Ad Widget .

ಇದು ವಿಶ್ವದ ಮೊದಲ ಪ್ರಕರಣ| ಮೆಟ್ಟಿಲುಗಳಿಂದ‌ ಜಿಗಿದು ರೋಬೋಟ್ ಆತ್ಮಹತ್ಯೆ!!

ಸಮಗ್ರ ನ್ಯೂಸ್: ಮಾನಸಿಕವಾಗಿ ನೊಂದ ಜನರು ಹೆಚ್ಚಾಗಿ ಆತ್ಮಹತ್ಯೆಯನ್ನೆ ಆಯ್ಕೆ ಮಾಡಿಕೊಳ್ಳುತ್ತಾರೆ. ಇದು ಜಗತ್ತನ್ನು ಕಾಡುತ್ತಿರುವ ಸಮಸ್ಯೆಗಳಲ್ಲಿ ಒಂದು. ಆದರೆ ನಾವು ಇದುವರೆಗೂ ಮನುಷ್ಯರು ಸಾವಿಗೆ ಶರಣಾಗುವುದನ್ನು ನೋಡಿದ್ದೇವೆ ಆದರೆ ಇಲ್ಲಿ ಜಗತ್ತಿನಲ್ಲೇ ಮೊದಲ ಬಾರಿಗೆ ಹೊಸ ಕೇಸ್‌ ಕೇಳಿಬಂದಿದೆ.

Ad Widget . Ad Widget .

ದಕ್ಷಿಣ ಕೊರಿಯಾದಲ್ಲಿ ರೋಬೋಟ್ ಆತ್ಮಹತ್ಯೆಗೆ ಶರಣಾಗಿದೆ. ಮಧ್ಯ ದಕ್ಷಿಣ ಕೊರಿಯಾದ ಪುರಸಭೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರೋಬೋಟ್​ ಮೆಟ್ಟಿಲುಗಳ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದೆ ಎಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಬಳಿಕ ರೋಬೋಟ್​ನ ಭಾಗಗಳನ್ನು ಸಂಗ್ರಹಿಸಲಾಗಿದೆ. ಮತ್ತು ಅದನ್ನು ವಿನ್ಯಾಸಗೊಳಿಸಿದ ಕಂಪನಿಯು ವಿಶ್ಲೇಷಿಸುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Ad Widget . Ad Widget .

ಮುನ್ಸಿಪಾಲ್ ಕಾರ್ಪೊರೇಷನ್​​ನ ಕೆಲಸದಲ್ಲಿ ರೋಬೋಟ್ ಸಹಾಯ ಮಾಡುತ್ತಿತ್ತು. ಕಳೆದ ಒಂದು ವರ್ಷದಿಂದ ಗುಮಿ ನಗರದ ನಿವಾಸಿಗಳಿಗೆ ಆಡಳಿತಾತ್ಮಕ ಕೆಲಸದಲ್ಲಿ ಬ್ಯುಸಿ ಆಗಿತ್ತು. ಕಳೆದ ವಾರ ಮೆಟ್ಟಿಲುಗಳ ಕೆಳಭಾಗದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ರೋಬೋಟ್ ಪತ್ತೆಯಾಗಿದೆ. ಪ್ರತ್ಯಕ್ಷದರ್ಶಿಗಳು ರೋಬೋಟ್ ಬೀಳುವ ಮೊದಲು ಓಡಾಡುತ್ತಿರೋದನ್ನು ನೋಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಕೆಲಸ ಮಾಡುತ್ತಿತ್ತು. ಯಾಕೆ ಹಾಗೆ ಮಾಡಿಕೊಂಡಿತು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *