June 2024

ಉಡುಪಿ: ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ: ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್‌ : ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಉಡುಪಿ‌ ಅಂಬಾಗಿಲಿನಲ್ಲಿ ಸಂಭವಿಸಿದೆ. ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಸಂಚರಿಸುತಿದ್ದ ಕಾರು ಅತೀ ವೇಗದಲ್ಲಿ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆಯಲ್ಲಿ ಕಾರಿನ ಬಿಡಿಭಾಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಅಪಘಾತದ ಭೀಕರತೆಗೆ ಸಾಕ್ಷಿಯಾಗಿವೆ. ಕಾರಿನ ಇಂಜಿನ್ ಬೇರ್ಪಟ್ಟು ಮಾರುದ್ದ ಹೋಗಿ ಬಿದ್ದಿದೆ. ಗಾಯಗೊಂಡ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ […]

ಉಡುಪಿ: ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ: ನಾಲ್ವರಿಗೆ ಗಾಯ Read More »

ಅಥಣಿ: ಅಗ್ನಿಶಾಮಕ ಸಿಬ್ಬಂದಿಗೆ ಒಲಿದು ಬಂದ ಮುಖ್ಯಮಂತ್ರಿ ಚಿನ್ನದ ಪದಕ

ಸಮಗ್ರ ನ್ಯೂಸ್: ವಿಪತ್ತು ಹಾಗೂ ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಅತ್ಯುತ್ತಮ ಸೇವೆಯನ್ನ ಸಲ್ಲಿಸಿದ ಅನಿಲ ಕುಮಾರ್ ಬಡಚಿ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಒಲಿದು ಬಂದಿದೆ. ಅಗ್ನಿ ಅವಗಡ ಮತ್ತು ವಿಪತ್ತು ಮತ್ತು ತುರ್ತು ಸೇವೆಗಳ ಸಂದರ್ಭದಲ್ಲಿ ನಾಗರಿಕರ ಜೀವ ರಕ್ಷಣೆ ಹಾಗೂ ಆಸ್ತಿ ಸಂರಕ್ಷಣಾ ಕಾರ್ಯದಲ್ಲಿ ತಮ್ಮ ಪ್ರಾಣದ ಹಂಗನ್ನು ತೊರೆದು ಅತ್ಯುತ್ತಮ ಸೇವೆ ಸಲ್ಲಿಸಿದ ಅಗ್ನಿಶಾಮಕ ಮತ್ತು ಅಧಿಕಾರಿ ಹಾಗೂ ಸಿಬ್ಬಂದಿ ಗಳಿಗೆ ಮುಖ್ಯ ಮಂತ್ರಿ ಚಿನ್ನದ ಪದಕವನ್ನ ಜೂ. 11 ರಂದು ಬೆಂಗಳೂರಿನ ಅಗ್ನಿಶಾಮಕ

ಅಥಣಿ: ಅಗ್ನಿಶಾಮಕ ಸಿಬ್ಬಂದಿಗೆ ಒಲಿದು ಬಂದ ಮುಖ್ಯಮಂತ್ರಿ ಚಿನ್ನದ ಪದಕ Read More »

ದರ್ಶನ್ ಚಿತ್ರರಂಗದಿಂದ ಬ್ಯಾನ್ ವಿಚಾರ| ಫಿಲ್ಮ್ ಚೇಂಬರ್ ನಿಂದ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ದರ್ಶನ್ & ಸಹಚರರಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಈಗ ಪೊಲೀಸರ ಬಲೆಗೆ ಬಿದ್ದಿದ್ದಾರೆ. ದರ್ಶನ್, ಪವಿತ್ರಾ ಗೌಡ ಹಾಗೂ ಅವರ ಸಹಚರರನ್ನೂ ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಈ ಕೊಲೆ ಆರೋಪದಿಂದ ದರ್ಶನ್ ಅವರನ್ನು ಚಿತ್ರರಂಗದಲ್ಲಿ ಬ್ಯಾನ್ ಮಾಡಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ. ಇದರ ಕುರಿತು ನಿನ್ನೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು. ಈ ವೇಳೆ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ಎಂ ಸುರೇಶ್ ಮಾತನಾಡಿ ‘ಯಾವ ಚಿತ್ರರಂಗದಲ್ಲೂ

ದರ್ಶನ್ ಚಿತ್ರರಂಗದಿಂದ ಬ್ಯಾನ್ ವಿಚಾರ| ಫಿಲ್ಮ್ ಚೇಂಬರ್ ನಿಂದ ಪ್ರತಿಕ್ರಿಯೆ Read More »

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವು..!

ಸಮಗ್ರ ನ್ಯೂಸ್: ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಬೆಂಗಳೂರು ಮೂಲದ ವಿಶಾಲ್(19)‌ ಹಾಗೂ ತಮಿಳುನಾಡು ಮೂಲದ ರೋಹನ್ (18) ಮೃತ ಯುವಕರು. ಈ ಯುವಕರು ಮೈಸೂರಿನ ಅಜ್ಜಿ ಮನೆಗೆ ಪೋಷಕರೊಂದಿಗೆ ಬಂದಿದ್ದರು‌. ಶ್ರೀರಂಗಪಟ್ಟಣದ ನಿಮಿಷಾಂಭ ದೇವಿ ದರ್ಶನಕ್ಕಾಗಿ ಕುಟುಂಬ ಸಮೇತ ಬಂದಿದ್ದರು. ಇದೇ ಸಂದರ್ಭದಲ್ಲಿ ಯುವಕರಿಬ್ಬರುಈಜಲು ಕಾವೇರಿ ನದಿಗಿಳಿದಿದ್ದರು. ಆದರೆ ಇವರಿಬ್ಬರಿಗೂ ಈಜು ಬಾರದೇ ಸಾವನ್ನಪ್ಪಿದ್ದಾರೆ. ಇನ್ನು ಮಗನನ್ನ ಕಳೆದುಕೊಂಡ ತಾಯಿ ರೋಧನೆ ಮುಗಿಲು ಮುಟ್ಟಿದ್ದು, ಕಾವೇರಿ

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವು..! Read More »

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣ| ಜೈಲುಪಾಲಾಗಿದ್ದ ಆರೋಪಿಗಳಿಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಆರೋಪಿ ಶಶಿರಾಜ್ ಶೆಟ್ಟಿ ಗೆ 25 ದಿನಗಳ ಬಳಿಕ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅದರಂತೆ ನಾಪತ್ತೆಯಾಗಿದ್ದ ಮತ್ತೊಬ್ಬ ಆರೋಪಿ ಪ್ರಮೋದ್ ದಿಡುಪೆಗೂ ಷರತ್ತು ಬದ್ಧ ಜಾಮೀನು ಮಂಜೂರಾಗಿದೆ. ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಮೇ.18 ರಂದು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿದ್ದರು. ಬಳಿಕ ಪ್ರಕರಣದ ಆರೋಪಿಯಾದ ಶಶಿರಾಜ್ ಶೆಟ್ಟಿಯನ್ನು ಮೇ.18

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣ| ಜೈಲುಪಾಲಾಗಿದ್ದ ಆರೋಪಿಗಳಿಗೆ ಜಾಮೀನು ಮಂಜೂರು Read More »

ಭದ್ರತಾ ಸಲಹೆಗಾರರಾಗಿ ಮತ್ತೆ ನೇಮಕಗೊಂಡ ಅಜಿತ್ ದೋವಲ್

ಸಮಗ್ರ ನ್ಯೂಸ್: ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್‌ ಅವರನ್ನು ಕೇಂದ್ರ ಸರ್ಕಾರವು ಮೂರನೇ ಅವಧಿಗೂ ಸಲಹೆಗಾರರನ್ನಾಗಿ ನೇಮಕ ಮಾಡಿದೆ . ಇದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮುಖ್ಯ ಕಾರ್ಯದರ್ಶಿಯಾಗಿ ಪಿ.ಕೆ.ಮಿಶ್ರಾ ಅವರೇ ಮುಂದುವರಿಯಲಿದ್ದಾರೆ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಅಜಿತ್ ದೋವಲ್ ಅವರನ್ನು ಮೂರನೇ ಅವಧಿಗೆ ನೇಮಿಸಿರುವ ಕುರಿತು ಸಂಪುಟದ ನೇಮಕಾತಿ ಸಮಿತಿಯು ಆದೇಶ ಹೊರಡಿಸಿದೆ. ನೂತನ ಆದೇಶದ ಪ್ರಕಾರ, ಅಜಿತ್ ದೋವಲ್ ಅವರು ನರೇಂದ್ರ ಮೋದಿ ಅವರು ಪ್ರಧಾನಿಯಾಗಿರುವವರೆಗೆ

ಭದ್ರತಾ ಸಲಹೆಗಾರರಾಗಿ ಮತ್ತೆ ನೇಮಕಗೊಂಡ ಅಜಿತ್ ದೋವಲ್ Read More »

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಜಾಮೀನು ರಹಿತ ವಾರಂಟ್ ಜಾರಿ| ಬಂಧನ ಬೀತಿಯಲ್ಲಿ ರಾಜಾಹುಲಿ

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸಲ್ಲಿ ಸಿಐಡಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಈ ಬೆನ್ನಲ್ಲೇ ಕೋರ್ಟ್ ನಿಂದ ಬಿಎಸ್ ಯಡಿಯೂರಪ್ಪ ಅವರಿಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿರೋದಾಗಿ ತಿಳಿದು ಬಂದಿದೆ. ಪೋಕ್ಸ್ ಕೇಸ್ ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಬಂಧನದ ಭೀತಿ ಎದುರಾಗಿದೆ. ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯವು ಇಂದು ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಜಾರಿಗೊಳಿಸಿದೆ. ಮತ್ತೊಂದೆಡೆ ಗೃಹ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಜಾಮೀನು ರಹಿತ ವಾರಂಟ್ ಜಾರಿ| ಬಂಧನ ಬೀತಿಯಲ್ಲಿ ರಾಜಾಹುಲಿ Read More »

ಟೋಲ್ ಸಿಬ್ಬಂದಿ ಹಣ ಕೇಳಿದ್ದಕ್ಕೆ ಟೋಲ್ ಬೂತನ್ನೇ ನೆಲಸಮ ಮಾಡಿದ ಜೆಸಿಬಿ ಚಾಲಕ

ಸಮಗ್ರ ನ್ಯೂಸ್: ದೆಹಲಿ-ಲಕ್ನೋ ಹೆದ್ದಾರಿ ಎನ್ಎಚ್-9 ಪಿಲ್ಖುವಾ ಪೊಲೀಸ್ ಠಾಣಾ ವ್ಯಾಪ್ತಿಯ ಛಿಜರಾಸಿ ಟೋಲ್ ಪ್ಲಾಜಾ ಹಾದು ಹೋಗುತ್ತಿದ್ದ ಜೆಸಿಬಿ ಡ್ರೈವರ್ ಬಳಿ ಹಣ ಕೇಳಿದ್ದು ಆತ ಜಗಳಕ್ಕಿಳಿದಿದ್ದಾನೆ. ಬಳಿಕ ಬುಲ್ಡೋಸರ್ನಿಂದ ಟೋಲ್ ಪ್ಲಾಜಾವನ್ನು ನೆಲಸಮಗೊಳಿಸಿದ್ದಾನೆ. ಟೋಲ್ ಸಿಬ್ಬಂದಿ ಎಲ್ಲವನ್ನೂ ವಿಡಿಯೋ ಮಾಡಿದ್ದಾರೆ, ಆತ ಟೋಲ್ ಕೆಡಗುವ ಸಂಪೂರ್ಣ ವಿಡಿಯೋ ವೈರಲ್ ಆಗಿದೆ. ಜೆಸಿಬಿ ಚಾಲಕ ಟೋಲ್ ಬೂತ್ ಮೂಲಕ ಹಾದುಹೋಗುತ್ತಿದ್ದ, ಹಾಗಾಗಿ ಟೋಲ್ ಸಿಬ್ಬಂದಿ ಹಣ ಕೇಳಿದ್ದಾರೆ ಅದಕ್ಕೆ ಚಾಲಕ ಆವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು

ಟೋಲ್ ಸಿಬ್ಬಂದಿ ಹಣ ಕೇಳಿದ್ದಕ್ಕೆ ಟೋಲ್ ಬೂತನ್ನೇ ನೆಲಸಮ ಮಾಡಿದ ಜೆಸಿಬಿ ಚಾಲಕ Read More »

ಪುತ್ತೂರು: ಹಾಡುಹಗಲೇ ವ್ಯಕ್ತಿ ಮೇಲೆ ಚೂರಿ ಇರಿತ| ಗಾಯಾಳು ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಹಾಡುಹಗಲೇ ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಘಟನೆ ಜೂ.13ರಂದು ಪುತ್ತೂರು ಕೋರ್ಟ್ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಗುಣಕರ ಶೆಟ್ಟಿ ಮತ್ತು ಸದಾಶಿವ ಪೈ ಎಂಬ ಇಬ್ಬರ ನಡುವೆ ಗಲಾಟೆ ನಡೆದಿದ್ದು, ನಗರದ ದರ್ಬೆ ನಿವಾಸಿ ಸದಾಶಿವ ಪೈ ಚೂರಿ ಇರಿತಕ್ಕೊಳಗಾಗಿದ್ದಾರೆ. ಚೂರಿ ಇರಿತದಿಂದ ಗಾಯಗೊಂಡ ಸದಾಶಿವ ಅವರನ್ನು ಪುತ್ತೂರು‌ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನ ಪಾರ್ಕಿಂಗ್ ವಿಚಾರದಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಪುತ್ತೂರು: ಹಾಡುಹಗಲೇ ವ್ಯಕ್ತಿ ಮೇಲೆ ಚೂರಿ ಇರಿತ| ಗಾಯಾಳು ಆಸ್ಪತ್ರೆಗೆ ದಾಖಲು Read More »

ನಟ ದುನಿಯಾ ವಿಜಯ್ ವಿಚ್ಛೇದನ ಅರ್ಜಿ ವಜಾ

ಸಮಗ್ರ ನ್ಯೂಸ್: ನಟ ದುನಿಯಾ ವಿಜಯ್ ಅವರು ವಿಚ್ಛೇಧನ ಕೋರಿ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು. ಇಂತಹ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯವು ವಜಾಗೊಳಿಸಿದೆ. ನಟ ದುನಿಯಾ ವಿಜಯ್ ಕ್ರೌರ್ಯದ ಆಧಾರದಲ್ಲಿ ಪತ್ನಿ ನಾಗರತ್ನರಿಂದ ವಿಚ್ಛೇಧನ ನೀಡುವಂತೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು. ಆದರೇ ಆರೋಪ ಸಾಭೀತು ಪಡಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ನಟ ದುನಿಯಾ ವಿಜಯ್ ಸಲ್ಲಿಸಿದ್ದಂತ ವಿಚ್ಛೇಧನ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಾಲಯಕ್ಕೆ ನಟ ದುನಿಯಾ ವಿಜಯ್ ವಿಚ್ಛೇಧನ ಕೋರಿ

ನಟ ದುನಿಯಾ ವಿಜಯ್ ವಿಚ್ಛೇದನ ಅರ್ಜಿ ವಜಾ Read More »