Ad Widget .

ಗುಡ್‌ನ್ಯೂಸ್‌ ಕೊಟ್ಟ ಕೊಡಗಿನ ಬೆಡಗಿ ನಟಿ ಹರ್ಷಿಕಾ ಪೂಣಚ್ಚ

ಸಮಗ್ರ ನ್ಯೂಸ್: ಕಳೆದ ವರ್ಷ ವಿವಾಹವಾಗಿದ್ದ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಈಗ ಗುಡ್ ನ್ಯೂಸ್ ನೀಡಿದ್ದಾರೆ. ಹೌದು ಈ ಜೋಡಿ ಇದೀಗ ಪೋಷಕರಾಗುತ್ತಿದ್ದಾರೆ. ತಾಯಿಯಾಗುತ್ತಿರುವ ಸಂಭ್ರಮವನ್ನು ಹರ್ಷಿಕಾ ಪೂಣಚ್ಚ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Ad Widget . Ad Widget . Ad Widget . Ad Widget .

ಅಕ್ಟೋಬರ್​ನಲ್ಲಿ ಭುವನ್ ಹಾಗೂ ಹರ್ಷಿಕಾ ಮನೆಗೆ ಹೊಸ ಅಥಿತಿ ಆಗಮನವಾಗಲಿದೆ. ಸದ್ಯ ಹರ್ಷಿಕಾ ಐದು ತಿಂಗಳ ಗರ್ಭಿಣಿ ಆಗಿದ್ದು ತಾಯಿಯಾಗುತ್ತಿರುವ ಸಂಭ್ರಮವನ್ನು ನಟಿ ಹರ್ಷಿಕಾ ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ. ಹರ್ಷಿಕಾ, ಭುವನ್ ಹಾಗೂ ಅವರ ಕುಟುಂಬದವರು ಕೊಡವ ಶೈಲಿಯ ಉಡುಗೆ ತೊಟ್ಟು ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ.

Ad Widget . Ad Widget .

ಹರ್ಷಿಕಾ‌ ಮತ್ತು ಭುವನ್ ಪೊನ್ನಣ್ಣ ಮನೆಯವರ ಒಪ್ಪಿಗೆ ಮೇರೆಗೆ ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಕೊಡವ ಸಂಪ್ರದಾಯದಂತೆ ವಿರಾಜಪೇಟೆಯ ಅಮ್ಮತ್ತಿಯಲ್ಲಿ ಹರ್ಷಿಕಾ ಮತ್ತು ಭುವನ್ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈ ಇಬ್ಬರ ವಿವಾಹಕ್ಕೆ ಸ್ಯಾಂಡಲ್ ವುಡ್ ‌ಅನೇಕ ಸೆಲೆಬ್ರಿಟಿಗಳು ಭಾಗಿಯಾಗಿದ್ದರು.

Leave a Comment

Your email address will not be published. Required fields are marked *