ಅಂತರಾಷ್ಟ್ರೀಯ ಟಿ-20 ಕ್ರಿಕೆಟ್ ಪಂದ್ಯಗಳಿಗೆ ವಿದಾಯ ಘೋಷಿಸಿದ ಕೊಹ್ಲಿ, ರೋಹಿತ್| ಗೆಲುವಿನ ಸಂಭ್ರಮದ ‌ಬಳಿಕ ನಿವೃತ್ತಿ ಘೋಷಣೆ

ಸಮಗ್ರ ನ್ಯೂಸ್: ಆಧುನಿಕ ಯುಗದ ಅತ್ಯಂತ ಪ್ರಭಾವಿ ಕ್ರಿಕೆಟಿಗ, ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್​ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಟಿ20 ವಿಶ್ವ ಕಪ್​ನ ಫೈನಲ್​​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್ ಬಾರಿಸಿ ಗೆಲುವಿನ ಸೂತ್ರಧಾರ ಎನಿಸಿಕೊಳ್ಳುವ ಜತೆಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಅವರು ಈ ಘೋಷಣೆಯನ್ನು ಮಾಡಿದರು. ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡ ಬಳಿಕ ಮಾತನಾಡಿದ ಅವರು ಇದು ನನ್ನ ಕೊನೆಯ ಟಿ20 ಅಂತಾರಾಷ್ಟ್ರೀಯ ಪಂದ್ಯ ಹಾಗೂ ಕೊನೇ ಟಿ20 ವಿಶ್ವ ಕಪ್ ಎಂದು ಹೇಳಿದರು. ಈ ಮೂಲಕ ಅವರು ದೀರ್ಘ ಕಾಲದ ಟಿ20 ಅಂತಾರಾಷ್ಟ್ರೀಯ ಅಭಿಯಾನವನ್ನು ಕೊನೆಗೊಳಿಸಿದ್ದಾರೆ.

Ad Widget ... ..

ಭಾರತ ತಂಡದ ನಾಯಕ ಹಾಗೂ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಘೋಷಿಸಿದ್ದಾರೆ. ಈ ಮೂಲಕ ಅವರು ತಮ್ಮ ಸಹ ಆಟಗಾರ ವಿರಾಟ್ ಕೊಹ್ಲಿಯ ಹಾದಿಯನ್ನೇ ತುಳಿದಿದ್ದಾರೆ. ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಸ್ವೀಕರಿಸುವ ವೇಳೆ ತಮ್ಮ ನಿವೃತ್ತಿಯ ವಿಷಯವನ್ನು ಘೋಷಿಸಿದರೆ ರೋಹಿತ್ ಶರ್ಮಾ ಗೆಲುವಿನ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

Ad Widget

ಟೆಸ್ಟ್ ಮತ್ತು ಏಕದಿನ ಸ್ವರೂಪಗಳಲ್ಲಿ ಭಾರತಕ್ಕಾಗಿ ಮುಂದುವರಿಯುವುದಾಗಿ ರೋಹಿತ್ ಹೇಳಿದರು, ಆದರೆ ಅವರು ಕಡಿಮೆ ಫಾರ್ಮ್ನಿಂದ ಹಿಂದೆ ಸರಿಯುತ್ತಿದ್ದಾರೆ ಎಂದು ಹೇಳಿದರು.

ವಿರಾಟ್​ ಕೊಹ್ಲಿ ಕೇವಲ ಟಿ20 ಮಾತ್ರ ಎಂದು ಹೇಳಿರುವ ಕಾರಣ ಅವರು ಏಕ ದಿನ ಹಾಗೂ ಟೆಸ್ಟ್​ ಪಂದ್ಯಗಳಲ್ಲಿ ಆಡಲಿದ್ದಾರೆ. ಅದೇ ರೀತಿ ಅವರು ಅತಿ ಹೆಚ್ಚು ಆರಾಧಿಸಲ್ಪಡುವ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ತಮ್ಮ ಸೇವೆ ಮುಂದುವರಿಸಲಿದ್ದಾರೆ.

Leave a Comment

Your email address will not be published. Required fields are marked *