June 2024

ದ.ಕನ್ನಡದಲ್ಲಿ ಬಿಜೆಪಿಗೆ ಭರ್ಜರಿ ಜಯ| ಕ್ಯಾಪ್ಟನ್ ಬ್ರಿಜೇಶ್ ಚೌಟಾ ಇನ್ಮುಂದೆ ಮಂಗಳೂರು ಎಂಪಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರ ಅಪಾರ ಅಭಿಮಾನಿಗಳನ್ನು ಹೊಂದಿರುವ ಕರ್ನಾಟಕದ ಬಲಿಷ್ಠ ಲೋಕ ಸಭಾ ಕ್ಷೇತ್ರವಾಗಿರುವ ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ಬ್ರಿಜೇಶ್​ ಚೌಟ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಪದ್ಮರಾಜ್​ ವಿರುದ್ಧ ಭರ್ಜರಿ ಮತಗಳ ಅಂತರದ ವಿಜಯ ಸಾಧಿಸಿದ್ದಾರೆ. ಈ ಮೂಲಕ ಕೇಸರಿ ಪಕ್ಷ ಪಾರಮ್ಯ ಇಲ್ಲಿ ಮುಂದುವರಿದಿದೆ. ಆಡಳಿತ ವಿರೋಧಿ ಅಲೆಯನ್ನು ಮೀರುವ ಬಿಜೆಪಿಯ ತಂತ್ರ ಫಲಿಸಿದ್ದು, ಹೊಸ ಮುಖವೊಂದು ಪಾರ್ಲಿಮೆಂಟ್​ಗೆ ಏರಿದೆ. ಬಿಜೆಪಿ, ವಿಶೇಷವಾಗಿ ನರೇಂದ್ರ ಮೋದಿ ಕರ್ನಾಟಕದ […]

ದ.ಕನ್ನಡದಲ್ಲಿ ಬಿಜೆಪಿಗೆ ಭರ್ಜರಿ ಜಯ| ಕ್ಯಾಪ್ಟನ್ ಬ್ರಿಜೇಶ್ ಚೌಟಾ ಇನ್ಮುಂದೆ ಮಂಗಳೂರು ಎಂಪಿ Read More »

ಉಡುಪಿ- ಚಿಕ್ಕಮಗಳೂರು ಕ್ಷೇತ್ರ| ಬಿಜೆಪಿ‌ ಕೈಹಿಡಿದ ಮತದಾರ| ಕೋಟಾಗೆ ಭರ್ಜರಿ‌ ಗೆಲುವು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ವಿರುದ್ಧ ಗೆಲುವು ಸಾಧಿಸಿದ್ದು, ಮತ ಎಣಿಕೆ ಕೇಂದ್ರ ಸಮೀಪ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿ ಅವರು ಗೆಲುವಿನ ನಗೆ ಬೀರಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಅವರನ್ನು ಮೇಲಕ್ಕೆತ್ತಿ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ಈ ಸಂದರ್ಭ ಶಾಸಕರಾದ ಯಶ್ ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ,

ಉಡುಪಿ- ಚಿಕ್ಕಮಗಳೂರು ಕ್ಷೇತ್ರ| ಬಿಜೆಪಿ‌ ಕೈಹಿಡಿದ ಮತದಾರ| ಕೋಟಾಗೆ ಭರ್ಜರಿ‌ ಗೆಲುವು Read More »

ಜೆಡಿಎಸ್ ಗೆ ಮಂಡ್ಯದಲ್ಲಿ ಸಿಹಿ, ಹಾಸನದಲ್ಲಿ ಕಹಿ| ಕುಮಾರಸ್ವಾಮಿ ಗೆಲುವು; ಪ್ರಜ್ವಲ್ ಗೆ ಹೀನಾಯ ಸೋಲು

