ಭಾರತ-ಜಿಂಬಾಬ್ವೆ ನಡುವೆ ಇಂದು ಮೊದಲ ಪಂದ್ಯ/ ಗಿಲ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ

ಸಮಗ್ರ ನ್ಯೂಸ್‌: ಭಾರತ ಮತ್ತು ಜಿಂಬಾಬ್ವೆ ನಡುವಣ ಟಿ20 ಸರಣಿಯು ಇಂದಿನಿಂದ ಶುರುವಾಗಲಿದ್ದು, ಶುಭಮನ್ ಗಿಲ್ ನಾಯಕತ್ವಕ್ಕೆ ಅಗ್ನಿ ಪರೀಕ್ಷೆ ಸಮಯವಾಗಿದೆ. ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ಸಂಜೆ 4.30 ರಿಂದ ಶುರುವಾಗಲಿದೆ.

Ad Widget ... ..

ಟಿ20 ವಿಶ್ವಕಪ್ ತಂಡದಲ್ಲಿದ್ದ ಬಹುತೇಕ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಹೀಗಾಗಿ ಈ ಸರಣಿಗೆ ಯಂಗ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಐದು ಪಂದ್ಯಗಳ ಈ ಸರಣಿಯಲ್ಲಿ ಭಾರತ ತಂಡವನ್ನು ಯುವ ಆಟಗಾರ ಶುಭ್‌ಮನ್ ಗಿಲ್ ಮುನ್ನಡೆಸಲಿದ್ದಾರೆ. ಅದರಂತೆ ಇದೇ ಮೊದಲ ಬಾರಿಗೆ ರಿಯಾನ್ ಪರಾಗ್, ಅಭಿಷೇಕ್ ಶರ್ಮಾ, ಹರ್ಷಿತ್ ರಾಣಾ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

Ad Widget

ಭಾರತ ಮತ್ತು ಜಿಂಬಾಬ್ವೆ ಸರಣಿಯನ್ನು ಸೋನಿ ಸ್ಪೋರ್ಟ್ಸ್ ಚಾನೆಲ್ ನಲ್ಲಿ ವೀಕ್ಷಿಸಬಹುದು. ಹಾಗೆಯೇ ಸೋನಿ ಲೈವ್ ಆ್ಯಪ್‌ನಲ್ಲೂ ಈ ಪಂದ್ಯದ ನೇರ ಪ್ರಸಾರ ಇರಲಿದೆ. ಈ ಪಂದ್ಯವು ಸಂಜೆ 4.30 ರಿಂದ ಶುರುವಾಗಲಿದೆ.

Leave a Comment

Your email address will not be published. Required fields are marked *