June 2024

ಹವಾಮಾನ ವರದಿ| ಜೂ.10ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದ್ದು ಕೆಲವೆಡೆ ಉತ್ತಮ ಮಳೆಯಾಗುತ್ತಿದೆ. ಜೂನ್​ 6ರಿಂದ 10ರವರೆಗೆ ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಇನ್ನುಳಿದಂತೆ ವಿಜಯನಗರ, ತುಮಕೂರು,ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಯಾದಗಿರಿ, […]

ಹವಾಮಾನ ವರದಿ| ಜೂ.10ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ Read More »

ರಾಜ್ಯದ‌ ಮೂರು ವಿಧಾನಸಭೆ, ಒಂದು ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ಫಿಕ್ಸ್

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೂವರು ಶಾಸಕರು ಮತ್ತು ಒಬ್ಬರು ವಿಧಾನ ಪರಿಷತ್ ಸದಸ್ಯರು ಜಯಗಳಿಸಿದ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಖಚಿತವಾಗಿದೆ. ಹಾಲಿ ವಿಧಾನಸಭೆಯ ಮೂವರು ಸದಸ್ಯರು ಮತ್ತು ವಿಧಾನ ಪರಿಷತ್ತಿನ ಒಬ್ಬ ಸದಸ್ಯ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ್ದು, ಇವರಿಂದ ತೆರವಾಗಲಿರುವ ಸ್ಥಾನಗಳಿಗೆ ಉಪಚುನಾವಣೆ ಎದುರಾಗಲಿದೆ. ಚನ್ನಪಟ್ಟಣ ಶಾಸಕರಾದ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಶಿಗ್ಗಾಂವಿ ಶಾಸಕರಾದ ಬಸವರಾಜ ಬೊಮ್ಮಾಯಿ ಹಾವೇರಿ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದಾರೆ. ಸಂಡೂರು ಶಾಸಕ ತುಕಾರಾಂ

ರಾಜ್ಯದ‌ ಮೂರು ವಿಧಾನಸಭೆ, ಒಂದು ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ಫಿಕ್ಸ್ Read More »

ವಿಶ್ವದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ರ್‍ಯಾಂಕಿಂಗ್‌/ ಸ್ಥಾನ ಪಡೆದುಕೊಂಡ ಐಐಟಿ ಬಾಂಬೆ’ ಮತ್ತು ‘ಐಐಟಿ ದೆಹಲಿ’

ಸಮಗ್ರ ನ್ಯೂಸ್: ಕ್ವಾಕರಾಲಿ ಸೈಮಂಡ್ಸ್‌ ವಿಶ್ವದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ರ್‍ಯಾಂಕಿಂಗ್‌ ಬಿಡುಗಡೆ ಮಾಡಿದ್ದು, ಅದರಲ್ಲಿ ‘ಐಐಟಿ ಬಾಂಬೆ’ ಮತ್ತು ‘ಐಐಟಿ ದೆಹಲಿ’ ಟಾಪ್‌ 150ರೊಳಗೆ ಸ್ಥಾನ ಪಡೆದುಕೊಂಡಿದೆ. ಇದರ ಜೊತೆಗೆ ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ (ಐಐಎಸ್‌ಸಿ) 211ನೇ ಸ್ಥಾನ ಪಡೆದುಕೊಂಡಿದೆ. ಪಟ್ಟಿಯಲ್ಲಿ ಕಳೆದ ವರ್ಷ 149ನೇ ಸ್ಥಾನದಲ್ಲಿದ್ದ ಐಐಟಿ ಬಾಂಬೆ ಈ ವರ್ಷ 31 ಸ್ಥಾನ ಏರಿಕೆ ಕಂಡು 118ನೇ ಸ್ಥಾನ ತಲುಪಿದೆ. ಇನ್ನೊಂದೆಡೆ ಐಐಟಿ ದೆಹಲಿ 47 ಸ್ಥಾನ ಏರಿಕೆ ಕಾಣುವ ಮೂಲಕ

ವಿಶ್ವದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ರ್‍ಯಾಂಕಿಂಗ್‌/ ಸ್ಥಾನ ಪಡೆದುಕೊಂಡ ಐಐಟಿ ಬಾಂಬೆ’ ಮತ್ತು ‘ಐಐಟಿ ದೆಹಲಿ’ Read More »

ಅಪ್ಪ- ಅಮ್ಮನ ಜಗಳ ಬಿಡಿಸಲು ಹೋದ ಮಗನ ಆಕಸ್ಮಿಕ ಕೊಲೆ..!