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಫಲಿತಾಂಶದ ಬಿಸಿ ಜೋರಾಗಿದ್ದು, ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹಾಸನ ಅಶ್ಲೀಲ ವಿಡಿಯೋ ಕೇಸ್​ನಿಂದ ಬೇಸತ್ತಿದ್ದ ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿ ಮೂರು ದಿನಗಳ ಕಾಲ ಪ್ರವಾಸದಲ್ಲಿ ಇದ್ದರು. ಬಳಿಕ ಒಂದಷ್ಟು ದಿನ ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ಇಂದು ತನ್ನ ಗೆಲುವಿನ ವಿಚಾರ ಗೊತ್ತಾಗುತ್ತಿದ್ದಂತೆಯೇ ಆದಿಚುಂಚನಗಿರಿ ಮಹಾ ಸಂಸ್ಥಾನದ ವಿಜಯನಗರ ಶಾಖಾ ಮಠಕ್ಕೆ ಭೇಟಿ ನೀಡಿ ಡಾ. ಶ್ರೀ

ಜೆಡಿಎಸ್ ಗೆ ಮಂಡ್ಯದಲ್ಲಿ ಸಿಹಿ, ಹಾಸನದಲ್ಲಿ ಕಹಿ| ಕುಮಾರಸ್ವಾಮಿ ಗೆಲುವು; ಪ್ರಜ್ವಲ್ ಗೆ ಹೀನಾಯ ಸೋಲು Read More »

ತೆಲಂಗಾಣ: ಓವೈಸಿ ವಿರುದ್ದ ಹಿಂದೂ ಪೈರ್ ಬ್ರ್ಯಾಂಡ್ ಮಾಧವಿ ಲತಾ ಭಾರೀ ಮುನ್ನಡೆ

ಸಮಗ್ರ ನ್ಯೂಸ್: ತೆಲಂಗಾಣದ ಹೈದರಾಬಾದ್‌ ಲೋಕಸಭೆ ಕ್ಷೇತ್ರದ ಚುನಾವಣೆ ರಣಕಣವು ಈ ಬಾರಿ ಭಾರಿ ಕುತೂಹಲದಿಂದ ಕೂಡಿದೆ. ಎಐಎಂಐಎಂ ಪಕ್ಷದ ಅಸಾದುದ್ದೀನ್‌ ಓವೈಸಿ ವಿರುದ್ಧ ಬಿಜೆಪಿಯಿಂದ ಹಿಂದು ಫೈರ್‌ ಬ್ರ್ಯಾಂಡ್‌ ಮಾಧವಿ ಲತಾ ಕಣಕ್ಕಿಳಿದಿದ್ದು, ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಪ್ರಖರ ಹಿಂದುತ್ವವಾದಿಯೂ ಆಗಿರುವ ಮಾಧವಿ ಲತಾ ಅವರು ಈಗ ಮುಸ್ಲಿಮರ ಮತಗಳನ್ನೂ ಸೆಳೆಯಲು ಪ್ರಯತ್ನಿಸಿದ್ದರು. ಇದಕ್ಕಾಗಿ ಅವರು ಹೈದರಾಬಾದ್‌ನಲ್ಲಿರುವ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದ ಅವರು, ಮುಸ್ಲಿಂ ಗಲ್ಲಿಗಲ್ಲಿಗಳಲ್ಲಿ ಪ್ರಚಾರ ಕೈಗೊಂಡಿದ್ದರು. ಸದ್ಯ, ಒಂದು ಲಕ್ಷಕ್ಕೂ ಅಧಿಕ ಮತಗಳನ್ನು

ತೆಲಂಗಾಣ: ಓವೈಸಿ ವಿರುದ್ದ ಹಿಂದೂ ಪೈರ್ ಬ್ರ್ಯಾಂಡ್ ಮಾಧವಿ ಲತಾ ಭಾರೀ ಮುನ್ನಡೆ Read More »

