June 2024

‘ಶಕ್ತಿ’ ಯೋಜನೆಗೆ ವರ್ಷದ ಹರುಷ| 225 ಕೋಟಿ ಮಹಿಳೆಯರಿಗೆ ಲಾಭ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೊಜನೆ ಒಂದು ವರ್ಷ ಪೂರೈಸಿದೆ. ಯೋಜನೆ ಅಡಿಯಲ್ಲ ಜೂನ್‌ 9 ರವರೆಗೆ 225.15 ಕೋಟಿ ಮಹಿಳಾ ಪ್ರಯಾಣಿಕರು ಲಾಭ ಪಡೆದಿದ್ದಾರೆ. ಕಳೆದೊಂದು ವರ್ಷದಲ್ಲಿ 225.15 ಕೋಟಿ ಮಹಿಳಾ ಪ್ರಯಾಣಿಕರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲೂ ಉಚಿ ಪ್ರಯಾಣ ಮಾಡಿದ್ದಾರೆ. ಈ ಮೂಲಕ ಜೂ.9 ರವರೆಗೆ ಒಟ್ಟು5481.40 ಕೋಟಿ ರೂ.ಗಳನ್ನು ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಗಾಗಿ […]

‘ಶಕ್ತಿ’ ಯೋಜನೆಗೆ ವರ್ಷದ ಹರುಷ| 225 ಕೋಟಿ ಮಹಿಳೆಯರಿಗೆ ಲಾಭ Read More »

ಯುವ ರಾಜ್‌ಕುಮಾರ್‌ಗೆ ನಟಿ ಸಪ್ತಮಿ ಗೌಡ ಜತೆ ಸಂಬಂಧ: ಪತ್ನಿ ಆರೋಪ

ಸಮಗ್ರ ನ್ಯೂಸ್ : ಡಾ.ರಾಜ್‌ಕುಮಾರ್‌ ವಂಶದಲ್ಲಿ ವಿಚ್ಛೇದನ ಇದೇ ಮೊದಲು ಕೇಳಿ ಬಂದಿದ್ದು, ನಟ ಯುವ ರಾಜ್‌ಕುಮಾರ್‌ ಅವರ ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ಡಿವೋರ್ಸ್ ನೋಟಿಸ್‌ ನೀಡಿದ ಬಳಿಕ ಇಬ್ಬರ ನಡುವಿನ ಆರೋಪಗಳು ಜಾಸ್ತಿಯಾಗಿವೆ. ಅದರಲ್ಲೂ, ಅನೈತಿಕ ಸಂಬಂಧಗಳ ಆರೋಪಗಳು ಇನ್ನೂ ಹೆಚ್ಚಾಗಿವೆ. ಹೌದು “ಶ್ರೀದೇವಿ ಭೈರಪ್ಪ ಅವರು ರಾಧಯ್ಯ ಎಂಬ ವ್ಯಕ್ತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಇನ್ನು, ನಟನ ಲೀಗಲ್‌

ಯುವ ರಾಜ್‌ಕುಮಾರ್‌ಗೆ ನಟಿ ಸಪ್ತಮಿ ಗೌಡ ಜತೆ ಸಂಬಂಧ: ಪತ್ನಿ ಆರೋಪ Read More »

ಮೋದಿ ಕ್ಯಾಬಿನೆಟ್ 3.0| ಯಾರಿಗೆ ಯಾವ ಖಾತೆ? ಇಲ್ಲಿದೆ ನೂತನ ಸಚಿವರ ಖಾತೆ ಹಂಚಿಕೆ ಲಿಸ್ಟ್

ಸಮಗ್ರ ನ್ಯೂಸ್: ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ನರೇಂದ್ರ ಮೋದಿ ಅವರು ಮಹತ್ವದ ಖಾತೆಗಳನ್ನು ಬಿಜೆಪಿ ಸಚಿವರಿಗೇ ನೀಡಿದ್ದಾರೆ. ಕೇಂದ್ರ ಗೃಹ ಖಾತೆಯನ್ನು ಅಮಿತ್‌ ಶಾ ಅವರೇ ಹಾಗೂ ರಾಷ್ಟ್ರೀಯ ಹೆದ್ದಾರಿ ಹಾಗೂ ಭೂಸಾರಿಗೆ ಖಾತೆಗಳನ್ನು ನಿತಿನ್‌ ಗಡ್ಕರಿ ಅವರೇ ಮುಂದುವರೆಸಿಕೊಂಡು ಹೋಗಲಿದ್ದಾರೆ. ಹೀಗಿದೆ ಸಂಪುಟ ದರ್ಜೆ ಸಚಿವರ ಪಟ್ಟಿ ಹಾಗೂ ಅವರ ಖಾತೆಗಳು:ನರೇಂದ್ರ ಮೋದಿ: ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ, ಪರಮಾಣು ಶಕ್ತಿ, ಬಾಹ್ಯಾಕಾಶ, ಪ್ರಮುಖ

ಮೋದಿ ಕ್ಯಾಬಿನೆಟ್ 3.0| ಯಾರಿಗೆ ಯಾವ ಖಾತೆ? ಇಲ್ಲಿದೆ ನೂತನ ಸಚಿವರ ಖಾತೆ ಹಂಚಿಕೆ ಲಿಸ್ಟ್ Read More »

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ಡಾ. ಎಸ್.ಪಿ. ಬಾಲಸುಬ್ರಮಣ್ಯಂ ಸಂಗೀತ ಸಂಭ್ರಮ

ಸಮಗ್ರ ನ್ಯೂಸ್: ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಸ್ವರ ಮಾಂತ್ರಿಕ, ಗಾನಗಂಧರ್ವ, ಪದ್ಮಭೂಷಣ ಡಾ. ಎಸ್.ಪಿ. ಬಾಲಸುಬ್ರಮಣ್ಯಂ ಅವರ 78ನೇ ಜನ್ಮದಿನಾಚರಣೆಯ ಪ್ರಯುಕ್ತ ಎಸ್.ಪಿ.ಬಿ. ಸಂಗೀತ ಸಂಭ್ರಮ ಕಾರ್ಯಕ್ರಮವು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ನ ಸಭಾಂಗಣದ ವೇದಿಕೆಯಲ್ಲಿ ಜೂನ್ 9ರಂದು ನಡೆಸಲಾಯಿತು. ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷರು, ಗಾಯಕರು ಮತ್ತು ಚಿತ್ರ ನಿರ್ದೇಶಕ ಹೆಚ್. ಭೀಮರಾವ್ ವಾಷ್ಠರ್ ರವರು ವಹಿಸಿ, ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಸಾಧನೆ, ವ್ಯಕ್ತಿತ್ವದ ಗುಣಗಾನ ಮಾಡಿದರು.

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ಡಾ. ಎಸ್.ಪಿ. ಬಾಲಸುಬ್ರಮಣ್ಯಂ ಸಂಗೀತ ಸಂಭ್ರಮ Read More »

ಬಂಟ್ವಾಳ: ವಿಜಯೋತ್ಸವದ ವೇಳೆ ಚೂರಿ ಇರಿತ ಪ್ರಕರಣ| ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಕೊಣಾಜೆ ಠಾಣಾ ವ್ಯಾಪ್ತಿಯ ಬೊಳಿಯಾರ್ ನಲ್ಲಿ ವಿಜಯೋತ್ಸವ ಆಚರಿಸುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದ ಪ್ರಕರಣದಲ್ಲಿ ಆರೋಪಿಗಳನ್ನ ಬಂಧಿಸಲಾಗಿದೆ. ಜೊತೆಗೆ ಪ್ರಚೋದನಾಕಾರಿ ಘೋಷಣೆ ಕೂಗಿದ ಆರೋಪದಡಿ ಐವರು ಬಿಜೆಪಿ ಕಾರ್ಯಕರ್ತರ ವಿರುದ್ಧವೂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಘಟನೆ ಬಗ್ಗೆ ಬಿಜೆಪಿ ಕಾರ್ಯಕರ್ತರ ವಿರುದ್ಧವೂ ದೂರು ನೀಡಿರುವ ಬೋಳಿಯಾರ್ ಜುಮ್ಮಾ ಮಸೀದಿ ಅಧ್ಯಕ್ಷ ಪಿ.ಕೆ.ಅಬ್ದುಲ್ಲ, ನಿನ್ನೆ ರಾತ್ರಿ 8.50

