‘ಗೃಹಲಕ್ಷ್ಮಿ’ ಹಣ ಬಂದಿಲ್ಲವೆಂದು ಮಹಿಳಾಮಣಿಗಳ ಪ್ರತಿಭಟನೆ| ಇಂದು ಅಥವಾ ನಾಳೆ ಹಣ ಬಿಡುಗಡೆ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದು, ನಾಳೆ ಯಜಮಾನಿಯರ ಖಾತೆಗೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Ad Widget ... ..

ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದೇವೆ, ಇಡೀ ರಾಜ್ಯದಲ್ಲಿ ಇಂದು ಮತ್ತು ನಾಳೆ ಖಾತೆಗೆ ಕ್ರೆಡಿಟ್ ಆಗಲಿದೆ ಎಂದಿದ್ದಾರೆ. ಯಾವುದೇ ಕಾರಣಕ್ಕೂ 5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸೋಲ್ಲ, ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು.

Ad Widget

ಮೈಸೂರಿನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಗೃಹಲಕ್ಷ್ಮಿ ಹಣ ಬರುತ್ತೆ ಎಂಬ ನಿರೀಕ್ಷೆಯಲ್ಲಿದ್ದೆವು, : 2 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರ್ತಿಲ್ಲ , ಹಣ ಬರದೇ ಸಾಕಷ್ಟು ತೊಂದರೆಯಾಗಿದೆ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಗೌರವ ಸಿಗುತ್ತಿಲ್ಲ. ಗ್ಯಾರಂಟಿ ಯೋಜನೆಯಿಂದ ದಿನನಿತ್ಯ ವಸ್ತುಗಳ ಎಲ್ಲಾ ಬೆಲೆ ಏರಿಕೆಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *