Ad Widget .

ರಾಜ್ಯದಲ್ಲಿ ಕೃತಕ ಬಣ್ಣ ಬಳಕೆ ನಿಷೇಧಿಸಿ ಆದೇಶ| ನಿಯಮ‌ ಉಲ್ಲಂಘಿಸಿದರೆ ಜೈಲು, ಭಾರೀ ದಂಡ ಪಕ್ಕಾ

ಸಮಗ್ರ ನ್ಯೂಸ್: ವೆಜ್ & ನಾನ್‌ವೆಜ್ ಕಬಾಬ್‍ ಮುಂತಾದ ಆಹಾರ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget . Ad Widget .

ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Ad Widget . Ad Widget .

ಕೃತಕ ಬಣ್ಣಗಳನ್ನು ಬಳಸಿರುವ ತಿಂಡಿ ತಿನಿಸುಗಳನ್ನು ದೀರ್ಘಕಾಲ ಬಳಸುವುದರಿಂದ ಚಿಕ್ಕಮಕ್ಕಳೂ ಸೇರಿದಂತೆ ಬಳಕೆದಾರರಿಗೆ ಕ್ಯಾನ್ಸರ್‍ನಂತಹ ಮಾರಕ ರೋಗಗಳಿಗೆ ತುತ್ತಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಸಾರ್ವಜನಿಕರು ಕೃತಕ ಬಣ್ಣಗಳನ್ನು ಬಳಸಿ ಉಪಯೋಗಿಸದಂತೆ/ಮಿತವಾಗಿ ಬಳಸುವಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಬಾಬ್ ಹಾಗೂ ಇನ್ನಿತರ ಕರಿದ ತಿಂಡಿಗಳಿಗೆ ಕೃತಕ ಬಣ್ಣಗಳನ್ನು ಬಳಕೆಯಾಗುತ್ತಿದ್ದು, ಫಲಿತಾಂಶದಲ್ಲಿ 08 ಮಾದರಿಗಳು ಸನ್‍ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಕೃತಕ ಬಣ್ಣಗಳು ಕಂಡು ಬಂದಿದ್ದು, ನಿಯಮಾನುಸಾರ ಇದು ಅಸುರಕ್ಷಿತವಾಗಿರುತ್ತವೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ.

Leave a Comment

Your email address will not be published. Required fields are marked *