ಕುಕ್ಕೆ ಸುಬ್ರಹ್ಮಣ್ಯ: ಮದ್ಯಪಾನ ಮಾಡಿದ್ದ ವ್ಯಕ್ತಿಯ ತಳ್ಳಿದ‌ ಆನೆ ‘ಯಶಸ್ವಿ’

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ ರೂಂ ಬಾಯ್ ಒಬ್ಬರನ್ನು ಎಳೆದು ಹಾಕಿದ ಘಟನೆ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿಗೆ ಕೆಲವೇ ಸಮಯದ ಮೊದಲು ಈ ಘಟನೆ ನಡೆದಿದೆ.

Ad Widget ... ..

ಸುಬ್ರಹ್ಮಣ್ಯದ ಸವಾರಿ ಮಂಟಪದ ಹತ್ತಿರದ ಬಳಿ ದೇವಸ್ಥಾನದ ಆನೆ ಡಿ.ಕೆ.ಶಿ ಯವರನ್ನು ಸ್ವಾಗತಿಸಲು ಹೋಗುವ ಸಲುವಾಗಿ ನಿಂತಿತ್ತು. ಈ ವೇಳೆ ಒಂದಿಬ್ಬರು ಪೊಲೀಸರು ಕೂಡ ಆನೆಯ ಬಳಿಯಲ್ಲಿ ನಿಂತು ಪೋಟೋ ತೆಗೆಯಲು ಬಂದಿದ್ದರು.

Ad Widget

ಇದೇ ವೇಳೆಗೆ ಸುಬ್ರಹ್ಮಣ್ಯದ ಲಾಡ್ಜ್ ಒಂದರ ರೂಂ ಬಾಯ್ ಆನೆಯ ಹತ್ತಿರ ಬಂದಿದ್ದು ತಕ್ಷಣ ಆನೆ ತನ್ನ ಸೊಂಡಿಲಿನಿಂದ ಎಳೆದು ಹಾಕಿರುವುದಾಗಿ ತಿಳಿದು ಬಂದಿದೆ. ರೂಂ ಬಾಯ್ ಮದ್ಯಪಾನ ಮಾಡಿರುವುದೇ ಘಟನೆ ಕಾರಣ ಎನ್ನಲಾಗಿದ್ದು ಯಾವುದೇ ತೊಂದರೆ ಆಗಿಲ್ಲ ಎನ್ನಲಾಗಿದೆ.

Leave a Comment

Your email address will not be published. Required fields are marked *