Ad Widget .

ಧರ್ಮಸ್ಥಳ: ಎರಡು ವರ್ಷದ ಹಸುಗೂಸನ್ನು ಬಿಟ್ಟು ಮಹಿಳೆ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ಎರಡು‌ ವರ್ಷದ‌‌ ಮಗುವಿನ ತಾಯಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳ್ತಂಗಡಿ‌ ತಾಲೂಕಿನ ಧರ್ಮಸ್ಥಳ‌ ಗ್ರಾಮದ ಜೋಡುಸ್ಥಾನ ಎಂಬಲ್ಲಿ ‌ನಡೆದಿದೆ. ಮೃತರನ್ನು ಇಲ್ಲಿನ ನಿವಾಸಿ ರಕ್ಷಿತಾ ಜೈನ್ (26 ವ) ಎಂದು ಗುರುತಿಸಲಾಗಿದೆ.

Ad Widget . Ad Widget .

ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿತ್ಯನೂತನ ಭಜನಾ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜು.2ರಂದು ಘಟನೆ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದೆ.

Ad Widget . Ad Widget .

Leave a Comment

Your email address will not be published. Required fields are marked *