ಸಮಗ್ರ ನ್ಯೂಸ್: ಭಾರಿ ಮಳೆಯಾಗುತ್ತಿರುವ ಕಾರಣ ಬಂಟ್ವಾಳ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ.
ಜುಲೈ 3ರಂದೂ ಭಾರಿ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿತ್ತು. ಜುಲೈ 4ರಂದೂ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಳ್ತಂಗಡಿ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.