Ad Widget .

ಲೋಕಸಭಾ ಸ್ಪೀಕರ್ ಹುದ್ದೆಗೆ ಮೊದಲ ಬಾರಿ‌ ನಡೆಯಲಿದೆ ಚುನಾವಣೆ| ನಾಮಪತ್ರ ಸಲ್ಲಿಸಿದ ಒಂ ಬಿರ್ಲಾ, ಕೆ.ಸುರೇಶ್

ಸಮಗ್ರ ನ್ಯೂಸ್: ಲೋಕಸಭೆ ಸ್ಪೀಕರ್ ಹುದ್ದೆಗೆ ವಿರೋಧ ಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಘೋಷಿಸಿವೆ. ಪ್ರತಿಪಕ್ಷಗಳ ಸ್ಪೀಕರ್ ಅಭ್ಯರ್ಥಿಯಾಗಿ ಕೆ.ಸುರೇಶ್ ಕಣಕ್ಕೆ ಇಳಿಯುತ್ತಿದ್ದಾರೆ. ಇದಕ್ಕಾಗಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಮತ್ತೊಂದೆಡೆ, ಎನ್‌ಡಿಎ ಪರವಾಗಿ ಓಂ ಬಿರ್ಲಾ ಲೋಕಸಭೆ ಸ್ಪೀಕರ್ ಹುದ್ದೆಗೆ ನಾಮಪತ್ರ ಸಲ್ಲಿಸಿದರು.

Ad Widget . Ad Widget .

ಲೋಕಸಭೆ ಸ್ಪೀಕರ್ ಚುನಾವಣೆ ಜೂನ್ 26, ಬುಧವಾರ ನಡೆಯಲಿದೆ. ಸಭಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿರುವುದು ದೇಶದ ಇತಿಹಾಸದಲ್ಲಿ ಇದೇ ಮೊದಲು. ಇಲ್ಲಿಯವರೆಗೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಒಮ್ಮತದ ಮೇರೆಗೆ ಸ್ಪೀಕರ್ ಆಯ್ಕೆಯಾಗುತ್ತಿತ್ತು. ಆದರೆ ಈ ಬಾರಿ ಈ ಸಂಪ್ರದಾಯ ಮುರಿಯುವ ಸಾಧ್ಯತೆ ಇದೆ.

Ad Widget . Ad Widget .

ಇದಕ್ಕೂ ಮುನ್ನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಸ್ಪೀಕರ್ ಹುದ್ದೆಗೆ ಬೆಂಬಲ ಕೋರಿದರು. ವಿಪಕ್ಷಗಳು ಸ್ಪೀಕರ್ ಹುದ್ದೆಯನ್ನು ಬೆಂಬಲಿಸಲು ಸಿದ್ಧ, ಆದರೆ ಉಪಸಭಾಪತಿ ಸ್ಥಾನವನ್ನು ವಿಪಕ್ಷಗಳಿಗೆ ನೀಡಬೇಕು ಎಂದು ರಾಹುಲ್ ಗಾಂಧಿ ಹೇಳಿದರು. ಆದರೆ ರಾಜನಾಥ್ ಸಿಂಗ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಇಂಡಿಯಾ ಮೈತ್ರಿಕೂಟದ ಪರವಾಗಿ ಸುರೇಶ್ ಅವರನ್ನು ಕಣಕ್ಕಿಳಿಸುವುದಾಗಿ ಘೋಷಿಸಿದೆ.

Leave a Comment

Your email address will not be published. Required fields are marked *