ಬಂಟ್ವಾಳ: ವಿಜಯೋತ್ಸವದ ವೇಳೆ ಚೂರಿ ಇರಿತ ಪ್ರಕರಣ| ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ Read More »

ಎನ್‌ಡಿಎ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ/ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು

ಎನ್‌ಡಿಎ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನ ಮಂತ್ರಿ ಆವಾಸ್‌ ಯೋಜನೆ (ಪಿಎಂಎವೈ) ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು ಒದಗಿಸಲು ತೀರ್ಮಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ದೇಶದ ಪ್ರಧಾನಿಯಾದ ಬಳಿಕ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ಪಿಎಂಎವೈ ಯೋಜನೆಗೆ ಅರ್ಹ ಕುಟುಂಬಗಳ ಸಂಖ್ಯೆ ಹೆಚ್ಚಾಗಿರುವುದನ್ನು ಪರಿಗಣಿಸಿ, ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅಧಿಕಾರಿಗಳು

ಎನ್‌ಡಿಎ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ/ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು Read More »

ಎಸ್ಡಿಪಿಐ ಕಡಬ ಬ್ಲಾಕ್ ನ ಕಡಬ ಪಟ್ಟಣ ಪಂಚಾಯತ್ ಸಮಿತಿಯ ಸಭೆ| ನೂತನ ಪದಾಧಿಕಾರಿಗಳ ಆಯ್ಕೆ

ಸಮಗ್ರ ನ್ಯೂಸ್: ಎಸ್ಡಿಪಿಐ (SDPI) ಕಡಬ ಬ್ಲಾಕ್ ನ ಕಡಬ ಪಟ್ಟಣ ಪಂಚಾಯತ್ ಸಮಿತಿಯ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಬ್ಲಾಕ್ ಸಮಿತಿಯ ಅಧ್ಯಕ್ಷ ಹಾರೀಸ್ ಕಡಬ ರವರ ನೇತೃತ್ವದಲ್ಲಿ ಜೂನ್ 8ರಂದು ಕಲಾರದಲ್ಲಿ ನಡೆಯಿತು. ಸಭೆಯಲ್ಲಿ ಕಡಬ ಪಟ್ಟಣ ಪಂಚಾಯತ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು. ಅಧ್ಯಕ್ಷರಾಗಿ ನವಾಜ್ ಕಡಬ, ಕಾರ್ಯದರ್ಶಿಯಾಗಿ ಶಕೀಲ್ ರಹೀಮನ್ ಕಳಾರ, ಕೋಶಾಧಿಕಾರಿಯಾಗಿ ಕಮರುದ್ದಿನ್ ಅಲೆಕ್ಕಾಡಿ,ಉಪಾಧ್ಯಕ್ಷರಾಗಿ ರಫೀಕ್ ಕಳಾರ, ಜೊತೆ ಕಾರ್ಯದರ್ಶಿ ಯಾಗಿ ಆಶೀಕ್ ಕಡಬಇವರನ್ನು ಆರಿಸಲಾಯಿತು. ಸಭೆಯಲ್ಲಿ

ಎಸ್ಡಿಪಿಐ ಕಡಬ ಬ್ಲಾಕ್ ನ ಕಡಬ ಪಟ್ಟಣ ಪಂಚಾಯತ್ ಸಮಿತಿಯ ಸಭೆ| ನೂತನ ಪದಾಧಿಕಾರಿಗಳ ಆಯ್ಕೆ Read More »