ಸಮಗ್ರ ನ್ಯೂಸ್: ಅಜ್ಜಿಯನ್ನು ನೋಡಿಕೊಳ್ಳುವ ವಿಚಾರಕ್ಕೆ ಅಪ್ಪ- ಅಮ್ಮನ ನಡುವೆ ಜಗಳ ಶುರುವಾಗಿದ್ದು, ಇದನ್ನು ಬಿಡಿಸಲು ಹೋದ ಮಗ ಆಕಸ್ಮಿಕವಾಗಿ ಕೊಲೆಯಾದ ಘಟನೆ ಬೆಂಗಳೂರಿನ ಜರಗನಹಳ್ಳಿಯಲ್ಲಿ ನಡೆದಿದೆ. ಯಶವಂತ್ (23) ತಂದೆಯಿಂದಲೇ ಕೊಲೆಯಾದ ಪುತ್ರ. ಇತ ಇನ್ಫೋಸಿಸ್ ಕಂಪನಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ. ತಂದೆ ಮಾಡಿದ್ದ ಸಾಲವನ್ನು ಈತನೇ ತೀರಿಸುತ್ತಿದ್ದ. ಹೀಗಿರುವಾಗ ಆತನ ಅಜ್ಜಿ ಹಾಸಿಗೆ ಹಿಡಿದಿದ್ದಾರೆ. ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ತಂದೆ-ತಾಯಿ ನಡುವೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಇಬ್ಬರ

ಅಪ್ಪ- ಅಮ್ಮನ ಜಗಳ ಬಿಡಿಸಲು ಹೋದ ಮಗನ ಆಕಸ್ಮಿಕ ಕೊಲೆ..! Read More »

ಐಸಿಸಿ ಟಿ-20 ವಿಶ್ವಕಪ್| ಶುಭಾರಂಭ ಮಾಡಿದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಐಸಿಸಿ ಟಿ20 ವಿಶ್ವಕಪ್ 2024 ಟೂರ್ನಿಯಲ್ಲಿ ಟೀಮ್ ಇಂಡಿಯಾ ಗೆಲುವಿನ ಅಭಿಯಾನ ಆರಂಭಿಸಿದೆ. ನ್ಯೂಯಾರ್ಕ್​​ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಐರ್ಲೆಂಡ್ ತಂಡದ ವಿರುದ್ಧ ಭರ್ಜರಿ 8 ವಿಕೆಟ್​ಗಳ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ ಟೀಮ್ ಇಂಡಿಯಾ ನಾಯಕ ರೋಹಿತ್​ ಶರ್ಮಾ (Rohit Sharma) ಹಲವು ದಾಖಲೆ ಬರೆದಿದ್ದಾರೆ. ನಾಯಕನಾಗಿಯೂ ವಿಶೇಷ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. 37 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್​ ಸಹಿತ

ಐಸಿಸಿ ಟಿ-20 ವಿಶ್ವಕಪ್| ಶುಭಾರಂಭ ಮಾಡಿದ ಟೀಂ ಇಂಡಿಯಾ Read More »

ಸಚಿವ ನಾಗೇಂದ್ರ ಜೊತೆ ಸಿಎಂ ಮಹತ್ವದ ಚರ್ಚೆ|ಇಂದು ರಾಜೀನಾಮೆ ಸಾಧ್ಯತೆ..?

