Ad Widget .

ಕೋಲಾರ: ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯೊಬ್ಬಳು ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನ ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಇದರಿಂದ ಕಾಲೇಜು ಉಪನ್ಯಾಸಕರು, ಸಹಪಾಠಿಗಳು ಆತಂಕಕ್ಕೀಡಾಗಿದ್ದಾರೆ.

Ad Widget . Ad Widget .

ಸದ್ಯ ವಿದ್ಯಾರ್ಥಿಯನ್ನು ಸಹ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಕೋಲಾರ ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಮಗು ಕರುಣಿಸಿದ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಈ ಘಟನೆ ಗೊಂದಲಕ್ಕೆ ಕಾರಣವಾಗಿದೆ. ಹೊಟ್ಟೆಯಲ್ಲಿ ಮಗು ಬೆಳೆಯುತ್ತಿದ್ದದು ಬಾಲಕಿಗೆ ತಿಳಿದಿರಲಿಲ್ಲವಾ.. ಪೋಷಕರು ಬಾಲಕಿಯ ದೇಹದಲ್ಲಾದ ಬದಲಾವಣೆಯನ್ನು ಗಮನಿಸಲಿಲ್ಲವ ಎಂಬುದು ಸಂಶಯವಾಗಿದೆ. ಇದೇ ವಿಚಾರವಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *