Ad Widget .

5, 8 ಮತ್ತು 9ನೇ ತರಗತಿ ಮಕ್ಕಳ ಬೋರ್ಡ್‌ ಪರೀಕ್ಷೆ ಈ ವರ್ಷವೂ ಇಲ್ಲ/ ಶಿಕ್ಷಣ ಇಲಾಖೆ ಸೂಚನೆ

ಸಮಗ್ರ ನ್ಯೂಸ್‌: ಬೋರ್ಡ್‌ ಪರೀಕ್ಷೆಯ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವುದರಿಂದ, 2024-25ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ಮಕ್ಕಳಿಗೆ ಈ ಹಿಂದೆ ಇದ್ದಂತೆ ಎಲ್ಲ ತರಗತಿಗಳಿಗೂ ಮೌಲ್ಯಾಂಕನ ಮುಂದುವರೆಸಲು ಶಿಕ್ಷಣ ಇಲಾಖೆ ಸೂಚಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳು 1ರಿಂದ 9ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಭಾಗ 1 ಮತ್ತು ಭಾಗ 2ರ ಆಧಾರದಲ್ಲಿ ರೂಪಣಾತ್ಮಕ ಮತ್ತು ಸಂಕಲನಾತ್ಮಕ ಮೌಲ್ಯಾಂಕನ ಪೂರ್ಣಗೊಳಿಸಬೇಕು. ಅಂತಿಮವಾಗಿ ಫಲಿತಾಂಶ ನಿರ್ಧರಿಸಲು ಆಂತರಿಕ ಮೌಲ್ಯಾಂಕನ ಅಂಕಗಳು ಮತ್ತು ಲಿಖಿತ ಪರೀಕ್ಷೆಯ (ಎಸ್‌ಎ-2) ಅಂಕಗಳನ್ನು ಪರಿಗಣಿಸಬೇಕು. 10ನೇ ತರಗತಿಗೆ ಮಾತ್ರ ಆಂತರಿಕ ಮೌಲ್ಯಾಂಕನ ಅಂಕಗಳು ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ನಡೆಸುವ ವಾರ್ಷಿಕ ಪರೀಕ್ಷೆಯ ಅಂಕಗಳನ್ನು ಫಲಿತಾಂಶವಾಗಿ ಪ್ರಕಟಿಸಬೇಕೆಂದು ಎಲ್ಲ ಶಾಲೆಗಳಿಗೂ ಇಲಾಖೆ ನಿರ್ದೇಶನ ನೀಡಿದೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *