ಸಮಗ್ರ ನ್ಯೂಸ್: ಮುಂಗಾರು ಚೇತರಿಕೆ ಕಾಣುವ ಲಕ್ಷಣ ಕಾಣುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯು ಜೂ.22 ಮತ್ತು 23ರಂದು ಕರಾವಳಿ ಭಾಗದಲ್ಲಿ “ರೆಡ್ ಅಲರ್ಟ್’ ಘೋಷಿಸಿದೆ.
ಮಂಗಳೂರು ನಗರ ಸಹಿತ ದ.ಕ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಲ್ಲಿ ಮಳೆಯ ತೀವ್ರತೆ ತುಸು ಕಡಿಮೆಯಾಗಿದ್ದು, ಮತ್ತೆ ಮಳೆ ಬಿರುಸು ಪಡೆಯುವ ಸಾಧ್ಯತೆ ಇದೆ.
“ರೆಡ್ ಅಲರ್ಟ್’ ಅವಧಿಯಲ್ಲಿ ಕರಾವಳಿ ಭಾಗದಲ್ಲಿ 204.5 ಮಿ.ಮೀ.ಗೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ಮತ್ತು ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವ ನಿರೀಕ್ಷೆ ಇದೆ. ಜೂ.24, ಜೂ.23 ಮತ್ತು 25 ರಂದು “ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.
ಜೂನ್ 25ರವರೆಗೆ ಬೆಳಗಾವಿ, ಧಾರವಾಡ, ಹಾವೇರಿ, ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದೆ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದೆ. ಹೀಗಾಗಿ ನಗರದಲ್ಲಿ ಕೆಲ ದಿನಗಳಿಂದ ಮಟ ಮಟ ಮಧ್ಯಾಹ್ನವೇ ಜೋರು ಮಳೆ ಆಗುತ್ತಿದೆ. ಅದೇ ರೀತಿಯಾಗಿ ಇಂದು ಕೂಡ ನಗರದ ಹಲವೆಡೆ ಭಾರೀ ಮಳೆ ಆಗಿದೆ. ಕಾರ್ಪೊರೇಷನ್, ಮೆಜೆಸ್ಟಿಕ್, ಕೆ.ಆರ್.ಸರ್ಕಲ್, ಶಾಂತಿನಗರ, ಮಡಿವಾಳ, ಪೀಣ್ಯ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಯಶವಂತಪುರ, ಮಲ್ಲಸಂದ್ರ ಸೇರಿ ಹಲವೆಡೆ ಭಾರೀ ಮಳೆ ಆಗಿದೆ.