June 2024

ಇನ್ನು 5 ದಿನ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಐದು ದಿನಗಳ ಕಾಲ ಮಳೆಯಾಗಲಿದೆ. ಈಗಾಗಲೇ ಮೋಡ ಕವಿದ ವಾತಾವರಣ ಇದ್ದು ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ತಿಳಿಸಿದೆ.

ಇನ್ನು 5 ದಿನ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ Read More »

‘ಪಾಕಿಸ್ತಾನದ ಜೊತೆ ಕ್ರಿಕೆಟ್ ಆಡಲೇಬಾರದು, ಆಡಿದರೂ ಹೀನಾಯವಾಗಿ ಸೋಲಿಸಬೇಕು’ – ಯು.ಟಿ ಖಾದರ್

ಸಮಗ್ರ ನ್ಯೂಸ್: ‘ನಾವು ಪಾಕಿಸ್ತಾನದ ಜೊತೆ ಕ್ರಿಕೆಟ್ ಆಟ ಆಡಲೇಬಾರದು. ಪಾಕಿಸ್ತಾನದವರು ಇಲ್ಲಿ ಬಂದಾಗ ವಿರೋಧಿಸಿದ್ದನ್ನು ನೋಡಿದ್ದೇವೆ. ಭಾರತ ದೇಶದಲ್ಲಿ ಅವರ ಜತೆ ಪಂದ್ಯ ಬ್ಯಾನ್ ಮಾಡಲಾಗಿದೆ. ಹಾಗಾದ ಮೇಲೆ ಹೊರದೇಶದಲ್ಲಿ ಯಾಕೆ ಆಟ ಆಡಿಸಬೇಕು? ಅವರು ಸರಿಯಾಗುವ ತನಕ‌ ಅವರ ಜತೆ ಪಂದ್ಯ ಆಡುವುದೇ ಬೇಡ. ಇದು ನನ್ನ ವೈಯಕ್ತಿಕ ಅಂತರಾಳದ ಅನಿಸಿಕೆ’, ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಒಂದು ವೇಳೆ ಬಾಂಧವ್ಯ ಸರಿಯಾಗಿದ್ದರೆ ಮತ್ತೆ ನಮ್ಮಲ್ಲಿ ಯಾಕೆ ಆಡುವುದಿಲ್ಲ? ಮ್ಯಾಚ್

‘ಪಾಕಿಸ್ತಾನದ ಜೊತೆ ಕ್ರಿಕೆಟ್ ಆಡಲೇಬಾರದು, ಆಡಿದರೂ ಹೀನಾಯವಾಗಿ ಸೋಲಿಸಬೇಕು’ – ಯು.ಟಿ ಖಾದರ್ Read More »

ಹವಾಮಾನ ವರದಿ| ಕರಾವಳಿಗೆ ಜೂ.9ರಂದು ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಧಾರಾಕಾರ ಮಳೆ ಸುರಿಯುತ್ತಿದ್ದು, ಕೆಲಜಿಲ್ಲೆಗಳಲ್ಲಿ ಭಾರಿ ಮಳೆ ಅವಾಂತರವನ್ನು ಸೃಷ್ಟಿಸಿದೆ. ಸದ್ಯ ಭಾರಿ ಮಳೆ ಸಂಭವವಿರುವ ಕಾರಣ ಮುಂದಿನ 24 ಗಂಟೆಗಳಿಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಅರೇಂಜ್ ಅಲರ್ಟ್. ದಕ್ಷಿಣ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ

ಹವಾಮಾನ ವರದಿ| ಕರಾವಳಿಗೆ ಜೂ.9ರಂದು ರೆಡ್ ಅಲರ್ಟ್ ಘೋಷಣೆ Read More »

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲೋದಿಲ್ಲ – ಡಾ. ಪರಮೇಶ್ವರ್ ಜಿ.

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ನಿರೀಕ್ಷಿತ ಸ್ಥಾನಗಳನ್ನು ಗಳಿಸದೆ ಹೋಗಿದ್ದರಿಂದ ಇದೀಗ ಕಾಂಗ್ರೆಸ್ ನಾಯಕರೇ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವ ವಿಚಾರದ ಕುರಿತು ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಈ ವಿಚಾರದ ಕುರಿತಾಗಿ ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಕರ್ನಾಟಕ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಕರ್ನಾಟಕ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವ ಬಗ್ಗೆ ಸಿಎಂ

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲೋದಿಲ್ಲ – ಡಾ. ಪರಮೇಶ್ವರ್ ಜಿ. Read More »

ಉಡುಪಿ: ವಿದ್ಯಾರ್ಥಿನಿಯರ ಮೇಲೆ ಪ್ರಭಾವಿ ಉದ್ಯಮಿಯ ಲೈಂಗಿಕ ದೌರ್ಜನ್ಯ| ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತಕಾಮಿ ಕೊನೆಗೂ ಅರೆಸ್ಟ್

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಲ್ಲಿ ನಡೆದ ಈ ಪ್ರಕರಣವು ಪ್ರಜ್ವಲ್ ರೇವಣ್ಣ ಪ್ರಕರಣದ ಮಾದರಿಯನ್ನು ಹೋಲುತ್ತಿದ್ದು, ಉದ್ಯಮಿಯೊಬ್ಬ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದ. ಇದೀಗ ಕುಂದಾಪುರ ಪೋಲೀಸರು ಆತನನ್ನು ಬಂಧಿಸುವಲ್ಲಿ ಯಶ ಸಾಧಿಸಿದ್ದಾರೆ. ಶ್ರೇಯಸ್ ನಾಯ್ಕ (25) ಈ ಪ್ರಕರಣದ ಆರೋಪಿ. ಈತ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗುವ

ಉಡುಪಿ: ವಿದ್ಯಾರ್ಥಿನಿಯರ ಮೇಲೆ ಪ್ರಭಾವಿ ಉದ್ಯಮಿಯ ಲೈಂಗಿಕ ದೌರ್ಜನ್ಯ| ವಿಡಿಯೋ ಮಾಡಿಕೊಳ್ಳುತ್ತಿದ್ದ ವಿಕೃತಕಾಮಿ ಕೊನೆಗೂ ಅರೆಸ್ಟ್ Read More »

ಗೃಹ ಲಕ್ಷ್ಮಿ ಯೋಜನೆ ಬಿಗ್ ಅಪ್ಡೇಟ್| ಇನ್ಮುಂದೆ ಇವರಿಗೂ ಸಿಗಲಿದೆ ₹2000

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಇದೀಗ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಡಿದ್ದು, ಮುಂದಿನ ತಿಂಗಳಿನಿಂದೇ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಯೋಜನೆಯಡಿ ಹಣ ಜಮೆ ಮಾಡಲು ನಿರ್ಧರಿಸಿದೆ. ಈಗಾಗಲೇ ಅರ್ಜಿ ಸಹ ಸಿದ್ಧವಾಗುತ್ತಿದ್ದು, ಜಿಲ್ಲಾಧಿಕಾರಿಗಳು ನೀಡಿರುವ ಗುರುತಿನ ಚೀಟಿ ನೀಡಿ ಗೃಹಲಕ್ಷ್ಮಿಹಣಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಇದೇ ತಿಂಗಳ ಕೊನೆಯಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಬೆಂಗಳೂರು ಒನ್, ಗ್ರಾಮ ಒನ್

ಗೃಹ ಲಕ್ಷ್ಮಿ ಯೋಜನೆ ಬಿಗ್ ಅಪ್ಡೇಟ್| ಇನ್ಮುಂದೆ ಇವರಿಗೂ ಸಿಗಲಿದೆ ₹2000 Read More »

ಮಕ್ಕಳ ವಿರುದ್ಧ ಹಕ್ಕುಗಳ ಉಲ್ಲಂಘನೆ/ ಇಸ್ರೇಲ್ ಮತ್ತು ಹಮಾಸ್ ಅನ್ನು “ಅವಮಾನದ ಪಟ್ಟಿಗೆ” ಸೇರಿಸಿದ ವಿಶ್ವಸಂಸ್ಥೆ

ಸಮಗ್ರ ನ್ಯೂಸ್: , ಸಶಸ್ತ್ರ ಸಂಘರ್ಷದಲ್ಲಿ ಮಕ್ಕಳ ವಿರುದ್ಧ ಹಕ್ಕುಗಳ ಉಲ್ಲಂಘನೆಯ ಹಿನ್ನಲೆಯಲ್ಲಿ ವಿಶ್ವಸಂಸ್ಥೆಯು ಇಸ್ರೇಲ್ ಮತ್ತು ಹಮಾಸ್ ಅನ್ನು ತಮ್ಮ “ಅವಮಾನದ ಪಟ್ಟಿಗೆ” ಸೇರಿಸಿದೆ ಎಂದು ದಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ. ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರಸ್ ಅವರ ಕಚೇರಿಯಿಂದ ಸಲ್ಲಿಸಲಾದ ವಾರ್ಷಿಕ ವರದಿಗೆ ಈ ಪಟ್ಟಿಯನ್ನು ಸೇರಿಸಲಾಗಿದೆ. ಮೊದಲ ಬಾರಿಗೆ, ಇಸ್ರೇಲ್ ಮತ್ತು ಹಮಾಸ್ ಈ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದು, ರಷ್ಯಾ, ಇಸ್ಲಾಮಿಕ್ ಸ್ಟೇಟ್, ಅಲ್-ಖೈದಾ, ಬೊಕೊ ಹರಾಮ್, ಅಫ್ಘಾನಿಸ್ತಾನ್, ಇರಾಕ್,

ಮಕ್ಕಳ ವಿರುದ್ಧ ಹಕ್ಕುಗಳ ಉಲ್ಲಂಘನೆ/ ಇಸ್ರೇಲ್ ಮತ್ತು ಹಮಾಸ್ ಅನ್ನು “ಅವಮಾನದ ಪಟ್ಟಿಗೆ” ಸೇರಿಸಿದ ವಿಶ್ವಸಂಸ್ಥೆ Read More »

ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ, ಮಾಧ್ಯಮ ಲೋಕದ ದಿಗ್ಗಜ ರಾಮೋಜಿ ರಾವ್ ಇನ್ನಿಲ್ಲ

ಸಮಗ್ರ ನ್ಯೂಸ್: ಈನಾಡು ಮೀಡಿಯಾ ಗ್ರೂಪ್ ಅಧ್ಯಕ್ಷ ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ (87) ಇನ್ನಿಲ್ಲ. ಶನಿವಾರ ಮುಂಜಾನೆ ರಾವ್ ಅವರು ಹೈದರಾಬಾದ್‌ನ ಸ್ಟಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೊನೆಯುಸಿರೆಳೆದಿದ್ದಾರೆ. ಪ್ರಸಿದ್ಧ ವಾಣಿಜ್ಯೋದ್ಯಮಿ ರಾಮೋಜಿ ಗ್ರೂಪ್ ಮತ್ತು ಈಟಿವಿ ಭಾರತ್ ಮಾಧ್ಯಮ ಸಂಸ್ಥೆ ಸಂಸ್ಥಾಪಕ ರಾಮೋಜಿ ರಾವ್ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಈ ಕಾರಣದಿಂದ ಅವರು ಇದೇ ಜೂನ್ 5ರಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾದೇ ಶನಿವಾರ ಬೆಳಗಿನ

ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ, ಮಾಧ್ಯಮ ಲೋಕದ ದಿಗ್ಗಜ ರಾಮೋಜಿ ರಾವ್ ಇನ್ನಿಲ್ಲ Read More »

