Ad Widget .

ಹವಾಮಾನ ವರದಿ| ವಾರಾಂತ್ಯದಲ್ಲಿ ಕರಾವಳಿ,‌ ಮಲೆನಾಡಿನಲ್ಲಿ ಅಬ್ಬರಿಸಲಿದ್ದಾನೆ ವರುಣ| ಜು.5ರಿಂದ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರಾವಳಿ ಮತ್ತು ಮಲೆನಾಡಿನಲ್ಲಿ ನಾಳೆ (ಜುಲೈ5 ) ರಿಂದ ಮತ್ತೆ ನಾಲ್ಕು ದಿನ ಭಾರಿಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಜೊತೆಗೆ ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Ad Widget . Ad Widget .

ಇನ್ನು ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 5, 6 , 7 ಮತ್ತು 8ರಂದು 4 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದರೆ, 9ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಭಾಗದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಜುಲೈ 6, 7ರಂದು ಆರೆಂಜ್ ಅಲರ್ಟ್ ಮತ್ತು 5 ಮತ್ತು 9ಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Ad Widget . Ad Widget .

ಐದೂ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿಯಿಂದ ಕೂಡಿದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಕೊಡಗು ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Leave a Comment

Your email address will not be published. Required fields are marked *