ರಾಮನಾಡಿನಲ್ಲಿ ಬಿಜೆಪಿಗೆ ಹಿನ್ನಡೆ| ಅಯೋಧ್ಯೆಯಲ್ಲಿ ಮುನ್ನಡೆ ಸಾಧಿಸಿದ ಎಸ್ಪಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ 2024ರ ಮತ ಎಣಿಕೆ ನಡೆಯುತ್ತಿದ್ದು, ಎನ್‌ಡಿಎ ಆರಂಭಿಕ ಹಂತದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ. ಉತ್ತರ ಪ್ರದೇಶವನ್ನು ಕ್ಲೀನ್ ಸ್ವೀಪ್ ಮಾಡುವ ಕನಸು ಕಂಡಿದ್ದ ಬಿಜೆಪಿಗೆ ಆಘಾತ ಎದುರಾಗಿದೆ. ಆರಂಭಿಕ ಹಂತದಲ್ಲಿ ಕೇವಲ 35 ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಮುನ್ನಡೆ ಪಡೆದುಕೊಂಡಿದ್ದು, 35 ಕ್ಷೇತ್ರಗಳಲ್ಲಿ ಸಮಜಾವಾದಿ ಪಕ್ಷ ಮುನ್ನಡೆ ಸಾಧಿಸಿದೆ. ಅಯೋಧ್ಯೆ ವಿಧಾನಸಭಾ ಕ್ಷೇತ್ರವನ್ನು ಒಳಗೊಂಡಿರುವ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ

ರಾಮನಾಡಿನಲ್ಲಿ ಬಿಜೆಪಿಗೆ ಹಿನ್ನಡೆ| ಅಯೋಧ್ಯೆಯಲ್ಲಿ ಮುನ್ನಡೆ ಸಾಧಿಸಿದ ಎಸ್ಪಿ Read More »

ಎಕ್ಸಿಟ್ ಪೋಲ್ ಸುಳ್ಳು ಮಾಡಿದ ಇಂಡಿಯಾ ಒಕ್ಕೂಟ| 225 + ಸ್ಥಾನಗಳಲ್ಲಿ ಲೀಡ್

ಸಮಗ್ರ ನ್ಯೂಸ್: 543 ಲೋಕಸಭಾ ಸ್ಥಾನಗಳ ಮತ ಎಣಿಕೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಆರಂಭಿಕ ಹಂತಗಳಲ್ಲಿ 272 ರ ಮೆಜಾರಿಟಿಯನ್ನು ದಾಟಿದೆ. ಆದರೆ ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್‌ಗಳು ನೀಡಿದ್ದ ಹಲವು ಸಮೀಕ್ಷೆಗಳನ್ನು ಇಂಡಿಯಾ ಒಕ್ಕೂಟ ಸುಳ್ಳು ಮಾಡಿಸಿದೆ. ಬಹುತೇಕ ಎಲ್ಲಾ ಎಕ್ಸಿಟ್ ಪೋಲ್‌ಗಳು ಕೂಡ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ 150 ರಿಂದ 180 ಸ್ಥಾನಗಳನ್ನು ದಾಟುವುದಿಲ್ಲ ಎಂದು ಫಲಿತಾಂಶ ನೀಡಿದ್ದವು. ಆದರೆ, ಈ ಫಲಿತಾಂಶವನ್ನು ಇಂಡಿಯಾ ಒಕ್ಕೂಟ ಸುಳ್ಳು ಮಾಡಿದ್ದು, ಬೆಳಗ್ಗೆ

ಎಕ್ಸಿಟ್ ಪೋಲ್ ಸುಳ್ಳು ಮಾಡಿದ ಇಂಡಿಯಾ ಒಕ್ಕೂಟ| 225 + ಸ್ಥಾನಗಳಲ್ಲಿ ಲೀಡ್ Read More »

ಅಧ್ಯಕ್ಷೀಯ ಚುನಾವಣೆಯಲ್ಲಿ ಕೌಡಿಯಾ ಶೇನ್‌ಬಾಮ್ ಗೆಲುವು/ ಮೆಕ್ಸಿಕೋ ದೇಶದ ಮೊದಲ ಮಹಿಳಾ ಅಧ್ಯಕ್ಷೆ ಎಂಬ ದಾಖಲೆ

