Ad Widget .

ಕರ್ನಾಟಕ ರಕ್ಷಣಾ ವೇದಿಕೆಯಿಂದ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಮನವಿ

ಸಮಗ್ರ ನ್ಯೂಸ್: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯದ್ಯಂತ ಎಲ್ಲಾ ಜಿಲ್ಲಾಧಿಕಾರಿ ಕಚೇರಿಗಳ ಮುಂಭಾಗದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ಕೇಂದ್ರ ಸರ್ಕಾರ ರಾಜ್ಯ ಸರ್ಕಾರ 80 ರಿಂದ 65% ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಹಾಗೂ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ನೀಡಬೇಕು, ಡಾಕ್ಟರ್ ಸರೋಜಿನಿ ಮಹಿಷಿ ವರದಿಯನ್ನು ಅನುಷ್ಠಾನಗೊಳಿಸಬೇಕು, ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂದು ಸತ್ಯಾಗ್ರಹ ಹಾಗೂ ಹೋರಾಟವನ್ನು ಹಮ್ಮಿಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವ ಮೂಲಕ ಪ್ರತಿಭಟನೆ ಮಾಡಿದರು.

Ad Widget . Ad Widget .

ಮಾನ್ಯ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಯವರ ಮುಖಾಂತರ ಮನವಿಯನ್ನು ಸಲ್ಲಿಸಲಾಯಿತು. ಬಳಿಕ ಜಿಲ್ಲಾಧ್ಯಕ್ಷ ಲಯನ್ ಅನಿಲ್ ದಾಸ್ ರವರು ಮಾಧ್ಯಮದವರೊಂದಿಗೆ ಮಾತನಾಡಿದರು.

Ad Widget . Ad Widget .

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಲಯನ್ ಅನಿಲ್ ದಾಸ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ.ಶ್ರೀನಾಥ್, ಸರ್ವ ಕಾಲೇಜ್ ವಿದ್ಯಾರ್ಥಿ ಸಂಘದ ಕಾನೂನು ಸಲಹೆಗಾರ ದಿನಕರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕಿರಣ್ ಅಟ್ಲೋರ್, ಆಟೋ ಘಟಕದ ಮಾಜಿ ಅಧ್ಯಕ್ಷ ಅರುಣ್ ಕುಮಾರ್, ಝೆರಾಲ್ಡ್ ಸುರೇಶ್, ತಾಲೂಕು ಅಧ್ಯಕ್ಷ ಅಬ್ದುಲ್ ಜಲೀಲ್, ಫೈರೋಜ್ ಮೇಲ್ವಿನ್ ಡಿಸೋಜ, ಅಬ್ದುಲ್ ರಜಾಕ್ ಮತ್ತಿತರರು ಭಾಗವಹಿಸಿದ್ದರು.

Leave a Comment

Your email address will not be published. Required fields are marked *