Ad Widget .

ಅಂಗನವಾಡಿ ಪುಟಾಣಿಗಳಿಗೆ ಗುಡ್ ನ್ಯೂಸ್| ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ಬ್ಯಾಗ್, ಯೂನಿಫಾರ್ಮ್ ವಿತರಣೆ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಲಾಗುತ್ತಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಎನ್ನುವಂತೆ ಅಂಗನವಾಡಿ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಬ್ಯಾಗ್, ಯೂನಿಫಾರ್ಮ್ ವಿತರಣೆಗೆ ಚಿಂತನೆ ನಡೆಸಿದೆ.

Ad Widget . Ad Widget .

ಬೆಂಗಳೂರಿನ ಗೃಹಕಚೇರಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ (ಎಐಟಿಯುಸಿ) ಕಾರ್ಯಕರ್ತರು ಭೇಟಿ ಮಾಡಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಮಾತನಾಡಿದಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಯೂನಿಫಾರ್ಮ್ ಕೊಡುವ ಬಗ್ಗೆ ತೀರ್ಮಾನಿಸಿದೆ ಎಂದರು.

Ad Widget . Ad Widget .

ಕರ್ನಾಟಕ ಪಬ್ಲಿಕ್ ಶಾಲೆ (ಕೆ ಪಿಎಸ್) ಹಾಗೂ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಅಂಗನವಾಡಿ ಶಿಕ್ಷಕರಿಗೆ ಯಾವುದೇ ತೊಂದರೆ ಆಗುವುದಿಲ್ಲ. ನಿಮ್ಮ ಹಾಗೂ ಮಕ್ಕಳ ಇಬ್ಬರ ಹಿತದೃಷ್ಟಿಯಿಂದ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

Leave a Comment

Your email address will not be published. Required fields are marked *