ಸಮಗ್ರ ನ್ಯೂಸ್: ವಾಲ್ಮೀಕಿ ನಿಗಮದಲ್ಲಿ ನಡೆದ ಕೋಟ್ಯಾಂತರ ರೂಪಾಯಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ, ಇಲಾಖೆಯ ಅಧಿಕಾರಿಗಳನ್ನು ಬಂಧಿಸಿದೆ. ಅಷ್ಟೇ ಅಲ್ಲದೆ ಮತ್ತೊಂದೆಡೆ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಬಿಗಿಪಟ್ಟುಹಿಡಿದಿದೆ. ಸಚಿವ ನಾಗೇಂದ್ರ ಆಪ್ತ ಪಿಎ ನೆಕ್ಕುಂಟಿ ನಾಗರಾಜ್ನನ್ನು ಸಹ ಎಸ್ಐಟಿ ಅರೆಸ್ಟ್ ಮಾಡಿದೆ. ಇನ್ನು ಈ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ಈ ಹೊತ್ತಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರನ್ನು ಕರೆಯಿಸಿಕೊಂಡು ಚರ್ಚಿಸಿದ್ದು, ಇಂದು ಸಂಜೆ ವೇಳೆಗೆ ನಾಗೇಂದ್ರ ಅವರು ತಮ್ಮ

ಸಚಿವ ನಾಗೇಂದ್ರ ಜೊತೆ ಸಿಎಂ ಮಹತ್ವದ ಚರ್ಚೆ|ಇಂದು ರಾಜೀನಾಮೆ ಸಾಧ್ಯತೆ..? Read More »

ಅಭಿಷೇಕ್ ಹಾಗೂ ಅವಿವಾ ದಾಂಪತ್ಯಕ್ಕೆ ಮೊದಲ ವಾರ್ಷಿಕೋತ್ಸವದ ಸಂಭ್ರಮ

ಸಮಗ್ರ ನ್ಯೂಸ್: ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದ್ದಪ್ಪ ದಾಂಪತ್ಯಕ್ಕೆ ಇದೀಗ ಒಂದು ವರ್ಷ ತುಂಬಿದೆ. 2023ರ ಜೂನ್ 5ರಂದು ಈ ಜೋಡಿ ವಿವಾಹ ಆಯಿತು. ಸೆಲೆಬ್ರಿಟಿಗಳು ಇವರ ವಿವಾಹದಲ್ಲಿ ಭಾಗವಹಿಸಿದ್ದರು. ಸುಮಲತಾ ಅಂಬರಿಶ್‌ ಅವರು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.  ಅದರಲ್ಲಿ ತಮ್ಮ ಮಗ ಮತ್ತು ಸೊಸೆಯ ಸುಂದರ ಫೋಟೋಗಳೊಂದಿಗೆ ವಿಶ್‌ ಮಾಡಿದ್ದಾರೆ.  “ನನ್ನ ಪ್ರೀತಿಯ ಅಬಿದೊ ಮತ್ತು ಅವಿವಾಗೆ ಮೊದಲ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು. ನಿಮ್ಮ ಪ್ರೀತಿ ಇನ್ನಷ್ಟು ಉತ್ತಮವಾಗಲಿ. ಇನ್ನಷ್ಟು ಒಬ್ಬರನ್ನೊಬ್ಬರನ್ನು ಅರ್ಥ ಮಾಡಿಕೊಳ್ಳಿ.

ಅಭಿಷೇಕ್ ಹಾಗೂ ಅವಿವಾ ದಾಂಪತ್ಯಕ್ಕೆ ಮೊದಲ ವಾರ್ಷಿಕೋತ್ಸವದ ಸಂಭ್ರಮ Read More »

ಬೆಳ್ತಂಗಡಿ: ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಆರೋಗ್ಯ ವಿಚಾರಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

ಸಮಗ್ರ ನ್ಯೂಸ್‌ : ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ ಅವರ ಆರೋಗ್ಯವನ್ನು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ವಿಚಾರಿಸಿದರು. ಜೂನ್ 4ರಂದು ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿಯಿಂದ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಆಸ್ಪತ್ರೆಗೆ ದ.ಕ. ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ಸಂಸದರ ಜೊತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಬಿಜೆಪಿ ಕಾರ್ಯಕರ್ತರು ಜೊತೆಯಲ್ಲಿದ್ದರು.

