June 2024

ತ್ರಿವೇಣಿ ಸಂಗಮದಲ್ಲಿ ಜಲಕ್ರೀಡೆಗೆ ಅವಕಾಶವಿಲ್ಲ| ಎ.ಎಸ್.ಪೊನ್ನಣ್ಣ ಖಡಕ್ ಸೂಚನೆ

ಸಮಗ್ರ ನ್ಯೂಸ್:ದಕ್ಷಿಣ ಭಾರತದ ಅತ್ಯಂತ ಪವಿತ್ರ ಧಾರ್ಮಿಕ ಕ್ಷೇತ್ರವಾದ ಕಾವೇರಿ ತ್ರಿವೇಣಿ ಸಂಗಮದಲ್ಲಿ ಜಲಕ್ರೀಡೆಗೆ ಯಾವ ಕಾರಣಕ್ಕೂ ಅವಕಾಶ ನೀಡಬೇಡಿ ಎಂದು ಪೋಲಿಸ್ ಇಲಾಖೆ ಮತ್ತು ಭಗಂಡೇಶ್ವರ ದೇವಾಲಯ ಸಿಬ್ಬಂದಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಭಾಗಮಂಡಲ ಮೇಲ್ಸೇತುವೆ ವೀಕ್ಷಣೆಯ ಸಂಧರ್ಭದಲ್ಲಿ ಪ್ರವಾಸಿಗರು ತ್ರಿವೇಣಿ ಸಂಗಮದಲ್ಲಿ ಈಜಾಡುತ್ತಿದ್ದನ್ನುಕಂಡು ಗರಂ ಆಗಿ ಸಿಬ್ಬಂದಿ ವರ್ಗದವರನ್ನು ತರಾಟೆಗೆ ತೆಗೆದುಕೊಂಡರು.ತ್ರಿವೇಣಿ ಸಂಗಮದಲ್ಲಿ ಜಲ ಕ್ರಿಡೆ ನಡೆಸುತ್ತಿದ್ದ ಪ್ರವಾಸಿಗರಿಗೆ ಕ್ಷೇತ್ರದ ಪಾವಿತ್ರ್ಯತೆ ಬಗ್ಗೆ ತಿಳಿಸಿ ಮನವರಿಕೆ ಮಾಡಿದರು. ತ್ರಿವೇಣಿ ಸಂಗಮದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಹೊರತು […]

ತ್ರಿವೇಣಿ ಸಂಗಮದಲ್ಲಿ ಜಲಕ್ರೀಡೆಗೆ ಅವಕಾಶವಿಲ್ಲ| ಎ.ಎಸ್.ಪೊನ್ನಣ್ಣ ಖಡಕ್ ಸೂಚನೆ Read More »

ಉಜಿರೆ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

ಸಮಗ್ರ ನ್ಯೂಸ್: ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮೇ 30ರಂದು ನಾಪತ್ತೆಯಾಗಿದ್ದು ಜೂ.18 ರಂದು ಹೈದರಾಬಾದ್ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾಳೆ. ಉಜಿರೆಯಲ್ಲಿ ವಾಸ್ತವ್ಯದಲ್ಲಿರುವ ವಿದ್ಯಾರ್ಥಿ ದಿವ್ಯಾ ಎಸ್, ದೇವಾಂಗ ರಸ್ತೆ, ಕಸಬಾ ಹೋಬಳಿ, ಬೇಲೂರು ಕಸಬಾ, ಬೇಲೂರು ತಾಲೂಕು, ಹಾಸನ ಜಿಲ್ಲೆ ಎಂಬವರು ಶ್ರೀ ಧರ್ಮಸ್ಥಳ ಪದವಿ ಪೂರ್ವ ಕಾಲೇಜು ಉಜಿರೆಯಲ್ಲಿ ಪ್ರಥಮ ವರ್ಷದ ಪಿಯುಸಿ ವ್ಯಾಸಂಗ ಮಾಡಿಕೊಂಡಿದ್ದು, ಮೇ 29 ರಂದು ಬೆಳೆಗ್ಗೆ 8 ಗಂಟೆ ಸಮಯಕ್ಕೆ ಕ್ರೀಡಾಂಗಣಕ್ಕೆ

ಉಜಿರೆ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ Read More »

ನಳಂದಾ ವಿಶ್ವವಿದ್ಯಾಲಯದಲ್ಲಿ ನೂತನ ಕ್ಯಾಂಪಸ್/ ಇಂದು ಪ್ರಧಾನಿ ಮೋದಿ ಉದ್ಘಾಟನೆ

ಸಮಗ್ರ ನ್ಯೂಸ್: ಬಿಹಾರದ ರಾಜ್‌ಗಿರ್‌ನಲ್ಲಿ ನಳಂದಾ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ 17 ದೇಶಗಳ ಮಿಷನ್ ಮುಖ್ಯಸ್ಥರು ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ. ಕ್ಯಾಂಪಸ್‌ನಲ್ಲಿ 40 ತರಗತಿ ಕೊಠಡಿಗಳೊಂದಿಗೆ ಎರಡು ಶೈಕ್ಷಣಿಕ ಬ್ಲಾಕ್‌ಗಳಿವೆ, ಒಟ್ಟು 1900 ಆಸನ ಸಾಮರ್ಥ್ಯವಿದೆ. ಇದು ತಲಾ 300 ಆಸನಗಳ ಸಾಮರ್ಥ್ಯದ ಎರಡು ಸಭಾಂಗಣಗಳನ್ನು ಹೊಂದಿದೆ. ಇದು ಸುಮಾರು 550 ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಹೊಂದಿರುವ

ನಳಂದಾ ವಿಶ್ವವಿದ್ಯಾಲಯದಲ್ಲಿ ನೂತನ ಕ್ಯಾಂಪಸ್/ ಇಂದು ಪ್ರಧಾನಿ ಮೋದಿ ಉದ್ಘಾಟನೆ Read More »

ದೇಶಾದ್ಯಂತ ಜಿಯೋ ಸರ್ವರ್ ಡೌನ್| ಬಳಕೆದಾರರ ಪರದಾಟ

ಸಮಗ್ರ ನ್ಯೂಸ್: ದೇಶಾದ್ಯಂತ ಜಿಯೋ ಸರ್ವರ್ ಡೌನ್ ಆಗಿದೆ. ವಾಟ್ಸಾಪ್, ಇನ್ಸ್ಟಾಗ್ರಾಮ್, ಎಕ್ಸ್, ಸ್ನ್ಯಾಪ್ಚಾಟ್, ಯೂಟ್ಯೂಬ್ ಮತ್ತು ಗೂಗಲ್ ಸೇರಿದಂತೆ ಎಲ್ಲಾ ದೈನಂದಿನ ಬಳಕೆಯ ಅಪ್ಲಿಕೇಶನ್ಗಳನ್ನ ಪ್ರವೇಶಿಸಲು ಸಾಧ್ಯವಾಗದ ಕಾರಣ ದೇಶಾದ್ಯಂತ ಬಳಕೆದಾರರು ಜಿಯೋ ಸೇವೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರುತ್ತಿದ್ದಾರೆ. ಡೌನ್ಡೆಟೆಕ್ಟರ್ ಪ್ರಕಾರ, ಶೇಕಡಾ 54 ಕ್ಕೂ ಹೆಚ್ಚು ದೂರುದಾರರು ಮೊಬೈಲ್ ಇಂಟರ್ನೆಟ್, 38 ಪ್ರತಿಶತದಷ್ಟು ಜಿಯೋ ಫೈಬರ್ ಮತ್ತು 7 ಪ್ರತಿಶತದಷ್ಟು ಮೊಬೈಲ್ ನೆಟ್ವರ್ಕ್ಗಳೊಂದಿಗೆ ಅಡೆತಡೆಗಳನ್ನು ಎದುರಿಸುತ್ತಿದ್ದಾರೆ. ಆದರೆ ಕಂಪನಿ ಈ ಕುರಿತು ಯಾವುದೇ ಸ್ಪಷ್ಟನೆ

ದೇಶಾದ್ಯಂತ ಜಿಯೋ ಸರ್ವರ್ ಡೌನ್| ಬಳಕೆದಾರರ ಪರದಾಟ Read More »

