June 2024

ಕುಕ್ಕೆ ಸುಬ್ರಹ್ಮಣ್ಯ: ಮದ್ಯಪಾನ ಮಾಡಿದ್ದ ವ್ಯಕ್ತಿಯ ತಳ್ಳಿದ‌ ಆನೆ ‘ಯಶಸ್ವಿ’

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ ರೂಂ ಬಾಯ್ ಒಬ್ಬರನ್ನು ಎಳೆದು ಹಾಕಿದ ಘಟನೆ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿಗೆ ಕೆಲವೇ ಸಮಯದ ಮೊದಲು ಈ ಘಟನೆ ನಡೆದಿದೆ. ಸುಬ್ರಹ್ಮಣ್ಯದ ಸವಾರಿ ಮಂಟಪದ ಹತ್ತಿರದ ಬಳಿ ದೇವಸ್ಥಾನದ ಆನೆ ಡಿ.ಕೆ.ಶಿ ಯವರನ್ನು ಸ್ವಾಗತಿಸಲು ಹೋಗುವ ಸಲುವಾಗಿ ನಿಂತಿತ್ತು. ಈ ವೇಳೆ ಒಂದಿಬ್ಬರು ಪೊಲೀಸರು ಕೂಡ ಆನೆಯ ಬಳಿಯಲ್ಲಿ ನಿಂತು ಪೋಟೋ ತೆಗೆಯಲು ಬಂದಿದ್ದರು. ಇದೇ ವೇಳೆಗೆ ಸುಬ್ರಹ್ಮಣ್ಯದ ಲಾಡ್ಜ್ ಒಂದರ […]

ಕುಕ್ಕೆ ಸುಬ್ರಹ್ಮಣ್ಯ: ಮದ್ಯಪಾನ ಮಾಡಿದ್ದ ವ್ಯಕ್ತಿಯ ತಳ್ಳಿದ‌ ಆನೆ ‘ಯಶಸ್ವಿ’ Read More »

ಸುಬ್ರಹ್ಮಣ್ಯ: 9/11A, ಬೆಳೆವಿಮೆ ಸಮಸ್ಯೆ ಪರಿಹರಿಸಲು ಡಿಸಿಎಂ ಗೆ ಮನವಿ

ಸಮಗ್ರ ನ್ಯೂಸ್: ಸಾರ್ವಜನಿಕರು ಹಾಗೂ ರೈತರು ಇದೀಗ 9/11A ಮಾಡಿಸಲು ಮೂಡಾ ಕ್ಕೆ ಹೋಗಬೇಕಾದ ಪರಿಸ್ಥಿತಿ ಬಂದಿದ್ದು ಇದನ್ನು ಮತ್ತೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ತರಬೇಕೆಂದು ಹಾಗೂ ಹವಾಮಾನ ಆಧಾರಿತ ಬೆಲೆ ವಿಮೆ ಇನ್ನೂ ಆದೇಶ ಬರದೆ ಕೃಷಿಕರು ಕಂಗಾಲಾಗಿದ್ದು ಈ ಬಗ್ಗೆ ಕ್ರಮ ವಹಿಸುವಂತೆ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಸುಧಿರ್ ಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರನ್ನು ಭೇಟಿ ಆಗಿ ಮನವಿ ನೀಡಲಾಯಿತು ಇದಕ್ಕೆ ಸ್ಪಂದಿಸಿದ ಡಿಸಿಎಂ ನಂತರ ಪತ್ರಿಕಾಗೋಷ್ಠಿಯಲ್ಲಿ

ಸುಬ್ರಹ್ಮಣ್ಯ: 9/11A, ಬೆಳೆವಿಮೆ ಸಮಸ್ಯೆ ಪರಿಹರಿಸಲು ಡಿಸಿಎಂ ಗೆ ಮನವಿ Read More »

ಹವಾಮಾನ ವರದಿ| ಕರಾವಳಿಯಲ್ಲಿ ನಿರಂತರ‌ ವರ್ಷಧಾರೆ| ಜೂ.30ರವರೆಗೆ‌ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಕಳೆದ ರಾತ್ರಿಯಿಂದ ನಿರಂತರ ಮಳೆಯಾಗುತ್ತಿದ್ದು ರಾಜ್ಯಾದ್ಯಂತ ಜೂನ್ 30ರ ವರೆಗೆ ಐದು ದಿನಗಳ ಕಾಲ ರಾಜ್ಯದ ಎಲ್ಲಾ ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಅನ್ನು ರಾಜ್ಯ ಹವಾಮಾನ ಇಲಾಖೆ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಇನ್ನು ಕೋಟೆ,

ಹವಾಮಾನ ವರದಿ| ಕರಾವಳಿಯಲ್ಲಿ ನಿರಂತರ‌ ವರ್ಷಧಾರೆ| ಜೂ.30ರವರೆಗೆ‌ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ Read More »

ರಾಜ್ಯಕ್ಕೇ ಇನ್ನೂ ದರ ಏರಿಕೆ ‘ಗ್ಯಾರಂಟಿ’| ಇಂಧನ, ಹಾಲು ಬಳಿಕ ಆಟೋ, ಹೊಟೇಲ್ ಸೇವೆ ದುಬಾರಿ‌ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಆರ್ಥಿಕ ಕ್ರೋಡೀಕರಣವೇ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಒಂದೊಂದೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ‘ಗ್ಯಾರಂಟಿ’ ಸರ್ಕಾರ ಬೆಲೆಏರಿಕೆ ಪಕ್ಕಾ ಮಾಡ್ತಿದೆ. ಕಳೆದ ವಾರವಷ್ಟೇ ಪೆಟ್ರೋಲ್, ಡೀಸೆಲ್ ದರವನ್ನು ಸರಿಸುಮಾರು ‌₹3ರಷ್ಟು ಏರಿಕೆ ಮಾಡಿದ್ದು, ನಿನ್ನೆ ಹಾಲಿನ ದರದಲ್ಲಿ ₹2 ಏರಿಕೆಯಾಗಿದೆ. ಜಾಸ್ತಿ ಹಾಲು ನೀಡಿ ಜಾಸ್ತಿ ಬೆಲೆ ಮಾಡಿದ್ದೇವೆ ಎಂದು ಸಮಜಾಯಿಷಿ ನೀಡಿದರೂ ಗ್ರಾಹಕರ ಮೇಲೆ ಹೊರೆ ಹೊರಿಸಿದ್ದಂತೂ ಸತ್ಯ. ಇನ್ನು

ರಾಜ್ಯಕ್ಕೇ ಇನ್ನೂ ದರ ಏರಿಕೆ ‘ಗ್ಯಾರಂಟಿ’| ಇಂಧನ, ಹಾಲು ಬಳಿಕ ಆಟೋ, ಹೊಟೇಲ್ ಸೇವೆ ದುಬಾರಿ‌ ಸಾಧ್ಯತೆ Read More »

ಬೆಂಗಳೂರು: ಆಟೋ ಪ್ರಯಾಣ ದರ ಏರಿಕೆಗೆ ಚಾಲಕರ ಸಂಘ ಒತ್ತಾಯ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಆಟೋ ಮೀಟರ್‌ ದರ ಹೆಚ್ಚಿಸುವಂತೆ ಬೆಂಗಳೂರು ಆಟೋ ಚಾಲಕರ ಸಂಘ ಒತ್ತಾಯ ಮಾಡಿದೆ. ಆಟೋ ಚಾಲಕರ ಸಂಘ ಇತ್ತೀಚೆಗೆ ಬೆಂಗಳೂರು ನಗರ ಜಿಲ್ಲಾ ಉಪ ಆಯುಕ್ತರಿಗೆ ಪತ್ರ ಬರೆದು, ಬೆಂಗಳೂರಿನಲ್ಲಿ ಆಟೋ ರಿಕ್ಷಾ ದರವನ್ನು ಸಗಟು ಬೆಲೆ ಸೂಚ್ಯಂಕಕ್ಕೆ ಅನುಗುಣವಾಗಿ ಪರಿಷ್ಕರಿಸಲು ಕೋರಿದೆ. ಬೆಂಗಳೂರು ನಗರದಲ್ಲಿ ಆಟೋ ಮೀಟರ್ ದರ ಏರಿಕೆ ಮಾಡುವ ಅಧಿಕಾರ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಮಿಟಿಗೆ ಮಾತ್ರ ಅವಕಾಶ ಇರುವುದರಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಆಟೋದರ

ಬೆಂಗಳೂರು: ಆಟೋ ಪ್ರಯಾಣ ದರ ಏರಿಕೆಗೆ ಚಾಲಕರ ಸಂಘ ಒತ್ತಾಯ Read More »

ಪರವಾನಗಿ ನವೀಕರಿಸದ ಆರೋಪ| ಪವರ್ ಟಿವಿ ಪ್ರಸಾರ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ

ಸಮಗ್ರ ನ್ಯೂಸ್: ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್‌ ಟಿ.ವಿ. ಕನ್ನಡ ಚಾನೆಲ್‌ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸರಣವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಬೇಕು’ ಎಂದು ಹೈಕೋರ್ಟ್‌ ಆದೇಶಿಸಿದೆ. ಈ ಕುರಿತಂತೆ ಜೆಡಿಎಸ್‌ನ ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌.ಎಂ.ರಮೇಶ್‌ ಗೌಡ, ಅವರ ಪತ್ನಿ ಡಾ.ಎ.ರಮ್ಯಾ ರಮೇಶ್‌ ಹಾಗೂ ಐಪಿಎಸ್ ಅಧಿಕಾರಿ ಬಿ.ಆರ್‌.ರವಿಕಾಂತೇಗೌಡ ಸಲ್ಲಿಸಿದ್ದ ರಿಟ್‌ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಾಗಿ ವಾದ ಮಂಡಿಸಿದ ಹೈಕೋರ್ಟ್‌ನ

ಪರವಾನಗಿ ನವೀಕರಿಸದ ಆರೋಪ| ಪವರ್ ಟಿವಿ ಪ್ರಸಾರ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ Read More »

ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ

ಸಮಗ್ರ ನ್ಯೂಸ್: ಲೋಕಸಭಾ ಸ್ಪೀಕರ್ ಹುದ್ದೆಗೆ ಬುಧವಾರ ಚುನಾವಣೆ ನಡೆದಿದೆ. ಸ್ಪೀಕರ್ ಆಗಿ ಎರಡನೇ ಅವಧಿಗೆ ಬಿಜೆಪಿಯ ಅಭ್ಯರ್ಥಿ ಓಂ ಬಿರ್ಲಾ ಹಾಗೂ ಕೇರಳದ ಮಾವೆಲಿಕರ ಕ್ಷೇತ್ರವನ್ನು ಎಂಟು ಅವಧಿಗೆ ಪ್ರತಿನಿಧಿಸಿರುವ ಕಾಂಗ್ರೆಸ್ ನ ಕೋಡಿಕುನ್ನಿಲ್ ಸುರೇಶ್ ಸ್ಪೀಕರ್‌ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ಇಂದು ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆದಿದ್ದು, ಓಂ ಬಿರ್ಲಾ 18ನೇ ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಪೀಠದಲ್ಲಿ ಕುಳಿತಿದ್ದ ಹಂಗಾಮಿ ಸ್ಪೀಕರ್‌ ಭರ್ತೃಹರಿ ಮೆಹತಾಬ್ ಅವರು ಪ್ರಸ್ತಾಪವನ್ನು ಮತಕ್ಕೆ ಹಾಕಿದರು. ಧ್ವನಿ

ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ Read More »

