾಗಿದೆ. 21.8 ಕಿಮೀ ಉದ್ದದ ಸೇತುವೆಯ 16.5 ಕಿಮೀ ಭಾಗ ಸಮುದ್ರದ ಮೇಲೆ ಇದೆ. ವರದಿಯ ಪ್ರಕಾರ ಈ ಸೇತುವೆಯಲ್ಲಿ ಪ್ರತಿದಿನ 70,000 ಕ್ಕೂ ಹೆಚ್ಚು ವಾಹನಗಳು ಸಂಚರಿಸುತ್ತವೆ.

ಇದೀಗ ಬಿರುಕು ಬಿಟ್ಟ ಸೇತುವೆಯನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಪಟೋಲೆ, ಈ ಬಿರುಕುಗಳು ಜನರ ಜೀವವನ್ನು ಅಪಾಯಕ್ಕೆ ತಳ್ಳುವಂತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *