June 2024

ಮಡಿಕೇರಿ: ಜೂ.27 ರಿಂದ ಅಗ್ನಿವೀರ್ ಸೇನಾ ನೇಮಕಾತಿ ರ್‍ಯಾಲಿ

ಸಮಗ್ರ ನ್ಯೂಸ್: ಜೂನ್, 27 ರಿಂದ ಜುಲೈ, 02 ರವರೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಅಗ್ನಿವೀರ್ ಸೇನಾ ನೇಮಕಾತಿ ರ್‍ಯಾಲಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೈನಿಕ ಕಲ್ಯಾಣ ಇಲಾಖೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯು ಒಂದು ವಿಶಿಷ್ಟ ಕಾರ್ಯಕ್ರಮವಾಗಿದ್ದು, ಯಾರಿಗೂ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು. ವಸತಿ ಊಟೋಪಚಾರ ಸೇರಿದಂತೆ ಹಲವು ಮೂಲ ಸೌಕರ್ಯಗಳನ್ನು […]

ಮಡಿಕೇರಿ: ಜೂ.27 ರಿಂದ ಅಗ್ನಿವೀರ್ ಸೇನಾ ನೇಮಕಾತಿ ರ್‍ಯಾಲಿ Read More »

ಎತ್ತಿನಭುಜ ಚಾರಣ ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಚಾರಣ ಪ್ರಿಯರ ಮೆಚ್ಚಿನ ಸ್ಥಳ ಎತ್ತಿನಭುಜಕ್ಕೆ ಸದ್ಯ ಪ್ರವಾಸಿಗರು ಭೇಟಿ ನೀಡದಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಪ್ರವಾಸೋದ್ಯಮದ ಅಡಿ ರಾಜ್ಯದ ವಿವಿಧೆಡೆ ಆನ್‌ಲೈನ್ ಟಿಕೆಟ್ ವ್ಯವಸ್ಥೆ ಮಾಡಿ ಪ್ರವಾಸಿಗರ ಸಂಖ್ಯೆಯನ್ನು ಸೀಮಿತಗೊಳಿಸುವವರೆಗೆ ಚಾರಣ ಪ್ರದೇಶಗಳಲ್ಲಿ ಪ್ರವೇಶ ನಿರ್ಬಂಧಿಸಿ ಈಗಾಗಲೇ ಸೂಚನೆ ನೀಡಲಾಗಿದೆ. ಆದರೂ ಜೂ. 15, 16, 17ರಂದು ರಜೆ ಇದ್ದ ಕಾರಣ ಮುಳ್ಳಯನಗಿರಿ, ಎತ್ತಿನಭುಜದಲ್ಲಿ ಸಾವಿರಾರು ಚಾರಣಿಗರು ಬಂದು ಹೋಗಿರುವುದಾಗಿ ವರದಿಗಳಾಗಿವೆ. ತಾತ್ಕಾಲಿಕವಾಗಿ ಚಾರಣ ನಿರ್ಬಂಧವಾಗಿದ್ದರೂ ಅವಕಾಶ ನೀಡಿರುವ ಬಗ್ಗೆ ಪರಿಶೀಲಿಸಿ, ತಪ್ಪಿತಸ್ಥ

ಎತ್ತಿನಭುಜ ಚಾರಣ ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ Read More »

ಕನ್ನಡದ ಖ್ಯಾತ ಸಾಹಿತಿ ಕಮಲಾ ಹಂಪನಾ‌ ನಿಧನ

ಸಮಗ್ರ‌ ನ್ಯೂಸ್: ಕನ್ನಡದ ಖ್ಯಾತ ಸಾಹಿತಿ ಕಮಲಾ ಹಂಪನಾ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.ಹೃದಯಾಘಾತದಿಂದ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ. ಕಮಲಾ ಹಂಪನಾ ಅವರು ಕನ್ನಡದ ಲೇಖಕರು. ಅವರು ವಿದ್ವಾಂಸರಾಗಿ, ಪ್ರಾಧ್ಯಾಪಕರಾಗಿ, ಪ್ರಾಚೀನ ಅರ್ವಾಚೀನ ಕೃತಿಗಳ ಅನುಸಂಧಾನಕಾರರಾಗಿ ಶ್ರಮಿಸಿದ್ದಾರೆ. ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲೂ ಗಂಭೀರವಾದ ಅಧ್ಯಯನ ಮತ್ತು ಸಂಶೋಧನೆಯನ್ನು ಕೈಗೊಂಡು ಆ ಎಲ್ಲ ಪ್ರಕಾರಗಳಲ್ಲೂ ಕೊಡುಗೆಗಳನ್ನು ನೀಡಿದ್ದಾರೆ. ಸಾಹಿತ್ಯ ಕೃತಿಗಳು ನಕ್ಕಿತು ಹಾಲಿನ ಬಟ್ಟಲು,

