ಅಡ್ವಾಣಿ ಆರೋಗ್ಯದಲ್ಲಿ ಸುಧಾರಣೆ/ ಆಸ್ಪತ್ರೆಯಿಂದ ಬಿಡುಗಡೆ

ಸಮಗ್ರ ನ್ಯೂಸ್‌: ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್‌.ಕೆ .ಅಡ್ವಾಣಿ ಅವರು ಅನಾರೋಗ್ಯ ಸಮಸ್ಯೆಯಿಂದ ನವದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಆರೋಗ್ಯ ಸುಧಾರಣೆ ಕಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಮನೆಗೆ ಕಳುಹಿಸಿಕೊಡಲಾಗಿದೆ.

Ad Widget ... ..

ʼಅಡ್ವಾಣಿಯವರನ್ನು ವಯೋಸಹಜ ಕಾಯಿಲೆಯಿಂದ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಿ ಅವರನ್ನು ಬಿಡುಗಡೆಗೊಳಿಸಲಾಗಿದೆ’ ಎಂದು ಆಸ್ಪತ್ರೆಯ ವೈದ್ಯರೊಬ್ಬರು ತಿಳಿಸಿದ್ದಾರೆ. ಮೂತ್ರಶಾಸ್ತ್ರ ಮತ್ತು ಜೆರಿಯಾಟ್ರಿಕ್ ವಿಭಾಗದ ವೈದ್ಯರು ಅಡ್ವಾಣಿ ಅವರ ಆರೋಗ್ಯವನ್ನು ಪರಿಶೀಲಿಸಿದರು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಗುರುವಾರ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಏಮ್ಸ್‌ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget

Leave a Comment

Your email address will not be published. Required fields are marked *