ಸಮಗ್ರ ನ್ಯೂಸ್: ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಖಾನ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, ಜಮೀರ್ ಅಹ್ಮದ್ ಖಾನ್, ಮಾನ್ಯ ವಸತಿ, ವಕ್ಸ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವ ಹಾಗೂ ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವರು ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಲಾಗಿದೆ ಎಂದಿದೆ.