ಸಮಗ್ರ ನ್ಯೂಸ್: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸರ ವಶವಾಗಿದ್ದ ಜೆಡಿಎಸ್ ಪಕ್ಷದ ಎಂಎಲ್ಸಿ ಸೂರಜ್ ರೇವಣ್ಣ ಅವರಿಗೆ ಇದೀಗ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ 42ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.
ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಓರ್ವ ಯುವಕ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಎಸಗಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇದಕ್ಕೆ ಪ್ರತಿಯಾಗಿ ಸೂರಜ್ ರೇವಣ್ಣ ಅವರ ಆಪ್ತ ಸಹಾಯಕ ಕೂಡ ದೂರು ನೀಡಿದ್ದರು. ದೂರನ್ನು ಪರಿಶೀಲಿಸಿದ ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿ ತಮ್ಮ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಕೊಡುವಂತೆ ದೂರುದಾರರಿಗೆ ಸೂಚಿಸಿದ್ದರು.
ಬಂಧನ ಸಾಧ್ಯತೆಯ ನಿರೀಕ್ಷೆ ಮಾಡದೆ ಬಂದ ಸೂರಜ್ ರೇವಣ್ಣರನ್ನು ಪೊಲೀಸರು ಅರೆಸ್ಟ್ ಮಾಡಿ, ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ವಿಚಾರಣೆಗಳ ಬಳಿಕ ಸೂರಜ್ರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಎಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.