Ad Widget .

ದರ್ಶನ್ ಮತ್ತು ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದ ಕೋರ್ಟ್| ಜು.18ರವರೆಗೆ ಜೈಲೂಟ ಖಾಯಂ

ಸಮಗ್ರ ನ್ಯೂಸ್: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಿಸಿ ಇದೀಗ ಆರ್ಥಿಕ ಅಪರಾಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ.

Ad Widget . Ad Widget .

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ನ್ಯಾಯಾಲಯ, ದರ್ಶನ ನಟ ಪವಿತ್ರಗೌಡ ಮತ್ತು ಇತರರನ್ನು ಆರ್ಥಿಕ ಅಪರಾಧಗಳ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು.

Ad Widget . Ad Widget .

ಪರಪ್ಪನ ಅಗ್ರಹಾರ ಹಾಗೂ ತುಮಕೂರು ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.

ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು. ಇಂದು ನ್ಯಾಯಾಲಯದ ಮುಂದೆ ಆರೋಪಗಳನ್ನು ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ, ನಟ ದರ್ಶನ್ ಪವಿತ್ರ ಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನು ವಿಸ್ತರಿಸಿದ ಕೋರ್ಟ್ ಜುಲೈ 18ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.

Leave a Comment

Your email address will not be published. Required fields are marked *