ಮೆಕ್ಸಿಕೋ ದೇಶದ 200 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆಮೆಕ್ಸಿಕೋ ಅಧ್ಯಕ್ಷೀಯ ಚುನಾವಣೆಯಲ್ಲಿ ಕೌಡಿಯಾ ಶೇನ್‌ಬಾಮ್ ಭಾರೀ ಅಂತರದಿಂದ ಜಯಗಳಿಸಿ ಅಧ್ಯಕ್ಷೀಯ ಸ್ಥಾನವನ್ನು ಅಲಂಕರಿಸಿದ್ದು, ಮೊದಲ ಮಹಿಳಾ ಅಧ್ಯಕ್ಷೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಶೇನ್‌ಬಾಮ್ 58.3 ರಿಂದ 60.7 ಪ್ರತಿಶತದಷ್ಟು ಮತಗಳನ್ನು ಪಡೆದು ವಿಜಯವನ್ನು ಸಾಧಿಸಿದ್ದಾರೆ ಎಂದು ಮೆಕ್ಸಿಕೋದ ಚುನಾವಣಾ ಸಂಸ್ಥೆಯು ಘೋಷಿಸಿತು. ನಾನು ಮೆಕ್ಸಿಕೋದ ಮೊದಲ ಮಹಿಳಾ ಅಧ್ಯಕ್ಷೆಯಾಗುತ್ತೇನೆ. ಮೆಕ್ಸಿಕೋ ಶಾಂತಿಯುತ ಚುನಾವಣೆಗಳೊಂದಿಗೆ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ ಎಂದು ನಾವು ತೋರಿಸಿದ್ದೇವೆ. ಇತರ ಸಂದರ್ಭಗಳಲ್ಲಿ ಹೇಳಿದಂತೆ, ನಾನು ಒಬ್ಬಂಟಿಯಾಗಿ

ಅಧ್ಯಕ್ಷೀಯ ಚುನಾವಣೆಯಲ್ಲಿ ಕೌಡಿಯಾ ಶೇನ್‌ಬಾಮ್ ಗೆಲುವು/ ಮೆಕ್ಸಿಕೋ ದೇಶದ ಮೊದಲ ಮಹಿಳಾ ಅಧ್ಯಕ್ಷೆ ಎಂಬ ದಾಖಲೆ Read More »

ಟಿ20 ವಿಶ್ವಕಪ್/ ದಾಖಲೆಯ ಮೊತ್ತದ ಬಹುಮಾನ ಘೋಷಿಸಿದ ಐಸಿಸಿ

ಸಮಗ್ರ ನ್ಯೂಸ್: ಜೂನ್ 2 ರಿಂದ ಆರಂಭವಾಗಿರುವ ಈ ಬಾರಿಯ ಟಿ20 ವಿಶ್ವಕಪ್ ಹಲವು ವಿಶೇಷತೆಯಿಂದ ಕೂಡಿದ್ದು, ಈ ಬಾರಿ ಮೊದಲ ಬಾರಿಗೆ 20 ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸುತ್ತಿವೆ. ಇದರ ಜೊತೆಗೆ ಐಸಿಸಿ ಈ ಆವೃತ್ತಿಯ ದಾಖಲೆಯ ಮೊತ್ತದ ಬಹುಮಾನವನ್ನು ಪ್ರಕಟಿಸಿದೆ. ಐಸಿಸಿ ಘೋಷಿಸಿರುವ ಪ್ರಕಾರ ಈ ಬಾರಿಯ ಟಿ20 ವಿಶ್ವಕಪ್ ಬಹುಮಾನದ ಗಾತ್ರ 11.25 ಮಿಲಿಯನ್ ಯುಎಸ್ ಡಾಲರ್ ಆಗಿದೆ. ಅಂದರೆ ಭಾರತೀಯ ರೂಪಾರಿಯಲ್ಲಿ ಸುಮಾರು ರೂ 93.50 ಕೋಟಿ ರೂಗಳನ್ನು ಬಹುಮಾನದ ಮೊತ್ತವಾಗಿ

