ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆ ಹಾಗೂ ಪ.ಪೂ ತರಗತಿಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಮಾಹಿತಿ ನೀಡಲಾಗಿದೆ. ದ.ಕ ಜಿಲ್ಲೆಗೆ ಹವಾಮಾನ ಇಲಾಖೆ ನಾಳೆ ರೆಡ್ ಅಲರ್ಟ್ ಘೋಷಿಸಿದೆ.