ಕನ್ನಡದ ಖ್ಯಾತ ಸಾಹಿತಿ ಕಮಲಾ ಹಂಪನಾ‌ ನಿಧನ Read More »

ಹವಾಮಾನ ವರದಿ| ವೀಕೆಂಡ್ ‌ನಲ್ಲಿ ಕರಾವಳಿಗೆ ರೆಡ್ ಅಲರ್ಟ್| ಬೆಂಗಳೂರಿನಲ್ಲಿ ಧಾರಾಕಾರ ಮಳೆ

ಸಮಗ್ರ ನ್ಯೂಸ್: ಮುಂಗಾರು ಚೇತರಿಕೆ ಕಾಣುವ ಲಕ್ಷಣ ಕಾಣುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯು ಜೂ.22 ಮತ್ತು 23ರಂದು ಕರಾವಳಿ ಭಾಗದಲ್ಲಿ “ರೆಡ್‌ ಅಲರ್ಟ್‌’ ಘೋಷಿಸಿದೆ. ಮಂಗಳೂರು ನಗರ ಸಹಿತ ದ.ಕ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಲ್ಲಿ ಮಳೆಯ ತೀವ್ರತೆ ತುಸು ಕಡಿಮೆಯಾಗಿದ್ದು, ಮತ್ತೆ ಮಳೆ ಬಿರುಸು ಪಡೆಯುವ ಸಾಧ್ಯತೆ ಇದೆ. “ರೆಡ್‌ ಅಲರ್ಟ್‌’ ಅವಧಿಯಲ್ಲಿ ಕರಾವಳಿ ಭಾಗದಲ್ಲಿ 204.5 ಮಿ.ಮೀ.ಗೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ಮತ್ತು ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವ ನಿರೀಕ್ಷೆ ಇದೆ.

ಹವಾಮಾನ ವರದಿ| ವೀಕೆಂಡ್ ‌ನಲ್ಲಿ ಕರಾವಳಿಗೆ ರೆಡ್ ಅಲರ್ಟ್| ಬೆಂಗಳೂರಿನಲ್ಲಿ ಧಾರಾಕಾರ ಮಳೆ Read More »

ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ| ಸಂತ್ರಸ್ತ ಚೇತನ್ ವಿರುದ್ಧವೇ ಎಫ್ಐಆರ್

ಸಮಗ್ರ ನ್ಯೂಸ್: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಹೋದರ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವ ಯುವಕನ ವಿರುದ್ಧವೇ ಹಾಸನ ಜಿಲ್ಲೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸೂರಜ್ ಬ್ರಿಗೇಡ್‌ನ ಖಜಾಂಜಿ ಶಿವಕುಮಾರ್ ಹೆಚ್‌.ಎಲ್‌ ಎಂಬವರು ದೂರು ನೀಡಿದ್ದು “ಯುವಕ 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಹಣ ನೀಡದಿದ್ದರೆ ಸೂರಜ್ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ ಮಾಡುವುದಾಗಿ ಬೆದರಿಕೆ ಹಾಕಿದ್ದ” ಎಂದು ದೂರಿನಲ್ಲಿ ಆರೋಪಿಸಿದ್ದಾರೆ. “ಖಾಸಗಿ

ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ| ಸಂತ್ರಸ್ತ ಚೇತನ್ ವಿರುದ್ಧವೇ ಎಫ್ಐಆರ್ Read More »

ಸುಳ್ಯ: ಮಗ ಮತ್ತು ಸೊಸೆ ವಿರುದ್ಧ ಮತ್ತೆ ದೂರು ನೀಡಿದ ವೃದ್ಧೆ| ಎಸಿ ಜುಬಿನ್ ಮೊಹಪಾತ್ರ ಮಾತುಕತೆ

