ಉಡುಪಿಯಲ್ಲಿ ಧಾರಾಕಾರ ಮಳೆ ಹಿನ್ನೆಲೆ| ಜಿಲ್ಲೆಯ ಈ ತಾಲೂಕುಗಳ ಶಾಲೆ, ಪಿಯು ಕಾಲೇಜುಗಳಿಗೆ ಜು.5 ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ಕಳೆದ ಎರಡು ದಿನಗಳಿಂದಲೂ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ, ಬ್ರಹ್ಮಾವರ, ಬೈಂದೂರು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಕುಂದಾಪುರ ಎಸಿ ರಶ್ಮಿ ಎಸ್‌. ಕುಂದಾಪುರ ಆದೇಶಿಸಿದ್ದಾರೆ.

. Ad Widget . Ad Widget

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕಳೆದ ಕೆಲವು ದಿನಗಳಿಂದಲೂ ಬಾರೀ ಮಳೆಯಾಗುತ್ತಿದೆ. ಮುಂಜಾಗೃತ ಕ್ರಮವಾಗಿ ಜುಲೈ 5 ರಂದು ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ ಬಿದ್ದಿರುವ ಕುಂದಾಪುರ, ಬೈಂದೂರು ಹಾಗೂ ಬ್ರಹ್ಮಾವರ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶಿಸಲಾಗಿದೆ.

. Ad Widget . . Ad Widget . Ad Widget

ಜಿಲ್ಲೆಯಾದ್ಯಂತ ಪದವಿ ಕಾಲೇಜು, ಸ್ನಾತಕೋತ್ತರ ಪದವಿ, ಡಿಪ್ಲೊಮ, ಇಂಜಿನಿಯರಿಂಗ್‌ ಐಟಿಐ ಕಾಲೇಜುಗಳಿಗೆ ರಜೆ ಇರುವುದಿಲ್ಲ. ಅಲ್ಲದೇ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ. ಕಾಲೇಝುಗಳ ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವಾಗ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪಿಸುವ ಕಾರ್ಯವನ್ನು ಮಾಡಬೇಕು.

ಹಳ್ಳ, ತೋಡುಗಳನ್ನು ದಾಟಿಕೊಂಡು ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಸುರಕ್ಷತೆಯ ದೃಷ್ಠಿಯಿಂದ ಮನೆಯಲ್ಲಿಯೇ ಇರುವಂತೆ ಸೂಚನೆಯನ್ನು ನೀಡಬೇಕು. ಮಳೆಯ ಹಿನ್ನೆಲೆಯಲ್ಲಿ ನೀಡಿರುವ ರಜೆಯನ್ನು ಶನಿವಾರ ಅಐವಾ ಭಾನುವಾರದಂದು ಹೆಚ್ಚುವರಿ ತರಗತಿಗಳನ್ನು ನಡೆಸಿ, ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Leave a Comment

Your email address will not be published. Required fields are marked *