ಸಮಗ್ರ ನ್ಯೂಸ್: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಊಪಿನಹಳ್ಳಿ ಗೇಟ್ ಬಳಿ ಭಾನುವಾರ ನಡೆದಿದೆ.

ಮಡಬ ಗ್ರಾಮದ ಮಂಜುನಾಥ್ (26) ಮೃತ ದುರ್ದೈವಿ, ಮತ್ತೋಬ್ಬರ ಗುರುತು ಪತ್ತೆಯಾಗಿಲ್ಲ. ಚನ್ನರಾಯಪಟ್ಟಣದ ಕಡೆಗೆ ಬರುತ್ತಿದ್ದ ಕಾರು ಹಾಗೂ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ KA-11-F-0511 ನಂಬರ್‌ನ ಸಾರಿಗೆ ಬಸ್ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಕಾರು ಬಸ್ಸಿನಡಿಗೆ ನುಗ್ಗಿದೆ. ಕಾರನ್ನು ಹೊರಗೆಳೆದು ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಅಪಘಾತದಿಂದ ಕಾರಿನಲ್ಲಿದ್ದ ಇಬ್ಬರ ಮೃತದೇಹಗಳು ನಜ್ಜುಗುಜ್ಜಾಗಿವೆ.