ಸಮಗ್ರ ನ್ಯೂಸ್: ಮಗ ಮತ್ತು ಸೊಸೆ ತನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ವೃದ್ಧೆಯೋರ್ವರು ತನ್ನ ಪುತ್ರಿಯರ ಜತೆಗೆ ಸುಳ್ಯ ತಾಲೂಕು ಕಚೇರಿಗೆ ಆಗಮಿಸಿ ಧರಣಿ ಕುಳಿತ ಘಟನೆ ಸುಳ್ಯದಲ್ಲಿ ನಡೆದಿದೆ. ಮಂಡೆಕೋಲು ಗ್ರಾಮದ ಕಲ್ಲಡ್ಕದ ಪೆರಾಜೆಯ ಶೇಷಮ್ಮ ಅವರು ಕೆಲವು ವಾರಗಳ ಹಿಂದೆ ಸುಳ್ಯ ತಹಶೀಲ್ದಾರ್‌ಗೆ ಮಗನ ವಿರುದ್ಧ ದೂರು ನೀಡಿದ್ದರು. ಅಂದು ತಹಶೀಲ್ದಾರ್‌ ನೇತೃತ್ವದಲ್ಲಿ ಅಧಿಕಾರಿಗಳು ಸಮಾಲೋಚಿಸಿ ಮಗನಿಗೆ ಹಿತವಚನ ನೀಡಿ ಮಂಡೆಕೋಲಿನ ಮನೆಗೆ ಬಿಟ್ಟು ಬಂದಿದ್ದರು. ಅಂದಿನಿಂದ ವೃದ್ಧೆ ಅದೇ ಮನೆಯಲ್ಲಿದ್ದು, ಮದುವೆ ಮಾಡಲಾಗಿರುವ

ಸುಳ್ಯ: ಮಗ ಮತ್ತು ಸೊಸೆ ವಿರುದ್ಧ ಮತ್ತೆ ದೂರು ನೀಡಿದ ವೃದ್ಧೆ| ಎಸಿ ಜುಬಿನ್ ಮೊಹಪಾತ್ರ ಮಾತುಕತೆ Read More »

ಉಪ್ಪಿನಂಗಡಿ: ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಭಾರೀ ಅಗ್ನಿ ಅವಘಡ| ಹಲವು ಮಳಿಗೆಗಳು ಬೆಂಕಿಗಾಹುತಿ

ಸಮಗ್ರ ನ್ಯೂಸ್: ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಮುಖ್ಯ ಪೇಟೆಯಲ್ಲಿರುವ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿನ ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿರುವ ಮಾಹಿತಿ ಲಭಿಸಿದೆ. ನೂರಾರು ನಾಗರಿಕರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಬೆಂಕಿಯ ಕೆನ್ನಾಲಗೆಗೆ ಹಲವು ಅಂಗಡಿಗಳು ಆಹುತಿಯಾಗಿವೆ. ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯ ಅಂಗಡಿಯವರು ಬೆಂಕಿಯನ್ನು ಆರಿಸಲು ಯತ್ನಿಸಿದರಾದರೂ ಅದಾಗಲೇ ಹಲವು ಅಂಗಡಿಗಳು ಬೆಂಕಿಗೆ ಆಹುತಿಯಾಗಿತ್ತು. ಬೆಂಕಿ ನಂದಿಸುವ ಕಾರ್ಯ ಬರದಿಂದ ನಡೆಯುತ್ತಿದ್ದು, ಇನ್ನೂ ಹತೋಟಿಗೆ ಬಂದಿಲ್ಲ ಎಂದು ತಿಳಿದುಬಂದಿದೆ.

ಉಪ್ಪಿನಂಗಡಿ: ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಭಾರೀ ಅಗ್ನಿ ಅವಘಡ| ಹಲವು ಮಳಿಗೆಗಳು ಬೆಂಕಿಗಾಹುತಿ Read More »

ಮೂರು ಹೊಸ ಕಾನೂನುಗಳ ಅನುಷ್ಠಾನ/ ಮುಂದೂಡುವಂತೆ ಪತ್ರ ಬರೆದ ಮಮತಾ ಬ್ಯಾನರ್ಜಿ

ಸಮಗ್ರ ನ್ಯೂಸ್: ಭಾರತೀಯ ನ್ಯಾಯ ಸಂಹಿತಾ, ಭಾರತೀಯ ಸಾಕ್ಷಿ ಅಧಿನಿಯಮ್ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಎಂಬ ಮೂರು ಕ್ರಿಮಿನಲ್ ಕಾನೂನುಗಳ ಅನುಷ್ಠಾನವನ್ನು ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪತ್ರ ಬರೆದಿದ್ದಾರೆ. ಈ ಕಾನೂನುಗಳ ಸನ್ನಿಹಿತ ಅನುಷ್ಠಾನದ ಬಗ್ಗೆ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಮುಖ್ಯಸ್ಥರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ, ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) 2023, ಭಾರತೀಯ ಸಾಕ್ಷಿ ಅಧಿನಿಯಮ್ (ಬಿಎಸ್‌ಎ) ಅನುಷ್ಠಾನವನ್ನು ಮುಂದೂಡಲು ನಮ್ಮ ಮನವಿಯನ್ನು

ಮೂರು ಹೊಸ ಕಾನೂನುಗಳ ಅನುಷ್ಠಾನ/ ಮುಂದೂಡುವಂತೆ ಪತ್ರ ಬರೆದ ಮಮತಾ ಬ್ಯಾನರ್ಜಿ Read More »

ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ ಮೇಲೆ ಗುಳಿಗ ದೃಷ್ಟಿ| ಎಷ್ಟು ಪ್ರಯತ್ನಿಸಿದ್ರೂ ಕೆಲಸ ಮುಗೀತಿಲ್ವಂತೆ!!

