ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಅಧಿಕಾರಕ್ಕೆ ಬಂದಿದ್ದು,
ಇದೀಗ 18ನೇ ಲೋಕಸಭೆಯ ಮೊದಲ ಸಂಸತ್ ವಿಶೇಷ ಅಧಿವೇಶನವು ಸೋಮವಾರದಿಂದ (ಜೂನ್ 24) ಆರಂಭವಾಗಲಿದೆ. ನರೇಂದ್ರ ಮೋದಿ ಅವರು ಸೇರಿ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲರೂ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ಭಾಷಣ ಮಾಡಲಿದ್ದಾರೆ. ನರೇಂದ್ರ ಮೋದಿ ಅವರು ಸೇರಿ ಎಲ್ಲರೂ ನೂತನ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹಾಗೆಯೇ, ನೂತನ ಸ್ಪೀಕರ್ ಆಯ್ಕೆಯ ಪ್ರಕ್ರಿಯೆಯೂ ನಡೆಯಲಿದೆ. ಸೋಮವಾರ ಬೆಳಗ್ಗೆ 11 ಗಂಟೆಗೆ ನರೇಂದ್ರ ಮೋದಿ ಹಾಗೂ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಂತರ ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಜೂನ್ 25ರಂದು 264 ಸದಸ್ಯರು ಪದಗ್ರಹಣ ಮಾಡಲಿದ್ದಾರೆ. ಜೂನ್ 24ರಿಂದ ಜುಲೈ 3ರವರೆಗೆ ಸಂಸತ್ ವಿಶೇಷ ಅಧಿವೇಶನ ನಡೆಯಲಿದೆ.