ಬೆಳ್ತಂಗಡಿ: ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಆರೋಗ್ಯ ವಿಚಾರಿಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ Read More »

ಉಡುಪಿ: ಬಾವಿಗೆ ಬಿದ್ದ ಹಸುವನ್ನು ರಕ್ಷಿಸಿದ ಭಜರಂಗದಳ ಕಾರ್ಯಕರ್ತರು

ಸಮಗ್ರ ನ್ಯೂಸ್‌ : ಪರ್ಕಳ ಸಮೀಪದ ಹೆರ್ಗದಲ್ಲಿ ಕಾಮಗಾರಿ ಹಂತದಲ್ಲಿದ್ದ ಬಾವಿಗೆ ಬಿದ್ದ ಹಸುವನ್ನು ಭಜರಂಗದಳ ಕಾರ್ಯಕರ್ತರು ರಕ್ಷಣೆ ಮಾಡಿ ಜೀವದಾನ ನೀಡಿದ್ದಾರೆ. ಸುಮಾರು 40 ಅಡಿ ಆಳದ ಬಾವಿಗೆ ಈ ಹಸು ಬಿದ್ದಿತ್ತು. ತಕ್ಷಣ ಭಜರಂಗದಳ ಕಾರ್ಯಕರ್ತರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಆಗಮಿಸಿದ ಪ್ರಾಣೇಶ್ ಪರ್ಕಳ ನೇತೃತ್ವದ ಕಾರ್ಯಕರ್ತರ ತಂಡ ಕಾರ್ಯಾಚರಣೆ ನಡೆಸಿ ಗಾಯಾಳು ಹಸುವನ್ನು ರಕ್ಷಿಸಿತು. ಪರ್ಕಳ ಬಜರಂಗದಳದ ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪ್ರಾಣೇಶ್ ಪರ್ಕಳ, ಶಶಿಕಾಂತ್ ನಡಿದಾರೆ,

ಉಡುಪಿ: ಬಾವಿಗೆ ಬಿದ್ದ ಹಸುವನ್ನು ರಕ್ಷಿಸಿದ ಭಜರಂಗದಳ ಕಾರ್ಯಕರ್ತರು Read More »

ಒಂದು ಲಕ್ಷ ಕೊಡಿ/ ಲಕ್ನೋದಲ್ಲಿ ಕಾಂಗ್ರೆಸ್ ಕಚೇರಿ ಮುಂದೆ ನಿಂತ ಮಹಿಳೆಯರು

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸರ್ಕಾರ ರಚನೆಗೆ ಎನ್‍ಡಿಎ ಮೈತ್ರಿಕೂಟ, ಇಂಡಿಯಾ ಒಕ್ಕೂಟದ ನಾಯಕರು ಇನ್ನಿಲ್ಲದ ಪ್ರಯತ್ನ ಮಾಡುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಒಂದು ಲಕ್ಷ ಕೊಡಿ ಎಂದು ಮುಸ್ಲಿಂ ಮಹಿಳೆಯರು ಕಾಂಗ್ರೆಸ್ ಕಚೇರಿಗೆ ಲಗ್ಗೆ ಇಟ್ಟಿದ್ದಾರೆ. ‘ಚುನಾವಣೆ ಬಳಿಕ 1 ಲಕ್ಷ ರೂ. ಕೊಡುತ್ತೇವೆ ಎಂದಿದ್ರಲ್ಲ, ಕೊಡಿ’ ಎಂದು ಮುಸ್ಲಿಂ ಮಹಿಳೆಯರು ಲಖನೌನಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಸಾಲಾಗಿ ನಿಂತಿರುವ ವಿಡಿಯೋ ಕೂಡ ವೈರಲ್ ಆಗಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಮಹಿಳೆಯರಿಗೆ 1

ಒಂದು ಲಕ್ಷ ಕೊಡಿ/ ಲಕ್ನೋದಲ್ಲಿ ಕಾಂಗ್ರೆಸ್ ಕಚೇರಿ ಮುಂದೆ ನಿಂತ ಮಹಿಳೆಯರು Read More »