ಹುಲಿ ಉಗುರು ಪ್ರಕರಣ ಪರಿಣಾಮ; ಅರಣ್ಯ ಇಲಾಖೆ ಕೈಸೇರಿತು ಭರ್ಜರಿ ವನ್ಯ ಸಂಪತ್ತು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಳೆದ ಕೆಲ ತಿಂಗಳ ಹಿಂದೆ ಹುಲಿ ಉಗುರು ಪ್ರಕರಣ  ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಬಿಗ್ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್, ಚಾಲೆಜಿಂಗ್ ಸ್ಟಾರ್ ದರ್ಶನ್, ಜಗ್ಗೇಶ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳಿಗೆ ಉರುಳಾಗಿ ಪರಿಣಮಿಸಿತ್ತು. ಘಟನೆಯ ಬಳಿಕ ಸಾಕಷ್ಟು ದೂರುಗಳು ಕೇಳಿ ಬಂದಿದ್ದವು. ಹೀಗಾಗಿ ಸರ್ಕಾರ ವನ್ಯಜೀವಿ ಸಂಪತ್ತು (Wildlife Wealth) ಹಾಗೂ ಪ್ರಾಣಿಗಳ ಅಂಗಾಂಗ ಹೊಂದಿದ್ದವರಿಗೆ ಅವುಗಳನ್ನು ಮರಳಿಸಲು 90 ದಿನಗಳ ಗಡುವು ನೀಡಿತ್ತು. ಈಗ ಮರಳಿಸುವ ಗಡುವು ಮುಗಿದಿದ್ದು ಭರ್ಜರಿ ಸಂಪತ್ತು

ಹುಲಿ ಉಗುರು ಪ್ರಕರಣ ಪರಿಣಾಮ; ಅರಣ್ಯ ಇಲಾಖೆ ಕೈಸೇರಿತು ಭರ್ಜರಿ ವನ್ಯ ಸಂಪತ್ತು Read More »

ದಾವಣಗೆರೆಯಲ್ಲಿ ನೈತಿಕ ಪೊಲೀಸ್ ಗಿರಿ| ರೂಮ್‌ನಲ್ಲಿ ಕೂಡಿ ಹಾಕಿ ಹಲ್ಲೆ

ಸಮಗ್ರ ನ್ಯೂಸ್: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ, ಐದಾರು ಜನರು ಸೇರಿಕೊಂಡು ಯುವಕನೊಬ್ಬನನ್ನು ರೂಮ್‌ನಲ್ಲಿ ಹಾಕಿ ಹಲ್ಲೆ ಮಾಡಲಾಗಿದೆ. ಹರಿಹರ‌ನಗರದ ಬೆಂಕಿ ನಗರದಲ್ಲಿ ಘಟನೆ ನಡೆದಿದು ಯುವಕ ಬೇಡಿಕೊಂಡರೂ ಬಿಡದೇ ಥಳಿಸಿದ್ದಾರೆ ಇದೀಗ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನು ಹಲ್ಲೆ ಮಾಡಿದವರು ಹಾಗೂ ಹಲ್ಲೆಗೊಳಗಾದ ಯುವಕ ಒಂದೇ ಕೋಮಿಗೆ ಸೇರಿದವರು ಎಂದು ತಿಳಿದುಬಂದಿದೆ. ಆದ್ರೆ, ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದ್ರೆ, ಹಲ್ಲೆಗೊಳಗಾದ ಯುವಕ ಈವರೆಗೂ ಪೊಲೀಸರಿಗೆ ಯಾವುದೇ

ದಾವಣಗೆರೆಯಲ್ಲಿ ನೈತಿಕ ಪೊಲೀಸ್ ಗಿರಿ| ರೂಮ್‌ನಲ್ಲಿ ಕೂಡಿ ಹಾಕಿ ಹಲ್ಲೆ Read More »