ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌ ನಿರ್ಮಾಣ: ಎಂ.ಕೆ.ಸ್ಟಾಲಿನ್‌ ಸ್ಪಷ್ಟನೆ

ಸಮಗ್ರ ನ್ಯೂಸ್: ಬೆಂಗಳೂರಿನಿಂದ ಕೇವಲ 4೦ ಕಿಲೋಮೀಟರ್‌ ದೂರದಲ್ಲಿರುವ, ತಮಿಳುನಾಡಿನ ಹೊಸೂರಿನಲ್ಲಿ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಘೋಷಣೆ ಮಾಡಿದ್ದಾರೆ. ಇದರಿಂದ ಬೆಂಗಳೂರಿನ ಜನತೆಗೂ ಅನುಕೂಲವಾಗಲಿದೆ.

. Ad Widget . Ad Widget . Ad Widget

ಇದೇ ವಿಚಾರವಾಗಿ ಬೆಂಗಳೂರಿನಲ್ಲಿಯೇ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸುವ ಕುರಿತು ಸಚಿವ ಎಂ.ಬಿ.ಪಾಟೀಲ್‌ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಎಂ.ಕೆ.ಸ್ಟಾಲಿನ್‌ ಅವರು ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌ ನಿರ್ಮಿಸಲಾಗುವುದು ಎಂಬುದಾಗಿ ಘೋಷಣೆ ಮಾಡಿದ್ದಾರೆ.

. Ad Widget .

ಹೊಸೂರು ಹೆಚ್ಚಿನ ಪ್ರಮಾಣದ ಹೂಡಿಕೆಯನ್ನು ಆಕರ್ಷಿಸುತ್ತಿದೆ. ಹಾಗಾಗಿ, ಹೊಸೂರಿನಲ್ಲಿ ಹಲವು ಆಧುನಿಕ ಮೂಲ ಸೌಕರ್ಯ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅದನ್ನು ಆರ್ಥಿಕ ಕೇಂದ್ರವನ್ನಾಗಿ ರೂಪಿಸುವ ಗುರಿ ಇದೆ. ಹೊಸೂರಿಗಾಗಿ ಹೊಸ ಮಾಸ್ಟರ್‌ ಪ್ಲಾನ್‌ ಕೂಡ ಅಂತಿಮ ಹಂತಕ್ಕೆ ಬಂದಿದೆ. ಹೂಸೂರು, ಕೃಷ್ಣಗಿರಿ ಹಾಗೂ ಧರ್ಮಪುರಿಯಲ್ಲಿ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕೈಗೊಳ್ಳಲು ಹೊಸೂರಿನಲ್ಲಿ ವಿಮಾನ ನಿಲ್ದಾಣದ ನಿರ್ಮಾಣವು ಅತ್ಯವಶ್ಯಕವಾಗಿದೆ” ಎಂಬುದಾಗಿ ವಿಧಾನಸಭೆಯಲ್ಲಿ ಎಂ.ಕೆ.ಸ್ಟಾಲಿನ್‌ ತಿಳಿಸಿದರು. ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌ ನಿರ್ಮಾಣವಾದರೆ ಬೆಂಗಳೂರಿನ ಕೋರಮಂಗಲ, ಎಲೆಕ್ಟ್ರಾನಿಕ್‌ ಸಿಟಿ ಸೇರಿ ಹಲವು ನಗರಗಳ ನಾಗರಿಕರಿಗೆ ಭಾರಿ ಅನುಕೂಲವಾಗಲಿದೆ.

Leave a Comment

Your email address will not be published. Required fields are marked *