Ad Widget .

ಮಂಗಳೂರು: ಸಮವಸ್ತ್ರದಲ್ಲೇ ಹಾರೆ ಹಿಡಿದು ರಸ್ತೆ ಗುಂಡಿ ಮುಚ್ಚಿದ ಪೊಲೀಸರು| ಸಾರ್ವಜನಿಕರಿಂದ ವ್ಯಾಪಕ ಶ್ಲಾಘನೆ

ಸಮಗ್ರ ನ್ಯೂಸ್: ಹೊಂಡ ಗುಂಡಿಗಳಿಂದ ತುಂಬಿದ ರಸ್ತೆಯಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುತ್ತಿರುವುದನ್ನು ಮನಗಂಡು ಪೊಲೀಸ್ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ ಹಾರೆ ಹಿಡಿದು ರಸ್ತೆಗಿಳಿದು ರಸ್ತೆ ಗುಂಡಿಗಳನ್ನು ಮುಚ್ಚಿದ ಘಟನೆ ಮಂಗಳೂರು ನಗರದ ಕೆಪಿಟಿಯಲ್ಲಿ ನಡೆದಿದೆ.

Ad Widget . Ad Widget .

ಕೆಪಿಟಿಯಲ್ಲಿನ ಹೆದ್ದಾರಿ ಸಂಪೂರ್ಣವಾಗಿ ರಸ್ತೆ ಗುಂಡಿಗಳಿಂದ ಕೂಡಿತ್ತು. ಇದರ ಪರಿಣಾಮವಾಗಿ ವಾಹನ ಸವಾರರು ಈ ಹೆದ್ದಾರಿಯಲ್ಲಿ ಸಂಚರಿಸಲು ತೊಂದರೆ ಅನುಭವಿಸುತ್ತಿದ್ದರು. ಅನೇಕ ಸಲ ಅಪಘಾತಗಳ ನಡೆಯುವುದು ಸ್ವಲ್ಪದರಲ್ಲಿಯೇ ತಪ್ಪಿದ್ದು ಇದನ್ನು ಮನಗಂಡ ಕದ್ರಿ ಸಂಚಾರಿ ಠಾಣಾ ಸಬ್ ಇನ್‌ಸ್ಪೆಕ್ಟರ್ ಈಶ್ವರ ಸ್ವಾಮಿಯವರು ತಮ್ಮ ಸಿಬ್ಬಂದಿ ಸಹಾಯದಿಂದ ಕಾಂಕ್ರೀಟ್ ಅಳವಡಿಸಿ, ರಸ್ತೆ ಗುಂಡಿಗಳನ್ನು ಮುಚ್ಚಿದ್ದರು. ಅವರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

Ad Widget . Ad Widget .

ಸ್ಥಳೀಯ ಆಡಳಿತ ಮಾಡದೇ ಇರುವ ಕೆಲಸವನ್ನು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಮಾಡಿ ತೋರಿಸಿದೆ. ಇದು ಪೊಲೀಸರಿಗೆ ಇರುವ ಸಾರ್ವಜನಿಕ ಕಾಳಜಿಯಾಗಿದೆ ಎಂದು ಸ್ಥಳೀಯರು ಮೆಚ್ಚುಗೆ ಸೂಚಿಸಿದ್ದು, ಅವರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

Leave a Comment

Your email address will not be published. Required fields are marked *