ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಕಳೆದ ರಾತ್ರಿಯಿಂದ ನಿರಂತರ ಮಳೆಯಾಗುತ್ತಿದ್ದು ರಾಜ್ಯಾದ್ಯಂತ ಜೂನ್ 30ರ ವರೆಗೆ ಐದು ದಿನಗಳ ಕಾಲ ರಾಜ್ಯದ ಎಲ್ಲಾ ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಅನ್ನು ರಾಜ್ಯ ಹವಾಮಾನ ಇಲಾಖೆ ಘೋಷಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಇನ್ನು ಕೋಟೆ, ಗದಗ, ಬೀದರ್, ರಾಯಚೂರು, ಬಳ್ಳಾರಿ ಹಾಗೂ ಯಾದಗಿರಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿದೆ. ಮುಂಗಾರು ಮಳೆ ಪ್ರಾರಂಭವಾದ ಬಳಿಕ ಇದೇ ಮೊದಲ ಬಾರಿ ಈ ರೀತಿಯಾಗಿ ಮಳೆಯಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಮಳೆ ಹೆಚ್ಚಾಗುವ ಸಾಧ್ಯತೆ ಇದೆ.