Ad Widget .

ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು: ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ದೆಹಲಿಯಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಹೆಚ್ಚಿನ ನಿಗಾ ವಹಿಸಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಮಾಜಿ ಉಪ ಪ್ರಧಾನಿಯ ಆರೋಗ್ಯವು ಸ್ಥಿರವಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿದುಬಂದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ರಾತ್ರಿ 9 ಗಂಟೆ ಸುಮಾರಿಗೆ ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. 96 ವರ್ಷವಾದ ಎಲ್‌.ಕೆ.ಅಡ್ವಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜೂನ್‌ 27ರಂದು ಕೂಡ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಹಾಗಾಗಿ ಅವರನ್ನು ಅದೇ ರಾತ್ರಿ ದೆಹಲಿಯಲ್ಲಿರುವ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಅವರನ್ನು ಡಿಸ್‌ಚಾರ್ಜ್‌ ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ಚಿಕಿತ್ಸೆ ಪಡೆಯುತ್ತಿದ್ದಾರೆ.

Ad Widget . Ad Widget . Ad Widget .

ಮೊನ್ನೆಯಷ್ಟೇ ಸರ್ಕಾರ ರಚನೆಗೆ ಹಕ್ಕು ಸಾಧಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಅಡ್ವಾಣಿಯವರನ್ನು ಭೇಟಿ ಮಾಡಿದ್ದರು.

Leave a Comment

Your email address will not be published. Required fields are marked *