ಸುರತ್ಕಲ್: ರಾ.ಹೆದ್ದಾರಿ ದುರವಸ್ಥೆಗೆ ಪಲ್ಟಿ ಹೊಡೆದ ಸ್ಕೂಟರ್| ಗುಂಡಿಯಲ್ಲೇ‌ ಸ್ಕೂಟರ್ ಬಿಟ್ಟು ಪ್ರತಿಭಟನೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಬಳಿ ಅರೆಬರೆ ಕಾಂಕ್ರೀಟ್ ಹಾಗೂ ಡಾಂಬರು ಹಾಕಿದ್ದು, ಭಾರಿ ಮಳೆಗೆ ಹೆದ್ದಾರಿ ಹೊಂಡಮಯವಾಗಿದೆ. ಸ್ಕೂಟರ್ ಸವಾರರೊಬ್ಬರು ಬುಧವಾರ ಬೆಳಿಗ್ಗೆ ಹೆದ್ದಾರಿಯ ಗುಂಡಿಗೆ ಬಿದ್ದು ಗಾಯಗೊಂಡರು.

Ad Widget ... ..

ಇದರಿಂದ ಬೇಸತ್ತ ಅವರು, ತಾವು ಬಿದ್ದ ಹೊಂಡದಲ್ಲೇ ತಮ್ಮ ಸ್ಕೂಟರ್ ನಿಲ್ಲಿಸಿ, ತಾವೂ ಅದರ ಪಕ್ಕದಲ್ಲೇ ನಿಂತು ಈ ದುರವಸ್ಥೆಯ ಬಗ್ಗೆ ಪ್ರತಿಭಟನೆ ನಡೆಸಿದರು. ಅಲ್ಲದೇ, ಹೆದ್ದಾರಿಯಲ್ಲಿ ಸಾಗುತ್ತಿದ್ದ ಇತರ ವಾಹನ ಸವಾರರಿಗೂ ಗುಂಡಿಗಳ ಕುರಿತು ಎಚ್ಚರಿಸುವ ಮೂಲಕ ಗಮನ ಸೆಳೆದರು.

Ad Widget

ಇಷ್ಟೆಲ್ಲ‌ ಆದರೂ ಇಲ್ಲಿನ ಸರ್ವಿಸ್ ರಸ್ತೆಯಲ್ಲಿ ಸಂಚಾರ ಪೋಲಿಸರು ದಂಡ ವಿಧಿಸುವಲ್ಲಿಯೇ ನಿರತರಾಗಿದ್ದು, ಈ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

Leave a Comment

Your email address will not be published. Required fields are marked *