ಸಮಗ್ರ ನ್ಯೂಸ್: ದೈವಗಳ ನೆಲೆವೀಡು ಕರಾವಳಿ ಒಂದಲ್ಲ ಒಂದು ದೈವ ಕಾರ್ಣಿಕಕ್ಕೆ ಸಾಕ್ಷಿಯಾಗುತ್ತಾ ಇರುತ್ತದೆ. ಇದೀಗ ಇಂತಹದ್ದೇ ಮತ್ತೊಂದು ಘಟನೆ ನಡೆದಿದ್ದು, ದೈವ ಮುನಿಸಿಕೊಂಡ ಪರಿಣಾಮ ಒಂದಲ್ಲ ಒಂದು ಅವಾಂತರಗಳು ಸಂಭವಿಸುತ್ತಿದೆ ಎಂದು ಜನ ಆತಂಕಕ್ಕೀಡಾಗಿದ್ದಾರೆ ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ನಡೆಯುತ್ತಿದೆ. ಆದರೆ ಮಂಗಳೂರಿನ ಹಳೆ ಬಸ್ ನಿಲ್ದಾಣದ ಬಳಿ ಮೂರು ವರ್ಷದಿಂದ ಕಾಮಗಾರಿಯೊಂದು ನೆನೆಗುದಿಗೆ ಬಿದ್ದಿದೆ. ಇದಕ್ಕೆ ಕಾರಣ ಗುಳಿಗೆ ದೈವದ ಮುನಿಸಂತೆ!! ಬಹು ಅಂತಸ್ಥಿನ ಕಾರ್ ಪಾರ್ಕಿಂಗ್ ಕಾಮಗಾರಿಯ

ಮಂಗಳೂರು ಸ್ಮಾರ್ಟ್ ಸಿಟಿ ಕಾಮಗಾರಿ ಮೇಲೆ ಗುಳಿಗ ದೃಷ್ಟಿ| ಎಷ್ಟು ಪ್ರಯತ್ನಿಸಿದ್ರೂ ಕೆಲಸ ಮುಗೀತಿಲ್ವಂತೆ!! Read More »

ಪ್ರಜ್ವಲ್ ರೇವಣ್ಣ ಬಳಿಕ ಸೂರಜ್ ಮೇಲೂ ಲೈಂಗಿಕ ಆರೋಪ| ಯುವಕನ ಮೇಲೆ ಅಸಹಜ‌ ಕಾಮಕೇಳಿ ನಡೆಸಿದ್ರಂತೆ ಎಂಎಲ್ ಸಿ ಸೂರಜ್ ರೇವಣ್ಣ!!

ಸಮಗ್ರ ನ್ಯೂಸ್: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಭಾರೀ ಸದ್ದು ಮಾಡಿದ್ದು, ದೇಶ-ವಿದೇಶ ಮಾಧ್ಯಮಗಳಲ್ಲೂ ಸುದ್ದಿಯಾಗಿದೆ. ತಮ್ಮ ಪಕ್ಷದ ಕಾರ್ಯಕರ್ತೆಯರು, ಸರ್ಕಾರಿ ಮಹಿಳಾ ಅಧಿಕಾರಿಗಳು, ಜೆಡಿಎಸ್​ ಮುಖಂಡರ ಹೆಂಡತಿಯರನ್ನು ಪ್ರಜ್ವಲ್​ ಲೈಂಗಿಕವಾಗಿ ಬಳಿಸಿಕೊಂಡಿರುವ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದರ ಬೆನ್ನಲ್ಲೇ ಇದೀಗ ಪ್ರಜ್ವಲ್ ಅಣ್ಣ ವಿಧಾನಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ವಿರುದ್ಧವೂ ಸಹ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಅರಕಲಗೂಡು ಜೆಡಿಎಸ್​ ಕಾರ್ಯಕರ್ತನ ಮೇಲೆ ಸೂರಜ್​ ರೇವಣ್ಣ,

ಪ್ರಜ್ವಲ್ ರೇವಣ್ಣ ಬಳಿಕ ಸೂರಜ್ ಮೇಲೂ ಲೈಂಗಿಕ ಆರೋಪ| ಯುವಕನ ಮೇಲೆ ಅಸಹಜ‌ ಕಾಮಕೇಳಿ ನಡೆಸಿದ್ರಂತೆ ಎಂಎಲ್ ಸಿ ಸೂರಜ್ ರೇವಣ್ಣ!! Read More »