Ad Widget .

ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ

ಸಮಗ್ರ ನ್ಯೂಸ್: ಲೋಕಸಭಾ ಸ್ಪೀಕರ್ ಹುದ್ದೆಗೆ ಬುಧವಾರ ಚುನಾವಣೆ ನಡೆದಿದೆ. ಸ್ಪೀಕರ್ ಆಗಿ ಎರಡನೇ ಅವಧಿಗೆ ಬಿಜೆಪಿಯ ಅಭ್ಯರ್ಥಿ ಓಂ ಬಿರ್ಲಾ ಹಾಗೂ ಕೇರಳದ ಮಾವೆಲಿಕರ ಕ್ಷೇತ್ರವನ್ನು ಎಂಟು ಅವಧಿಗೆ ಪ್ರತಿನಿಧಿಸಿರುವ ಕಾಂಗ್ರೆಸ್ ನ ಕೋಡಿಕುನ್ನಿಲ್ ಸುರೇಶ್ ಸ್ಪೀಕರ್‌ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು.

Ad Widget . Ad Widget .

ಇಂದು ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆದಿದ್ದು, ಓಂ ಬಿರ್ಲಾ 18ನೇ ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಪೀಠದಲ್ಲಿ ಕುಳಿತಿದ್ದ ಹಂಗಾಮಿ ಸ್ಪೀಕರ್‌ ಭರ್ತೃಹರಿ ಮೆಹತಾಬ್ ಅವರು ಪ್ರಸ್ತಾಪವನ್ನು ಮತಕ್ಕೆ ಹಾಕಿದರು. ಧ್ವನಿ ಮತ ಮೂಲಕ ಪ್ರಸ್ತಾವನೆಗೆ ಅನುಮೋದನೆ ಲಭಿಸಿತು.

Ad Widget . Ad Widget .

ಎನ್​ಡಿಎ ಮೈತ್ರಿಕೂಟದಿಂದ ಕಳೆದ ಲೋಕಸಭೆಯಲ್ಲಿ ಸ್ಪೀಕರ್ ಆಗಿದ್ದ ಓಂ ಬಿರ್ಲಾ ಇದೀಗ ಮತ್ತೆ ಉನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ.

Leave a Comment

Your email address will not be published. Required fields are marked *