ಸುಳ್ಯ: ಚಂದನ ಸಾಹಿತ್ಯ ವೇದಿಕೆಯಿಂದ ಮುಂಗಾರು ಕವಿಗೋಷ್ಠಿ, ಕೃತಿ ಬಿಡುಗಡೆ

ಸಮಗ್ರ ನ್ಯೂಸ್: ಜೂ.9 ರಂದು ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೇವಮ್ಮ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ಮುಂಗಾರು ಕವಿಗೋಷ್ಠಿ ಮತ್ತು ಧಾರ್ಮಿಕ ಕೃತಿ ಬಿಡುಗಡೆ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಜ್ಯೋತಿಷ್ಯ, ಗಾಯಕ ಮತ್ತು ಚಿತ್ರ ನಿರ್ದೇಶಕ ಎಚ್. ಭೀಮರಾವ್ ವಾಷ್ಠರ್ ರವರು ವಹಿಸಿದ್ದರು. ಉದ್ಘಾಟನೆಯನ್ನು ಚೈತನ್ಯ ಸೇವಾಶ್ರಮ ಇದರ ಸಂಚಾಲಕ ಶ್ರೀ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿ ಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ಳಾರೆಯ ಕೆ. ಶಿವರಾಮ ಕಾರಂತ್

ಸುಳ್ಯ: ಚಂದನ ಸಾಹಿತ್ಯ ವೇದಿಕೆಯಿಂದ ಮುಂಗಾರು ಕವಿಗೋಷ್ಠಿ, ಕೃತಿ ಬಿಡುಗಡೆ Read More »

ಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತ ಮಿಂಚುಬಂಧಕ ಅಳವಡಿಕೆ – ಸಚಿವ ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಲ್ಲಿ ಸಿಡಿಲು-ಗುಡುಗಿನಿಂದ ಸಾವು ಪ್ರಕರಣ ಹೆಚ್ಚಾಗಿ ಸಂಭವಿಸುವ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಿಂಚು ಪ್ರತಿಬಂಧಕ ವ್ಯವಸ್ಥೆಯನ್ನು ಅಳವಡಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಂದರ್ಭ ಸಂಭವನೀಯ ಪ್ರಾಕೃತಿಕ ವಿಕೋಪದ ಸಿದ್ಧತೆ ಸೇರಿದಂತೆ ವಿವಿಧ ವಿಷಯಗಳ ಕುರಿತಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ಸಚಿವರು ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಆರಂಭಿಕ

ಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತ ಮಿಂಚುಬಂಧಕ ಅಳವಡಿಕೆ – ಸಚಿವ ದಿನೇಶ್ ಗುಂಡೂರಾವ್ Read More »

ಪದಗ್ರಹಣ‌‌ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಸುರೇಶ್ ಗೋಪಿ| ತ್ರಿಶ್ಯೂರ್ ಸಂಸದರ ಈ ನಿರ್ಧಾರಕ್ಕೆ ಕಾರಣವೇನು?

ಸಮಗ್ರ ನ್ಯೂಸ್: 2024ರ ಲೋಕಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಕೇರಳದ ತ್ರಿಶ್ಶೂರ್‌ ನಲ್ಲಿ ನಟ ಸುರೇಶ್‌ ಗೋಪಿ ಗೆಲುವು ಸಾಧಿಸುವ ಮೂಲಕ ದೇವರ ನಾಡಿನಲ್ಲಿ ಭಾರತೀಯ ಜನತಾ ಪಕ್ಷ ಖಾತೆ ತೆರೆದಿತ್ತು. ಇದರೊಂದಿಗೆ ಸುರೇಶ್‌ ಗೋಪಿ ಭಾನುವಾರ ಮೋದಿ 3.0 ಸರ್ಕಾರದಲ್ಲಿ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸುವ ಮೂಲಕ ಅಚ್ಚರಿ ಹುಟ್ಟಿಸಿದ್ದಾರೆ. ಕೇಂದ್ರದ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿದ

ಪದಗ್ರಹಣ‌‌ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಸುರೇಶ್ ಗೋಪಿ| ತ್ರಿಶ್ಯೂರ್ ಸಂಸದರ ಈ ನಿರ್ಧಾರಕ್ಕೆ ಕಾರಣವೇನು? Read More »