ಸಮಗ್ರ ನ್ಯೂಸ್: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳು ಅಲ್ಲದೇ ಪದವಿ ಪೂರ್ವ ಕಾಲೇಜುಗಳಿಗೆ ಜು.6ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಇದಕ್ಕೆ ಮೊದಲು ಅತಿ ಹೆಚ್ಚು ಮಳೆ ಸುರಿಯುತ್ತಿರುವ ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಅವರು ಆದೇಶಿಸಿದ್ದರು.