June 2024

ಗ್ರಾಹಕರಿಗೆ ಮತ್ತೊಂದು ಬರೆ| ನಾಳೆಯಿಂದ ನಂದಿನಿ ಹಾಲಿನ ದರ ಏರಿಕೆ| ಪ್ಯಾಕೇಟ್ ನಲ್ಲೂ ಅಧಿಕ ಹಾಲು!!

ಸಮಗ್ರ ನ್ಯೂಸ್: ನಂದಿನಿ ಹಾಲಿನ ದರ ಲೀ.ಗೆ 2.10 ರೂ ಹೆಚ್ಚಳವಾಗಿದ್ದು, ನಾಳೆಯಿಂದಲೇ ಪರಿಷ್ಕ್ರತ ದರ ಜಾರಿಗೆ ಬರಲಿದೆ. ಕೆಎಂಎಫ್ ನಂದಿನಿ ಹಾಲಿ ದರ ಹೆಚ್ಚಳ ಮಾಡಿದ್ದು, ನಂದಿನಿ ಹಾಲಿನ ದರ ಲೀ.ಗೆ 2.10 ರೂ ಹೆಚ್ಚಳ ಮಾಡಿದೆ. ನಾಳೆಯಿಂದಲೇ ಪರಿಷ್ಕ್ರತ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಮಾಹಿತಿ ನೀಡಿದ್ದಾರೆ. ಪ್ರತಿ ಲೀಟರ್ ಹಾಲಿನ ದರವನ್ನ 2.10 ರೂ. ಹಾಗೂ ಅರ್ಧ ಲೀಟರ್ ಹಾಲಿನ ದರ 22 ರೂ. ನಿಂದ 24 ರೂ.ಗೆ […]

ಗ್ರಾಹಕರಿಗೆ ಮತ್ತೊಂದು ಬರೆ| ನಾಳೆಯಿಂದ ನಂದಿನಿ ಹಾಲಿನ ದರ ಏರಿಕೆ| ಪ್ಯಾಕೇಟ್ ನಲ್ಲೂ ಅಧಿಕ ಹಾಲು!! Read More »

ಟಿ-20 ವಿಶ್ವಕಪ್| ಸೆಮೀಸ್‌ ಗೆ ಲಗ್ಗೆ ಇಟ್ಟ‌ ಟೀಂ ಇಂಡಿಯಾ

ಸಮಗ್ರ ನ್ಯೂಸ್: ನಾಯಕ ರೋಹಿತ್ ಶರ್ಮಾ ಅವರ (92 ರನ್​, 41 ಎಸೆತ, 8 ಸಿಕ್ಸರ್, 7 ಫೋರ್​) ಪ್ರಚಂಡ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ ವಿರುದ್ಧದ ಸೂಪರ್ ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಅಮೋಘ ಗೆಲುವು ದಾಖಲಿಸಿ, ಸೆಮಿಪೈನಲ್​ಗೆ ಲಗ್ಗೆ ಇಟ್ಟಿದೆ. ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್‌ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20

ಟಿ-20 ವಿಶ್ವಕಪ್| ಸೆಮೀಸ್‌ ಗೆ ಲಗ್ಗೆ ಇಟ್ಟ‌ ಟೀಂ ಇಂಡಿಯಾ Read More »

ಪಟ್ಲಬೆಟ್ಟಕ್ಕೆ ತೆರಳಿದ್ದ ತಂಡದ ಮೇಲೆ ಸ್ಥಳೀಯರಿಂದ ಹಲ್ಲೆ; ದೂರು ದಾಖಲು

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ಬಿಸಿಲೇ ಘಾಟ್‌ ಸಮೀಪದ ಸಕಲೇಶಪುರ ತಾಲೂಕು ವ್ಯಾಪ್ತಿಯ ಪ್ರವಾಸಿ ತಾಣ ಪಟ್ಲಬೆಟ್ಟಕ್ಕೆ ತೆರಳಿದ್ದ ಮಂಗಳೂರಿನ ತಂಡದ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದ್ದು, ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಹಲ್ಲೆಗೊಳಗಾದವರಲ್ಲಿ ಮಂಗಳೂರಿನ ಕೊಟ್ಟಾರದ ಯುವಕ ಈ ಬಗ್ಗೆ ಸಕಲೇಶಪುರ ತಾಲೂಕಿನ ಯಸಲೂರು ಠಾಣೆಗೆ ದೂರು ನೀಡಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಬೈಕ್‌ನಲ್ಲಿ ಬಂದಿರುವ ತಂಡದ ಜತೆ ಅಲ್ಲಿದ್ದ ವ್ಯಕ್ತಿಗಳು ಬೈಕ್‌ನಲ್ಲಿ ಹೋಗಬೇಡಿ ಎಂಬಿತ್ಯಾದಿ

ಪಟ್ಲಬೆಟ್ಟಕ್ಕೆ ತೆರಳಿದ್ದ ತಂಡದ ಮೇಲೆ ಸ್ಥಳೀಯರಿಂದ ಹಲ್ಲೆ; ದೂರು ದಾಖಲು Read More »

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಿರ್ಧಾರ| ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ತೀರ್ಮಾನ

ಸಮಗ್ರ ನ್ಯೂಸ್: ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ನಡೆದ ರಾಜ್ಯ ಧಾರ್ಮಿಕ ಪರಿಷತ್‌ ಸಭೆಯಲ್ಲಿ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಾಧಿಕಾರ ರಚನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅವಧಿ ಮಾರ್ಚ್‌ಗೆ ಕೊನೆಗೊಂಡಿದ್ದು, ಸದ್ಯ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ. ಸಭೆಯಲ್ಲಿ ವ್ಯವಸ್ಥಾಪನ ಸಮಿತಿ ರಚನೆಗೆ ಅಧಿಸೂಚನೆ ಹೊರಡಿಸುವ ನಿರ್ಧಾರ ನಿರೀಕ್ಷೆಯಲ್ಲಿತ್ತು. ಆದರೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ 100 ಕೋಟಿಗೂ ಅಧಿಕ ಆದಾಯ ಬರುವ ಕ್ಷೇತ್ರವಾಗಿರುವುದರಿಂದ ಅಭಿವೃದ್ಧಿ ಪ್ರಾಧಿಕಾರ ಮಾಡುವ

ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಿರ್ಧಾರ| ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ತೀರ್ಮಾನ Read More »

ಅಂಗನವಾಡಿಗಳಲ್ಲೇ LKG, UKG ಆರಂಭಿಸಲು ಸಿಎಂ ಸಮ್ಮತಿ – ಲಕ್ಷ್ಮೀ‌ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು. ಅಂಗನವಾಡಿ

ಅಂಗನವಾಡಿಗಳಲ್ಲೇ LKG, UKG ಆರಂಭಿಸಲು ಸಿಎಂ ಸಮ್ಮತಿ – ಲಕ್ಷ್ಮೀ‌ ಹೆಬ್ಬಾಳ್ಕರ್ Read More »

ರಾಜ್ಯದಲ್ಲಿ ಕೃತಕ ಬಣ್ಣ ಬಳಕೆ ನಿಷೇಧಿಸಿ ಆದೇಶ| ನಿಯಮ‌ ಉಲ್ಲಂಘಿಸಿದರೆ ಜೈಲು, ಭಾರೀ ದಂಡ ಪಕ್ಕಾ

ಸಮಗ್ರ ನ್ಯೂಸ್: ವೆಜ್ & ನಾನ್‌ವೆಜ್ ಕಬಾಬ್‍ ಮುಂತಾದ ಆಹಾರ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಕೃತಕ ಬಣ್ಣಗಳನ್ನು ಬಳಸಿರುವ

ರಾಜ್ಯದಲ್ಲಿ ಕೃತಕ ಬಣ್ಣ ಬಳಕೆ ನಿಷೇಧಿಸಿ ಆದೇಶ| ನಿಯಮ‌ ಉಲ್ಲಂಘಿಸಿದರೆ ಜೈಲು, ಭಾರೀ ದಂಡ ಪಕ್ಕಾ Read More »

ವಯನಾಡಿನ ಜನರಿಗೆ ಪತ್ರ ಬರೆದ ರಾಹುಲ್ ಗಾಂಧಿ

ಸಮಗ್ರ ನ್ಯೂಸ್: ವಯನಾಡ್ ಲೋಕಸಭಾ ಕ್ಷೇತ್ರವನ್ನು ತೊರೆಯಲು ನಿರ್ಧರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ವಯನಾಡ್‌ ಜನತೆಗೆ ಭಾವನಾತ್ಮಕ ಪತ್ರವೊಂದನ್ನು ಬರೆದಿದ್ದಾರೆ. ನೀವು ನನ್ನನ್ನು ಅಪರಿಮಿತ ಪ್ರೀತಿ ಮತ್ತು ವಾತ್ಸಲ್ಯದಿಂದ ಅಪ್ಪಿಕೊಂಡಿದ್ದೀರಿ. ನೀವು ಯಾವ ರಾಜಕೀಯ ರಚನೆಯನ್ನು ಬೆಂಬಲಿಸಿದ್ದೀರಿ?, ನೀವು ಯಾವ ಸಮುದಾಯಕ್ಕೆ ಸೇರಿದವರು?, ನೀವು ಯಾವ ಧರ್ಮವನ್ನು ನಂಬಿದ್ದೀರಿ? ಅಥವಾ ನೀವು ಯಾವ ಭಾಷೆಯಲ್ಲಿ ಮಾತನಾಡುತ್ತೀರಿ? ಎಂಬುದು ಮುಖ್ಯವಲ್ಲ ಎಂದರು. ನಾನು ದಿನದಿಂದ ದಿನಕ್ಕೆ ನಿಂದನೆಯನ್ನು ಎದುರಿಸಿದಾಗ ನೀವು ಕೊಟ್ಟ ಪ್ರೀತಿ ನನ್ನನ್ನು ರಕ್ಷಿಸಿತು. ನೀವೇ

ವಯನಾಡಿನ ಜನರಿಗೆ ಪತ್ರ ಬರೆದ ರಾಹುಲ್ ಗಾಂಧಿ Read More »

ಸಂಸತ್ತಿನಲ್ಲಿ ಅನುರಣಿಸಿದ ತುಳು| ದೈವದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದ ಚೌಟ

ಸಮಗ್ರ ನ್ಯೂಸ್: ದ.ಕ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿವ ಬ್ರಿಜೇಶ್ ಚೌಟರವರು ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭೆಯಲ್ಲಿ ಸದಸ್ಯರಾಗಿ ಅವರು ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 18ನೇ ಸಂಸತ್ನಲ್ಲಿ ಮೊದಲ ಲೋಕಸಭೆ ಅಧಿವೇಶನ ಆರಂಭವಾಯಿತು. ಪದ್ದತಿಯಂತೆ ಎಲ್ಲಾ ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಬೋಧಿಸಲಾಯಿತು. ಈ ವೇಳೆ ದಕ್ಷಿಣ ಕನ್ನಡ ಲೋಕಸಭೆ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವ ಬ್ರಿಜೇಶ್ ಚೌಟರವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಚೌಟರವರು ತುಳುನಾಡಿನ

ಸಂಸತ್ತಿನಲ್ಲಿ ಅನುರಣಿಸಿದ ತುಳು| ದೈವದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದ ಚೌಟ Read More »

ಲೈಂಗಿಕ‌ ದೌರ್ಜನ್ಯ ಪ್ರಕರಣ|ಜು.8ರವರೆಗೂ ಪ್ರಜ್ವಲ್ ರೇವಣ್ಣಗೆ ಜೈಲು ಖಾಯಂ

ಸಮಗ್ರ ನ್ಯೂಸ್: ಲೈಂಗಿಕ ದೌರ್ಜನ್ಯ, ಅಶ್ಲೀಲ ವೀಡಿಯೋ ಕೇಸ್, ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಎಸ್‌ಐಟಿ ಕಸ್ಟಡಿಗೆ ಕೋರ್ಟ್ ನೀಡಿತ್ತು. ಇಂದು ಎಸ್‌ಐಟಿ ಕಸ್ಟಡಿ ಅಂತ್ಯಗೊಂಡ ಕಾರಣ, ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು, ಪ್ರಜ್ವಲ್ ಗೆ ಜು.8 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್‌ಐಟಿ ಕಸ್ಟಡಿಯಲ್ಲಿದ್ದಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ

ಲೈಂಗಿಕ‌ ದೌರ್ಜನ್ಯ ಪ್ರಕರಣ|ಜು.8ರವರೆಗೂ ಪ್ರಜ್ವಲ್ ರೇವಣ್ಣಗೆ ಜೈಲು ಖಾಯಂ Read More »

ಕುಕ್ಕೆ ಸುಬ್ರಹ್ಮಣ್ಯ: ನಾಣ್ಯಗಳಿಂದ ತುಲಾಭಾರ ನೆರವೇರಿಸಿದ ಮಾಜಿ ಸಿಎಂ ಯಡಿಯೂರಪ್ಪ

ಸಮಗ್ರ ನ್ಯೂಸ್: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದರು. ಸೋಮವಾರ ಬೆಳಿಗ್ಗೆ ಕುಕ್ಕೆಗೆ ಆಗಮಿಸಿದ ಯಡಿಯೂರಪ್ಪ ಅವರನ್ನು ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದರು. ಮಾಜಿ ಸಚಿವ ಅಂಗಾರ, ಮೋಹನ್ ರಾಮ ಸುಳ್ಳಿ ಹಾಗೂ ದೇವಳ ಸಮಿತಿಯವರು ಇದ್ದರು. ದೇವಾಲಯದ ಅರ್ಚಕರಾದ ಸತ್ಯನಾರಾಯಣ ನೂರಿತಾಯ ಅವರು ತುಲಾಭಾರ ಸೇವೆಯನ್ನು ನೆರವೇರಿಸಿದರು

ಕುಕ್ಕೆ ಸುಬ್ರಹ್ಮಣ್ಯ: ನಾಣ್ಯಗಳಿಂದ ತುಲಾಭಾರ ನೆರವೇರಿಸಿದ ಮಾಜಿ ಸಿಎಂ ಯಡಿಯೂರಪ್ಪ Read More »