ನವದೆಹಲಿ: ಪೇಪರ್ ನೋಡದೇ ಪ್ರಮಾಣವಚನ ಸ್ವೀಕರಿಸಿದ ಸಂಸದೆ

ಸಮಗ್ರ ನ್ಯೂಸ್: ಅತ್ಯಂತ ಕಿರಿಯ ಸಂಸದರಲ್ಲಿ ಒಬ್ಬರಾಗಿರುವ ಶಾಂಭವಿ ಚೌಧರಿ ಅವರು ಪೇಪರ್ ಅನ್ನು ನೋಡದೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 18ನೇ ಲೋಕಸಭೆಯಲ್ಲಿ ಅತ್ಯಂತ ಕಿರಿಯ ಸಂಸದರಲ್ಲಿ ಒಬ್ಬರಾಗಿರುವ ಶಾಂಭವಿ ಚೌಧರಿ ಅವರು ಸಂಸತ್ತಿನಲ್ಲಿ ಹಿಂದಿಯಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ(ಆರ್‌ವಿ) ಪ್ರಕ್ಷದ ಶಾಂಭವಿ ಬಿಹಾರದ ಸಮಸ್ತಿಪುರದ ಪ್ರತಿನಿಧಿಯಾಗಿದ್ದಾರೆ. ಅವರು ಸಮಸ್ತಿಪುರದ ಮೊದಲ ಮಹಿಳಾ ಸಂಸದರಾಗಿದ್ದಾರೆ.

ನವದೆಹಲಿ: ಪೇಪರ್ ನೋಡದೇ ಪ್ರಮಾಣವಚನ ಸ್ವೀಕರಿಸಿದ ಸಂಸದೆ Read More »

ಸೂರಜ್ ರೇವಣ್ಣ ಮೇಲೆ‌ ಆಪ್ತನಿಂದಲೇ ಲೈಂಗಿಕ ದೌರ್ಜನ್ಯ ದೂರು| ಅಮಾವಾಸ್ಯೆಯಂದು ಸೀರೆ, ಬಳೆ ತೊಡ್ತಾರಂತೆ ಸೂರಜ್!!

ಸಮಗ್ರ ನ್ಯೂಸ್: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಸಲಿಂಗ ಕಾಮ ದೌರ್ಜನ್ಯದ ದೂರು ದಾಖಲಾಗಿದೆ. ಈ ಮೂಲಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 4 ದಿನಗಳ ಹಿಂದೆಯಷ್ಟೇ ಸೂರಜ್ ಪರವಾಗಿ ದೂರು ನೀಡಿದ್ದ ಶಿವಕುಮಾರ್ ಉಲ್ಟಾ ಹೊಡೆದಿದ್ದು, ಮೂರು ವರ್ಷದ ಹಿಂದೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೊಳೆನರಸೀಪುರ ಠಾಣೆಗೆ ದೂರು ನೀಡಿದ್ದಾರೆ. ಜೂನ್ 21ರಂದು ಸೂರಜ್ ರೇವಣ್ಣ ಪರವಾಗಿ ದೂರು ನೀಡಿದ್ದ ಆಪ್ತ ಶಿವಕುಮಾರ್

ಸೂರಜ್ ರೇವಣ್ಣ ಮೇಲೆ‌ ಆಪ್ತನಿಂದಲೇ ಲೈಂಗಿಕ ದೌರ್ಜನ್ಯ ದೂರು| ಅಮಾವಾಸ್ಯೆಯಂದು ಸೀರೆ, ಬಳೆ ತೊಡ್ತಾರಂತೆ ಸೂರಜ್!! Read More »

ಮಂಗಳೂರು: ಕಾಂಪೌಂಡ್ ಕುಸಿದು ನಾಲ್ವರು ದುರ್ಮರಣ

ಸಮಗ್ರ ನ್ಯೂಸ್: ಮಂಗಳೂರಿನ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ಬೆಳಗ್ಗೆ ಮನೆಯ ಹಿಂಬದಿಯಲ್ಲಿದ್ದ ಕಂಪೌಂಡ್ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಮನೆಯೊಳಗೆ ವಾಸ್ತವ್ಯವಿದ್ದ ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತ ದುರ್ದೈವಿಗಳು. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಇಬ್ಬರ ಶವಗಳನ್ನು ಹೊರ ತೆಗೆಯಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ಸಂಭವಿಸಿದೆ. ಅಬೂಬಕ್ಕರ್

ಮಂಗಳೂರು: ಕಾಂಪೌಂಡ್ ಕುಸಿದು ನಾಲ್ವರು ದುರ್ಮರಣ Read More »