Ad Widget .

ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಬಂಧನ

ಸಮಗ್ರ ನ್ಯೂಸ್: ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಅಟ್ಟಿಕಾ ಬಾಬು ಅಲಿಯಾಸ್‌ ಬೊಮ್ಮನಹಳ್ಳಿ ಬಾಬು ಅವರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ಪೊಲೀಸರು ಬಂಧಿಸಿದ್ದಾರೆ. ಕದ್ದ ಚಿನ್ನದ ಆಭರಣಗಳನ್ನು ಖರೀದಿ ಮಾಡುತ್ತಿದ್ದ ಆರೋಪದಲ್ಲಿ ಬೆಂಗಳೂರಿನ ಫ್ರೇಜರ್‌ ಟೌನ್‌ ನಿವಾಸದ ಬಳಿ ಅಟ್ಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

ಕಳ್ಳತನ ಮಾಡಿದ ಚಿನ್ನದ ಆಭರಣಗಳನ್ನು ಖರೀದಿ ಮಾಡಿದ ಕುರಿತು ತುರುವೇಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ, ತುರುವೇಕೆರೆ ಸಿಪಿಐ ಲೋಹಿತ್‌ ಬಿ.ಎನ್‌ ಹಾಗೂ ತಂಡದಿಂದ ಬಂಧಿಸಲಾಗಿದೆ. ಕಳ್ಳತನದ ಆರೋಪಿ ಉದಯ್‌ ಅಲಿಯಾಸ್‌ ಅಶೋಕ್‌, ತನ್ನ ಹೆಂಡತಿ ಶಾರದಾ ಮೂಲಕ ಅಟ್ಟಿಕಾ ಬಾಬುಗೆ ಚಿನ್ನ ಮಾರಾಟ ಮಾಡಿಸುತ್ತಿದ್ದ ತುರುವೇಕೆರೆ ವ್ಯಾಪ್ತಿಯಲ್ಲಿ ಕದ್ದ ಚಿನ್ನವನ್ನು ಅಟ್ಟಿಕಾ ಬಾಬು ಖರೀದಿ ಮಾಡುತ್ತಿರುವ ಕುರಿತು ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಬಂಧಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *