Ad Widget .

ಟಿ-20 ವಿಶ್ವಕಪ್| ಸೆಮೀಸ್‌ ಗೆ ಲಗ್ಗೆ ಇಟ್ಟ‌ ಟೀಂ ಇಂಡಿಯಾ

ಸಮಗ್ರ ನ್ಯೂಸ್: ನಾಯಕ ರೋಹಿತ್ ಶರ್ಮಾ ಅವರ (92 ರನ್​, 41 ಎಸೆತ, 8 ಸಿಕ್ಸರ್, 7 ಫೋರ್​) ಪ್ರಚಂಡ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ ವಿರುದ್ಧದ ಸೂಪರ್ ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಅಮೋಘ ಗೆಲುವು ದಾಖಲಿಸಿ, ಸೆಮಿಪೈನಲ್​ಗೆ ಲಗ್ಗೆ ಇಟ್ಟಿದೆ.

Ad Widget . Ad Widget .

ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್‌ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು.

Ad Widget . Ad Widget .

ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 20 ಓವರ್​ಗಳಲ್ಲಿ ಅಂತಿಮವಾಗಿ 7 ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಇದೀಗ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್​ ತಂಡವನ್ನು ಎದುರಿಸಲಿದೆ.

Leave a Comment

Your email address will not be published. Required fields are marked *