ಸಮಗ್ರ ನ್ಯೂಸ್: ಸರಕು ಮತ್ತು ಸೇವಾ ತೆರಿಗೆ ಕೌನ್ಸಿಲ್ ಸಭೆಯು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆಯಿತು.
ಭಾರತೀಯ ರೈಲ್ವೆಯು ಸಾಮಾನ್ಯ ಜನರಿಗೆ ಒದಗಿಸುವ ಸೇವೆಗಳು, ಪ್ಲಾಟ್‌ಫಾರ್ಮ್ ಟಿಕೆಟ್‌ಗಳ ಮಾರಾಟ, ಕೊಠಡಿಗಳ ಸೌಲಭ್ಯ, ಕ್ಲೋಕ್‌ರೂಮ್ ಸೇವೆಗಳು ಹಾಗೂ ಬ್ಯಾಟರಿ ಚಾಲಿತ ಕಾರು ಸೇವೆಗಳಿಗೆ ಜಿಎಸ್‌ಟಿಯಿಂದ ವಿನಾಯಿತಿ ಘೋಷಿಸಲಾಯಿತು.
ಇದರ ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ಕೇಂದ್ರದ ಉದ್ದೇಶ ಸ್ಪಷ್ಟವಾಗಿದೆ. ಇಂಧನದ ಮೇಲಿನ ಜಿಎಸ್‌ಟಿ ದರವನ್ನು ನಿರ್ಧರಿಸಲು ರಾಜ್ಯಗಳಿಗೆ ಬಿಟ್ಟಿದೆ ಎಂದರು.
53ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ನಡೆಸಿದ ಸಚಿವೆ ಸೀತಾರಾಮನ್ ,ಪ್ರಮುಖ ನಿರ್ಧಾರಗಳ ಕುರಿತು ಮಾಹಿತಿ ನೀಡಿದರು.