ಕುಕ್ಕೆ ಸುಬ್ರಹ್ಮಣ್ಯ: ಡಾ. ರವಿ ಕಕ್ಕೆ ಪದವು ಅವರಿಗೆ “ತೆರೆಮರೆಯ ನಾಯಕ” ಪ್ರಶಸ್ತಿ

ಸಮಗ್ರ ನ್ಯೂಸ್:ಜೂನ್ 16. ಕುಕ್ಕೆ ಸುಬ್ರಹ್ಮಣ್ಯದ ರೋಟರಿ ಕ್ಲಬ್ಬಿನ ಕಾರ್ಯ ನಿಕಟ ಪೂರ್ವ ಕಾರ್ಯದರ್ಶಿ, ಕ್ರಿಯಾಶೀಲ ಕೆಲಸಗಾರ, ಸಮಾಜ ಸೇವಕ, ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾ. ರವಿ ಕಕ್ಕೆಪದವು ಅವರಿಗೆ ರೋಟರಿ ಜಿಲ್ಲೆ 31 81ರ ಈ ವರ್ಷದ ತೆರೆಮರೆಯ ನಾಯಕ ಪ್ರಶಸ್ತಿ ಲಭಿಸುತ್ತದೆ. ಈ ತಿಂಗಳ 8 – 9ರಂದು ಮೈಸೂರಿನಲ್ಲಿ ನಡೆದ ರೋಟರಿ ಜಿಲ್ಲೆ 31 81 ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ರೋಟರಿ

ಕುಕ್ಕೆ ಸುಬ್ರಹ್ಮಣ್ಯ: ಡಾ. ರವಿ ಕಕ್ಕೆ ಪದವು ಅವರಿಗೆ “ತೆರೆಮರೆಯ ನಾಯಕ” ಪ್ರಶಸ್ತಿ Read More »

ದರ್ಶನ್ ಹಿಂದೆ ರೌಡಿಗ್ಯಾಂಗ್| ತನಿಖೆ ವೇಳೆ ಪಾತಕಿಗಳ ನಂಟು ಬಯಲು

ಸಮಗ್ರ ನ್ಯೂಸ್: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್‌ ಮತ್ತು ತಂಡದ ಸದಸ್ಯರ ಮೊಬೈಲ್ ಕರೆಗಳ ವಿವರ, ವಾಟ್ಸ್‌ ಆ್ಯಪ್‌ ಅನ್ನು ತಾಂತ್ರಿಕ ತಜ್ಞರು ಪರಿಶೀಲಿಸಿದ್ದು, ಬಂಧಿತ ಆರೋಪಿಗಳ ಪೈಕಿ ಕೆಲವರು ರೌಡಿಗಳ ಸಂಪರ್ಕದಲ್ಲಿ ಇದ್ದದ್ದು ಗೊತ್ತಾಗಿದೆ. ‘ಬಂಧಿತ ಆರೋಪಿಗಳ ಆರು ತಿಂಗಳ ಮೊಬೈಲ್‌ ಕರೆಗಳ ವಿವರ ಪಡೆಯಲಾಗುತ್ತಿದೆ. ಬಂಧಿತರು ರೌಡಿಗಳ ಸಂಪರ್ಕದಲ್ಲಿ ಇರುವುದು ತನಿಖೆಯಿಂದ ಬಯಲಾಗುತ್ತಿದೆ. ಆರೋಪಿಗಳು ಯಾವ ಉದ್ದೇಶದಿಂದ ರೌಡಿಗಳೊಂದಿಗೆ ಸಂಪರ್ಕ ಹೊಂದಿದ್ದರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಮೂಲಗಳು ಹೇಳಿವೆ.

ದರ್ಶನ್ ಹಿಂದೆ ರೌಡಿಗ್ಯಾಂಗ್| ತನಿಖೆ ವೇಳೆ ಪಾತಕಿಗಳ ನಂಟು ಬಯಲು Read More »

ಉಪ್ಪಿನಂಗಡಿ: ಮಹಿಳೆ ಕೊಲೆ ಪ್ರಕರಣದಲ್ಲಿ ಹತ್ತನೇ ತರಗತಿ ಬಾಲಕ‌ ಸೆರೆ| ನಡುರಾತ್ರಿಯಲ್ಲಿ ಚಿಕ್ಕಮ್ಮನ ಬಯಸಿ ಬಂದಿದ್ದ ಅಪ್ರಾಪ್ತ!!

ಸಮಗ್ರ ನ್ಯೂಸ್: ಉಪ್ಪಿನಂಗಡಿ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡ ರಾತ್ರಿ ಮೃತಪಟ್ಟಿದ್ದು, ಇದೊಂದು ಕೊಲೆ ಕೃತ್ಯ ಎಂದು ತೀರ್ಮಾನಕ್ಕೆ ಬಂದಿರುವ ಪೊಲೀಸರು ಆರೋಪಿ ಬಾಲಕನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಹೇಮಾವತಿ ಅವರ ಮನೆಯಲ್ಲಿ ರಾತ್ರಿ ತಂಗಿದ್ದ ಅವರ ಅಕ್ಕನ ಮಗ, ಹತ್ತನೇ ತರಗತಿಯ ವಿದ್ಯಾರ್ಥಿ, ಅಪ್ರಾಪ್ತ ಬಾಲಕ ಹೇಮಾವತಿ ಮಲಗಿದಲ್ಲಿಗೆ ಹೋಗಿ ದೇಹ ಸುಖ ಬಯಸಿದ್ದು, ಇದಕ್ಕೆ ಹೇಮಾವತಿ ಪ್ರತಿರೋಧ ವ್ಯಕ್ತಪಡಿಸಿದ್ದು, ಈ ವೇಳೆ ಆರೋಪಿ ಬಾಲಕ

ಉಪ್ಪಿನಂಗಡಿ: ಮಹಿಳೆ ಕೊಲೆ ಪ್ರಕರಣದಲ್ಲಿ ಹತ್ತನೇ ತರಗತಿ ಬಾಲಕ‌ ಸೆರೆ| ನಡುರಾತ್ರಿಯಲ್ಲಿ ಚಿಕ್ಕಮ್ಮನ ಬಯಸಿ ಬಂದಿದ್ದ ಅಪ್ರಾಪ್ತ!! Read More »

ಕಾಸರಗೋಡು: ಕ್ವಾರಿ ಹೊಂಡದಲ್ಲಿ ಮುಳುಗಿ‌ ಅವಳಿ ಬಾಲಕರು ದುರ್ಮರಣ

ಸಮಗ್ರ ನ್ಯೂಸ್: 11 ವರ್ಷದ ಅವಳಿ ಸಹೋದರರು ಕ್ವಾರಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕಾಸರಗೋಡು ಜಿಲ್ಲೆಯ ಇಲ್ಲಿನ ಚೀಮೇನಿಯ ಕಣಿಯಾಂತೋಳ್ ಎಂಬಲ್ಲಿ ನಡೆದಿದೆ. ಮೃತರನ್ನು ಚೀಮೇನಿಯ ರಾಧಾಕೃಷ್ಣನ್ ಮತ್ತು ಪುಷ್ಪಾ ದಂಪತಿಯ ಅವಳಿ ಮಕ್ಕಳಾದ ಸುದೇವ್ ಮತ್ತು ಶ್ರೀದೇವ್ ಎಂದು ಗುರುತಿಸಲಾಗಿದೆ.‌‌ ಇಬ್ಬರೂ ಚೀಮೇನಿ ಹೈಯರ್ ಸೆಕೆಂಡರಿ ಶಾಲೆಯ ಐದನೇ ತರಗತಿ ವಿದ್ಯಾರ್ಥಿಗಳು. ಸೋಮವಾರ ಮಧ್ಯಾಹ್ನ ಮಕ್ಕಳು ಸೈಕಲ್ ಸಮೇತ ಹೊರಗೆ ಆಟವಾಡಲು ಮನೆಯಿಂದ ಹೊರಟಿದ್ದರು. ಸಂಜೆಯಾದರೂ ಇಬ್ಬರೂ ಮನೆಗೆ ಬಾರದೆ ಇದ್ದಾಗ ಅವರ

ಕಾಸರಗೋಡು: ಕ್ವಾರಿ ಹೊಂಡದಲ್ಲಿ ಮುಳುಗಿ‌ ಅವಳಿ ಬಾಲಕರು ದುರ್ಮರಣ Read More »

ಬೆಂಗಳೂರಿನ ರೇಸ್ ಕೋರ್ಸ್ ನಲ್ಲಿ ರೇಸಿಂಗ್/ ಗ್ರೀನ್‌ ಸಿಗ್ನಲ್ ಕೊಟ್ಟ ಹೈಕೋರ್ಟ್

ಸಮಗ್ರ ನ್ಯೂಸ್: ಬೆಂಗಳೂರಿನ ರೇಸ್ ಕೋರ್ಸ್ ನಲ್ಲಿ ಷರತ್ತುಗಳ ಅನ್ವಯ ಕುದುರೆ ಪಂದ್ಯಗಳನ್ನು ಆಯೋಜನೆ ಮಾಡಲು ಕರ್ನಾಟಕ ಹೈಕೋಟ್ ಅನುಮತಿ ನೀಡಿದೆ. ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾ‌ರ್ ಅವರಿದ್ದ ಏಕಸದಸ್ಯ ಪೀಠ, ಮುಂದಿನ ಆದೇಶದವರೆಗೂ ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ರೇಸಿಂಗ್, ಬೆಟ್ಟಿಂಗ್ ಚಟುವಟಿಕೆ ಮುಂದುವರಿಸುವಂತೆ ಮಧ್ಯಂತರ ಅನುಮತಿ ನೀಡಿ ಆದೇಶ ಹೊರಡಿಸಿದೆ. 2024-25ರ ಸಾಲಿನ ರೇಸಿಂಗ್ ಬೆಟ್ಟಿಂಗ್ ಚಟುವಟಿಕೆಗೆ ಅನುಮತಿ ನಿರಾಕರಿಸಲಾಗಿತ್ತು. ಬೆಟ್ಟಿಂಗ್ ಅವ್ಯವಹಾರಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿ ಆದೇಶಿಸಿತ್ತು. ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬೆಂಗಳೂರು

ಬೆಂಗಳೂರಿನ ರೇಸ್ ಕೋರ್ಸ್ ನಲ್ಲಿ ರೇಸಿಂಗ್/ ಗ್ರೀನ್‌ ಸಿಗ್ನಲ್ ಕೊಟ್ಟ ಹೈಕೋರ್ಟ್ Read More »

ಸುಳ್ಯ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ bc ಟ್ರಸ್ಟ್ ಪಾಲೇಪ್ಪಾಡಿ ಒಕ್ಕೂಟದ ವತಿಯಿಂದ ಐವರ್ನಾಡು ಸ.ಹಿ.ಪ್ರಾ.ಶಾಲೆಯಲ್ಲಿ ಪರಿಸರ ದಿನಾಚರಣೆ

ಸಮಗ್ರ ನ್ಯೂಸ್: ಶಾಲಾ ವಿದ್ಯಾರ್ಥಿಗಳಿಗೆ ಪರಿಸರಕ್ಕೆ ಸಂಬಂಧಿಸಿದ ಸ್ಪರ್ಧೆ, ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ bc ಟ್ರಸ್ಟ್ ಸುಳ್ಯ ತಾಲೂಕು ಬೆಳ್ಳಾರೆ ವಲಯ ಪಾಲೇಪ್ಪಾಡಿ ಒಕ್ಕೂಟದ ವತಿಯಿಂದ ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದಿನ ಶಾಲಾ ಮಕ್ಕಳಿಗೆ ಪರಿಸರದ ಬಗ್ಗೆ ಸ್ಪರ್ಧೆ ನಡೆಸಿ ಬಹುಮಾನ ವಿತರಣೆ ಮತ್ತು ಶಾಲೆಯಲ್ಲಿ ಗಿಡ ನಾಟಿ ಮಕ್ಕಳಿಗೆ ಗಿಡವಿತರಣೆ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕಿನ ಮಾನ್ಯ ಯೋಜನಾಧಿಕಾರಿ ಮಾಧವ ಗೌಡ

ಸುಳ್ಯ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ bc ಟ್ರಸ್ಟ್ ಪಾಲೇಪ್ಪಾಡಿ ಒಕ್ಕೂಟದ ವತಿಯಿಂದ ಐವರ್ನಾಡು ಸ.ಹಿ.ಪ್ರಾ.ಶಾಲೆಯಲ್ಲಿ ಪರಿಸರ ದಿನಾಚರಣೆ Read More »