ಟಿ20 ವಿಶ್ವಕಪ್/ ದಾಖಲೆಯ ಮೊತ್ತದ ಬಹುಮಾನ ಘೋಷಿಸಿದ ಐಸಿಸಿ Read More »

ಬೆಂಗಳೂರು: ಹಾಸ್ಟೆಲ್ ಆಹಾರ ಸೇವಿಸಿ 10 ವಿದ್ಯಾರ್ಥಿಗಳು ಅಸ್ವಸ್ಥ

ಸಮಗ್ರ ನ್ಯೂಸ್: ಬೆಂಗಳೂರು ವಿಶ್ವವಿದ್ಯಾಲಯದ ಬಿಸಿಎಂ ಹಾಸ್ಟೆಲ್ ನಲ್ಲಿ ಕಳಪೆ ಆಹಾರ ಸೇವಿಸಿ 10 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, 40 ವಿದ್ಯಾರ್ಥಿಗಳಿಗೆ ವಾಂತಿ, ಬೇಧಿಯಾಗಿರುವ ಘಟನೆ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ಆಗಿದ್ದು. ಊಟ ಸರಿಯಿಲ್ಲವೆಂದು ಆರೋಪಿಸಿ ರೋಡಿಗಿಳಿದಿದ್ದ ವಿದ್ಯಾರ್ಥಿಗಳು ಜ್ಞಾನಭಾರತಿ ಆವರಣದ ಮುಖ್ಯರಸ್ತೆ ತಡೆದು ಧರಣಿ ಮಾಡಿದ್ದಾರೆ. ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಆಗಮಿಸಿ ಹಾಸ್ಟೆಲ್ ವಿದ್ಯಾರ್ಥಿಗಳ ಮನವೊಲಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಪೊಲೀಸರ ಮನವೊಲಿಕೆ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟಿದ್ದಾರೆ. ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದ

ಬೆಂಗಳೂರು: ಹಾಸ್ಟೆಲ್ ಆಹಾರ ಸೇವಿಸಿ 10 ವಿದ್ಯಾರ್ಥಿಗಳು ಅಸ್ವಸ್ಥ Read More »

ಬೆಂಗಳೂರಿನಲ್ಲಿ ಮಳೆ ಅವಾಂತರ: ಸಮಸ್ಯೆ ಇದ್ದರೆ 15533ಗೆ ಕರೆ ಮಾಡಲು ಡಿಸಿಎಂ ಸೂಚನೆ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಿಬಿಎಂಪಿ, ಬಿಡ್ಲ್ಯೂಎಸ್ಎಸ್ಬಿ, ಅಗ್ನಿ ಶಾಮಕ ಅಧಿಕಾರಿಗಳ ಜೊತೆ ಇಂದು(ಜೂನ್ 03) ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಿದ್ದು, ಸಭೆಯಲ್ಲಿ ಪ್ರತಿ ವಾರ್ಡ್ಗಳಲ್ಲೂ ನೀರು ಹೋಗಲು ವ್ಯವಸ್ಥೆ, ಬಿದ್ದ ಮರಗಳ ತೆರವು ಸೇರಿದಂತೆ ಇನ್ನಿತರ ಬಗ್ಗೆ ಚರ್ಚೆ ನಡೆಸಿದರು.

ಬೆಂಗಳೂರಿನಲ್ಲಿ ಮಳೆ ಅವಾಂತರ: ಸಮಸ್ಯೆ ಇದ್ದರೆ 15533ಗೆ ಕರೆ ಮಾಡಲು ಡಿಸಿಎಂ ಸೂಚನೆ Read More »