ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ| ನಿಂತಿದ್ದ ಲಾರಿಗೆ ಟಿಟಿ ಗುದ್ದಿ 13 ಮಂದಿ ದುರ್ಮರಣ

ಸಮಗ್ರ ನ್ಯೂಸ್: ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ ಪರಿಣಾಮ 13 ಜನರು ಮೃತಪಟ್ಟ ಘಟನೆ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು(ಜೂ.28) ಬೆಳಗ್ಗೆ ನಡೆದಿದೆ.

. Ad Widget . Ad Widget

ಅಪಘಾತದ ರಭಸಕ್ಕೆ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿದ್ದು, ಭೀಕರತೆಗೆ ಸಾಕ್ಷಿಯಾಗಿವೆ.

. Ad Widget . . Ad Widget . Ad Widget

ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹೊರ ತೆಗೆಯುತ್ತಿದ್ದಾರೆ. ಮೃತರ ಹಿನ್ನಲೆಯನ್ನು ಪೊಲೀಸರು ಪತ್ತೆ ಹಚ್ಚುತ್ತಿರುವುದಾಗಿ‌ ತಿಳಿದುಬಂದಿದೆ

ಮಾಹಿತಿಗಳ ಪ್ರಕಾರ ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು ಎಂದು ತಿಳಿದು ಬಂದಿದೆ. ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ಮಾಯಮ್ಮನ ದರ್ಶನ ಮಾಡಿಕೊಂದು ಸ್ವಗ್ರಾಮಕ್ಕೆ ವಾಪಾಸಾಗುವಾಗ ಈ ದುರ್ಘಟನೆ ಸಂಭವಿಸಿದೆ.

Leave a Comment

Your email address will not be published. Required fields are marked *